ಕಾಂಗ್ರೆಸ್‌ ಹಿರಿಯ ಮುಖಂಡ ಮಾರುತಿರಾವ್ ಡಿ. ಮಾಲೆ ನಿಧನ

By Sathish Kumar KH  |  First Published Dec 26, 2023, 10:20 PM IST

ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಮಾರುತಿ ಡಿ ಮಾಲೆ (84) ನಿಧನರಾಗಿದ್ದಾರೆ.


ಕಲಬುರಗಿ (ಡಿ.26): ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಮಾರುತಿರಾವ್ ಡಿ ಮಾಲೆ (84) ನಿಧನರಾಗಿದ್ದಾರೆ.

ಕಾಂಗ್ರೆಸ್‌ ಹಿರಿಯ ಮುಖಂಡ ವಯೋಸಹಜ ಕಾಯಿಲೆಯಿಂದ  ನಿಧನರಾಗಿದ್ದಾರೆ. ಮೃತ ಮಾರುತಿ ಡಿ ಮಾಲೆ ಅವರು ಕರ್ನಾಟಕ ಪೀಪಲ್ಸ್ ಎಜ್ಯೂಕೇಶನ್ ಸೊಸೈಟಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಾಳೆ ಸ್ವಗ್ರಾಮ ಹಡಗಿಲ್ ಹಾರುತಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕಲಬುರಗಿ ತಾಲೂಕಿನ ಹಡಗಿಲ್ ಹಾರುತಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಸೇರಿದಂತೆ ಗಣ್ಯರು ಭಾಗಿಯಾಗುವ ಸಾಧ್ಯತೆಯಿದೆ.

Tap to resize

Latest Videos

click me!