ಸಿದ್ದರಾಮಯ್ಯ ಸರ್ಕಾರದಿಂದ ಐಎಎಸ್ ಅಧಿಕಾರಿಗಳ 'ಜೀತ ಪದ್ಧತಿ' ಜಾರಿ: ಎಚ್‌ಡಿಕೆ ಟ್ವೀಟ್ ಮೂಲಕ ಕಿಡಿ

By Ravi Janekal  |  First Published Jul 18, 2023, 9:52 AM IST

ಮಹಾಘಟಬಂಧನ್ ಸಭೆಗೆ ಬೆಂಗಳೂರಿಗೆ ಆಗಮಿಸಿರುವ ಹೊರರಾಜ್ಯದ ರಾಜಕಾರಣಿಗಳ ಸೇವೆ ಮಾಡಲು ನಮ್ಮ ರಾಜ್ಯದ  ಐಎಎಸ್ ಅಧಿಕಾರನ್ನು ಕಳಿಸುವ ಮೂಲಕ ಕರ್ನಾಟಕದ ಹೆಮ್ಮೆ, ಪರಂಪರೆ ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. 


ಬೆಂಗಳೂರು (ಜು.18) : ಮಹಾಘಟಬಂಧನ್ ಸಭೆಗೆ ಬೆಂಗಳೂರಿಗೆ ಆಗಮಿಸಿರುವ ಹೊರರಾಜ್ಯದ ರಾಜಕಾರಣಿಗಳ ಸೇವೆ ಮಾಡಲು ನಮ್ಮ ರಾಜ್ಯದ  ಐಎಎಸ್ ಅಧಿಕಾರನ್ನು ಕಳಿಸುವ ಮೂಲಕ ಕರ್ನಾಟಕದ ಹೆಮ್ಮೆ, ಪರಂಪರೆ ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. 

ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಐಎಎಸ್ ಅಧಿಕಾರಿಗಳನ್ನ ಬಳಸಿಕೊಂಡಿರುವುದನ್ನು ತೀವ್ರವಾಗಿ ಖಂಡಿಸಿರುವ ಕುಮಾರಸ್ವಾಮಿ ಅವರು  ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.

Tap to resize

Latest Videos

 

ಉಚಿತ ಅಕ್ಕಿ ಕೊಡುವ ಪ್ರಮೇಯ ಏನಿದೆ?: ಸಿಎಂ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಅತಿಥ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದಿದ್ದಾರೆ.

ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ ಎಂದಿದ್ದಾರೆ. 

ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ ಎಂದು ಆಗ್ರಹಿಸಿದ್ದಾರೆ.

ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ 'ಐಎಎಸ್ ಜೀತ ಪದ್ಧತಿ'ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ 'ರಾಜಕೀಯ, ಆಡಳಿತ ವಸಾಹತುಶಾಹಿ'ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ ಎಂದು ವಾಗ್ದಾಳಿ ನಡೆಸಿದ್ದಾರೆ. 

26 ಪ್ರತಿಪಕ್ಷಗಳಿಂದ ‘ಗೇಮ್‌ ಚೇಂಜರ್‌’ ಸಭೆ! ‘ಯುನೈಟೆಡ್‌ ವಿ ಸ್ಟ್ಯಾಂಡ್‌’ ಘೋಷವಾಕ್ಯದಡಿ ಸಮಾಲೋಚನೆ

135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ಕಿಡಿಕಾರಿದ್ದಾರೆ. 

click me!