
ವಿಧಾನಸಭೆ(ಫೆ.14): ಆಫ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ತಡೆ ಹಾಗೂ ಆನ್‌ಲೈನ್ ಮನಿ ಗೇಮಿಂಗ್‌ಗಳಿಗೆ ಕಡಿವಾಣ ಹಾಕಲು ಶೀಘ್ರ ಕಾಯ್ದೆ ಜಾರಿಗೆ ತರಲಾಗುವುದು ಎಂದು ಡಾ. ಜಿ.ಪರಮೇಶ್ವರ್ ತಿಳಿಸಿದರು.
ಕಾಂಗ್ರೆಸ್‌ನ ರವಿಕುಮಾರ್ ಗಣಿಗ ಅವರು ಕ್ರಿಕೆಟ್ ಬೆಟ್ಟಿಂಗ್ ಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೊಳಿಸುವಂತೆ ಗೃಹ ಸಚಿವರಲ್ಲಿ ಕೋರಿದರು. ಅದಕ್ಕೆ ಪಕ್ಷಾತೀತವಾಗಿ ಎಲ್ಲ ಶಾಸಕರು ಧ್ವನಿಗೂಡಿಸಿ, ಕ್ರಿಕೆಟ್ ಬೆಟ್ಟಿಂಗ್ ಜತೆಗೆ ಆನ್‌ಲೈನ್ ಮನಿ ಗೇಮಿಂಗ್‌ಗಳಿಗೂ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಕ್ಕೆ ಬೆಟ್ಟಿಂಗ್; ಸಿಸಿಬಿ ದಾಳಿ ವೇಳೆ ಒಂದು ಕೆಜಿ ಚಿನ್ನ ಪತ್ತೆ!
ಅದಕ್ಕುತ್ತರಿಸಿದ ಡಾ. ಪರಮೇಶ್ವರ್, ಕ್ರಿಕೆಟ್ ಬೆಟ್ಟಿಂಗ್ ದಂಧೆಯು ರಾಜ್ಯಾದ್ಯಂತ ನಡೆಯುತ್ತಿದೆ. ಇದರಲ್ಲಿ ಸಾವಿರಾರು ಕೋಟಿ ರು. ಹಣದ ವ್ಯವಹಾರ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾನೂನು ಕ್ರಮವನ್ನು ಬಿಗಿಗೊಳಿಸಲಾಗುವುದು. ಜತೆಗೆ ಆನ್‌ಲೈನ್ ಮನಿ ಗೇಮಿಂಗ್‌ಗಳಿಂದಲೂ ಯುವಕರು ಹಾಳಾಗುತ್ತಿದ್ದು, ಅವುಗಳಿಗೆ ಕಡಿವಾಣ ಹಾಕಲು ನಿರ್ಧರಿಸಲಾಗಿದೆ. ಒಟ್ಟಾರೆ ಬೆಟ್ಟಿಂಗ್ ಮತ್ತು ಆನ್‌ಲೈನ್ ಗೇಮಿಂಗ್ ಗಳ ನಿಯಂತ್ರಣಕ್ಕಾಗಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ