
ಬೆಂಗಳೂರು (ಫೆ.9): ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ(CH Pratap Reddy) ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು.
ಆದರೆ ವೈಯಕ್ತಿಕ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬರುವ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.
ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇಂತಹ ಸಂದರ್ಭದಲ್ಲಿಯೇ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು ಪೊಲೀಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.
SSLC ಪರೀಕ್ಷಾ ವೇಳಾಪಟ್ಟಿಯಲ್ಲಿ ಮುಸ್ಲಿಂ ತುಷ್ಟೀಕರಣ ಟ್ವೀಟ್; ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ