ಗೃಹಲಕ್ಷ್ಮಿಗೆ ಪ್ರತ್ಯೇಕ ಆ್ಯಪ್‌: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

By Kannadaprabha News  |  First Published Jun 25, 2023, 12:00 AM IST

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಯಾವ ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲೆಂದೇ ಆ್ಯಪ್‌ ರಚಿಸಿದ್ದೇವೆ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ, ನೀವು ಫಲಾನುಭವಿಗಳ ಪಟ್ಟಿಗೆ ಸೇರಿದಂತೆ ಎಂದು ಅವರು ತಿಳಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌ 


ಮೈಸೂರು(ಜೂ.25): ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್‌ ರೂಪಿಸಿದ್ದೇವೆ. ಅದೇ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ತಯಾರಿ ಮಾಡಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು.

ಆಷಾಢ ಮಾಸದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ.27ರಂದು ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗೆ ಆ್ಯಪ್‌ ತೋರಿಸಿ, ವಿವರಿಸಿಸುತ್ತೇವೆ. ನಂತರ ಅರ್ಜಿ ಸಲ್ಲಿಕೆಗೆ ಆ್ಯಪ್‌ ಬಿಡುಗಡೆ ಮಾಡುತ್ತೇವೆ. ಆಗಸ್ಟ್‌ 17ರ ಬಳಿಕ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತೇವೆ ಎಂದರು.

Latest Videos

undefined

ಕೇಂದ್ರದಿಂದ ಸರ್ವರ್‌ ಹ್ಯಾಕ್‌, ಕರ್ನಾಟಕದ ಯೋಜನೆಗಳಿಗೆ ಅಡ್ಡಿ ಯತ್ನ: ಜಾರಕಿಹೊಳಿ

ಸಂಪನ್ಮೂಲ ಇದೆ: 

ಸರ್ಕಾರದ ಗೃಹಲಕ್ಷ್ಮಿ ಯೋಜನೆ ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲಾ ರೀತಿಯ ಸಂಪನ್ಮೂಲ ನಮ್ಮ ಬಳಿ ಇದೆ ಎಂದು ಅವರು ಸ್ಪಷ್ಟಪಡಿಸಿದರು.

ಯಾವುದೇ ಶುಲ್ಕವಿಲ್ಲ: 

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಯಾವ ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲೆಂದೇ ಆ್ಯಪ್‌ ರಚಿಸಿದ್ದೇವೆ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ, ನೀವು ಫಲಾನುಭವಿಗಳ ಪಟ್ಟಿಗೆ ಸೇರಿದಂತೆ ಎಂದು ಅವರು ತಿಳಿಸಿದರು.

ಹರಕೆ ತೀರಿಸಿದ ಸಚಿವೆ: 

ಕಾಂಗ್ರೆಸ್‌ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ ಎಂದು ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿ, ದೇವಿ ಮುಂದೆ ಸೆರೆಗೊಡ್ಡಿ ಬೇಡಿಕೊಂಡಿದ್ದೆ. ಇದೀಗ ಅಧಿಕಾರಕ್ಕೆ ಬಂದಿದ್ದೇವೆ. ಹಾಗಾಗಿ ಚಾಮುಂಡಿಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

click me!