ಇಕೋ ಟೂರಿಸಂ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರಚನೆ: ಸಚಿವ ಈಶ್ವರ್‌ ಖಂಡ್ರೆ

Published : Sep 03, 2023, 02:00 AM IST
ಇಕೋ ಟೂರಿಸಂ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರಚನೆ: ಸಚಿವ ಈಶ್ವರ್‌ ಖಂಡ್ರೆ

ಸಾರಾಂಶ

ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರತ್ಯೇಕ ನೀತಿ ರೂಪಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಂಗಳೂರು (ಸೆ.03): ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರತ್ಯೇಕ ನೀತಿ ರೂಪಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದೆ. ಅದರ ಸಮರ್ಪಕ ಬಳಕೆ ಮಾಡಿಕೊಳ್ಳಬೇಕಿದೆ. ಅದಕ್ಕಾಗಿ ಪ್ರಕೃತಿ, ಪರಿಸರ ಮತ್ತು ಅರಣ್ಯ ನಾಶವಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಹೊಸ ನೀತಿ ತರಲಾಗುತ್ತಿದೆ. ಅದಕ್ಕೆ ಸಂಬಂಧಿಸಿದಂತೆ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. 

ಮುಂದಿನ 2 ತಿಂಗಳೊಳಗಾಗಿ ಯಾವೆಲ್ಲ ಸ್ಥಳಗಳಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬಹುದು ಎಂಬ ಪಟ್ಟಿಯ ಜತೆಗೆ ಕರಡು ನೀತಿ ರೂಪಿಸಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಸಾಹಸ ಪ್ರವಾಸೋದ್ಯಮವನ್ನೂ ಪರಿಸರ ಪ್ರವಾಸೋದ್ಯಮದ ಭಾಗವನ್ನಾಗಿ ಮಾಡುವ ಚಿಂತನೆಯಿದೆ. ಆ ಬಗ್ಗೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಅದರಿಂದ ಪರಿಸರ ಪ್ರವಾಸೋದ್ಯಮದ ಕಡೆಗೆ ಹೆಚ್ಚಿನ ಜನರನ್ನು ಆಕರ್ಷಿಸಬಹುದು. ಅರಣ್ಯ ಪ್ರದೇಶದೊಳಗೆ ಸಾಹಸ ಪ್ರವಾಸೋದ್ಯಮ ಆರಂಭಿಸಲು ಇರುವ ಸ್ಥಳಗಳನ್ನು ಗುರುತಿಸಲಾಗುವುದು. 

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾಗಿರಿ, ದಬ್ಬಾಳಿಕೆ ಆರಂಭ: ರೂಪಾಲಿ ನಾಯ್ಕ

ಜತೆಗೆ ರಾಜ್ಯದ ಕರಾವಳಿ ಪ್ರದೇಶದಲ್ಲಿ ಖಾಸಗಿ ಬಂಡವಾಳ ಹೂಡಿಕೆ ಮಾಡುವ ಮೂಲಕ ಪರಿಸರ ಪ್ರವಾಸೋದ್ಯಮ ಆರಂಭಿಸಬಹುದಾಗಿದೆ. ಈ ಎಲ್ಲವನ್ನೊಳಗೊಂಡ ನೀತಿ ರೂಪಿಸಿ ಸಮಗ್ರ ವರದಿ ಸಲ್ಲಿಸುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು. ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಕ್ತರ್‌, ಹಿರಿಯ ಐಎಎಸ್‌ ಅಧಿಕಾರಿಗಳಾದ ಕಪಿಲ್‌ ಮೋಹನ್‌, ಮಂಜುನಾಥ್‌ ಪ್ರಸಾದ್‌, ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳಾದ ರಾಜೀವ್‌ ರಂಜನ್‌, ಕುಮಾರ್‌ ಪುಷ್ಕರ್‌, ಸಂಜಯ್‌ ಬಿಜ್ಜೂರ್‌, ಸುಭಾಷ್‌ ಮಾಲ್ಕೆಡೆ ಇತರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ