ದಾವಣಗೆರೆ, ದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ರಚನೆ: ಸಚಿವ ಮಲ್ಲಿಕಾರ್ಜುನ್‌ ಭರವಸೆ

By Kannadaprabha News  |  First Published Aug 14, 2023, 2:08 PM IST

ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ದಾವಣಗೆರೆ-ಚಿತ್ರದುರ್ಗ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ರಚಿಸಿ, ಹಾಲು ಉತ್ಪಾದಕರಿಗೆ ಹಸು ಖರೀದಿಸಲು 40 ಸಾವಿರ ರು. ಸಬ್ಸಿಡಿ ನೀಡಲಾಗುವುದು ಎಂದು ಗಣಿ, ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಭರವಸೆ ನೀಡಿದರು.


ದಾವಣಗೆರೆ (ಆ.14) :  ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ದಾವಣಗೆರೆ-ಚಿತ್ರದುರ್ಗ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ರಚಿಸಿ, ಹಾಲು ಉತ್ಪಾದಕರಿಗೆ ಹಸು ಖರೀದಿಸಲು 40 ಸಾವಿರ ರು. ಸಬ್ಸಿಡಿ ನೀಡಲಾಗುವುದು ಎಂದು ಗಣಿ, ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಭರವಸೆ ನೀಡಿದರು.

ನಗರದ ಶಾಮನೂರು ರಸ್ತೆಯಲ್ಲಿನ ಬಾಪೂಜಿ ಬ್ಯಾಂಕ್‌ ಸಮುದಾಯ ಭವನದಲ್ಲಿ ಭಾನುವಾರ ದಾವಣಗೆರೆ ಜಿಲ್ಲಾ ಸಹಕಾರಿಗಳಿಂದ ಹಮ್ಮಿಕೊಂಡಿದ್ದ ನೂತನ ಸಚಿವರು, ಶಾಸಕರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ಪ್ರತ್ಯೇಕ ಹಾಲು ಒಕ್ಕೂಟ ರಚನೆಯಿಂದ ಗ್ರಾಮೀಣ ಪ್ರದೇಶದ ಜನರು ಆರ್ಥಿಕವಾಗಿ ಅಭಿವೃದ್ಧಿಯಾಗುತ್ತಾರೆ. ಹಾಲು ಒಕ್ಕೂಟದ ಸದಸ್ಯರು ಮತ್ತು ಡಿಸಿಸಿ ಬ್ಯಾಂಕ್‌ ನಿರ್ದೇಶಕರು ಜನರಿಗೆ ಒಳ್ಳೆಯ ಸೇವೆ ನೀಡಿದ್ದೇ ಆದಲ್ಲಿ ಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗಲಿದ್ದಾರೆ ಎಂದು ತಿಳಿಸಿದರು.

Tap to resize

Latest Videos

ಬಿಜೆಪಿ ತಡೆದ ಯೋಜನೆಗೆ ಮತ್ತೆ ಚಾಲನೆ ನೀಡುವೆ: ಸಚಿವ ಮಲ್ಲಿಕಾರ್ಜುನ

ರೈತರು ಅರ್ಜಿ ಹಾಕಿದ ತಕ್ಷಣ ಸೌಲಭ್ಯ ಮುಟ್ಟಬೇಕು. ಬ್ಯಾಂಕ್‌ ಆಡಳಿತ ಸಂಪೂರ್ಣ ಗಣಕೀಕೃತವಾಗಬೇಕೆಂದು ಈ ಹಿಂದೆಯೇ ಹೇಳಿದ್ದೆ. ಆದರೆ ಇದುವರೆಗೂ ಅದು ಆಗಿಲ್ಲ. ಉತ್ತರ ಕರ್ನಾಟಕದ ಡಿಸಿಸಿ ಬ್ಯಾಂಕ್‌ಗಳು 500 ಕೋಟಿ ರು.ವರೆಗೂ ಲಾಭಗಳಿಸಿವೆ. ಅದೇ ಮಾದರಿಯಲ್ಲಿ ದಾವಣಗೆರೆ ಬ್ಯಾಂಕ್‌ ಕೂಡ ಮಾಡಬೇಕು. ಇದಕ್ಕೆ ಎಲ್ಲ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಕರ್ನಾಟಕ ಸಹಕಾರಿ ಕ್ಷೇತ್ರದಲ್ಲಿ ಹಿಂದಿದೆ:

ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಹಕಾರಿ ಕ್ಷೇತ್ರದ ಮೇಲೆ ಜನರು ಹೆಚ್ಚು ನಂಬಿಕೆ ಇಟ್ಟಿದ್ದಾರೆ. ಬಾಪೂಜಿ ಬ್ಯಾಂಕೊಂದರಲ್ಲಿಯೇ ಜನರು 800 ಕೋಟಿ ರು. ಠೇವಣಿ ಇಟ್ಟಿದ್ದಾರೆ. ಈ ರೀತಿಯಲ್ಲಿ ಸಹಕಾರಿ ಬ್ಯಾಂಕ್‌ಗಳು ಜನರ ವಿಶ್ವಾಸ ಉಳಿಸಿಕೊಳ್ಳಬೇಕು. ಗುಜರಾತ್‌, ಮಹಾರಾಷ್ಟ್ರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟುಹಿಂದೆ ಇದೆ. ಜನರು ಸಹಕಾರಿ ಕ್ಷೇತ್ರದ ಅನುಕೂಲಗಳನ್ನು ಇನ್ನೂ ಹೆಚ್ಚಾಗಿ ಪಡೆಯಬೇಕಿದೆ ಎಂದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಜೆ.ಆರ್‌.ಷಣ್ಮುಖಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯರ ಮಾರ್ಗದರ್ಶನದಲ್ಲಿ ಜಿಲ್ಲೆಯ ಸಹಕಾರಿ ಕ್ಷೇತ್ರ ಮುನ್ನೆಡೆಸಿಕೊಂಡು ಹೋಗುತ್ತಿದ್ದೇವೆ. ಡಿಸಿಸಿ ಬ್ಯಾಂಕಿನಿಂದ 1,100 ಕೋಟಿ ರು.ಸಾಲ ನೀಡಲಾಗಿದೆ. ಜಿಲ್ಲೆಯ ಸಹಕಾರಿ ಕ್ಷೇತ್ರ ಇನ್ನೂ ಅಭಿವೃದ್ಧಿ ಕಾಣಲು ಎಲ್ಲ ಸಚಿವರು ಮತ್ತು ಶಾಸಕರ ಸಹಕಾರ ಅಗತ್ಯವಾಗಿದೆ ಎಂದರು.

ಶಾಸಕರಾದ ಬಸವರಾಜ ಶಿವಗಂಗಾ, ಕೆ.ಎಸ್‌.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಿ.ಪಿ.ಹರೀಶ್‌, ಡಿ.ಜಿ.ಶಾಂತನಗೌಡರ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಹರಿಹರ ಮಾಜಿ ಶಾಸಕ ಎಸ್‌.ರಾಮಪ್ಪ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬಿ.ಹಾಲೇಶಪ್ಪ, ಹಿರಿಯ ಸಹಕಾರಿ ಧುರೀಣ ಎನ್‌.ಜಿ.ಪುಟ್ಟಸ್ವಾಮಿ ಸೇರಿ ಇತರರಿದ್ದರು.

ಕಾಂಗ್ರೆಸ್ಸಿಂದ ದೇಶದ ಆರ್ಥಿಕತೆ ಸದೃಢ: ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ

ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ದುಡಿಯಿರಿ: ಸಚಿವ ಎಸ್ಸೆಸ್ಸೆಂ

ಜಿಲ್ಲೆಯ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ಶಾಸಕರು ದುಡಿಯಬೇಕೆನ್ನುವುದು ಜಿಲ್ಲೆಯ ಎಲ್ಲ ಸಹಕಾರಿಗಳ ಆಶಯ. ಡಿಸಿಸಿ ಬ್ಯಾಂಕ್‌, ಜಿಲ್ಲಾ ಸಹಕಾರಿ ಒಕ್ಕೂಟ, ಹಾಲು ಒಕ್ಕೂಟಗಳು ಒಳ್ಳೆಯ ಕೆಲಸ ಮಾಡುತ್ತಿವೆ. ಸಹಕಾರಿ ಒಕ್ಕೂಟಕ್ಕೆ ಈ ಹಿಂದೆಯೇ ನಿವೇಶನ ನೀಡಲಾಗಿತ್ತು. ಆದರೆ ಅದು ಏನಾಯಿತು ಗೊತ್ತಿಲ್ಲ. 2001ರಲ್ಲಿ ಡಿಸಿಸಿ ಬ್ಯಾಂಕ್‌ ತುಂಬಾ ಹೋರಾಟ ಮಾಡಿ ಜಿಲ್ಲೆಗೆ ತರಲಾಯಿತು. ಆರಂಭದಲ್ಲಿ ಠೇವಣಿ ಕೂಡ ಇರಲಿಲ್ಲ. ಬಾಪೂಜಿ ಸೇರಿ ವಿವಿಧ ಬ್ಯಾಂಕ್‌ಗಳಿಂದ 100 ಕೋಟಿ ರು. ಠೇವಣಿ ಮಾಡಿಸಲಾಯಿತು. ಆದರೆ ಡಿಸಿಸಿ ಬ್ಯಾಂಕ್‌ ಈಗ ಅಷ್ಟುಪರಿಣಾಮಕಾರಿಯಾಗಿ ನಡೆಯುತ್ತಿಲ್ಲ. ರೈತರಿಗೆ ಸಾಲ ಸೌಲಭ್ಯ ಅಚ್ಚುಕಟ್ಟಾಗಿ ತಲುಪಿಸಿ, ರೈತರ ಸತಾಯಿಸದಿರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಸಲಹೆ ನೀಡಿದರು.

click me!