
ನವದೆಹಲಿ (ಅ.28) ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಹೆಚ್ಚಾಗುತ್ತಿದೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗಿಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ವಿನಯ್ ಕುಲಕರ್ಣಿ ಇದೀಗ ಮತ್ತೊಂದು ಹಿನ್ನಡೆ ಅನುಭವಿಸಿದ್ದಾರೆ. ವಿನಯ್ ಕುಲಕರ್ಣಿ ಮೇಲಿದ್ದ ಸಾಕ್ಷಿ ನಾಶ ಪ್ರಕರಣವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸಿಬಿಐ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್, ವಿನಯ್ ಕುಲಕರ್ಣಿ ಮೇಲಿನ ಸಾಕ್ಷಿ ನಾಶ ಪ್ರಕರಣ ಎತ್ತಿಹಿಡಿದೆ.
ಯೋಗಿಶಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷಿ ನಾಶ ಆರೋಪ ವಿನಯ ಕುಲಕರ್ಣಿ ಮೇಲೆ ಹೊರಿಸಲಾಗಿತ್ತು. ಆದರೆ ಹೈಕೋರ್ಟ್ ಈ ಹಿಂದೆ ವಿನಯ ಕುಲಕರ್ಣಿ ಮೇಲಿದ್ದ ಸಾಕ್ಷಿ ನಾಶ ಪ್ರಕರಣ ವಜಾ ಮಾಡಿತ್ತು. ಈ ತೀರ್ಪಿನ ವಿರುದ್ದ ಸಿಬಿಐ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಧಾರಾವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ವಿನಯ್ ಕುಲಕರ್ಣಿ ಸದ್ಯ ಸೆರೆಮನೆ ವಾಸದಲ್ಲಿದ್ದಾರೆ. 2016 ಜೂನ್ 15ರಂದು ಯೋಗೇಶ್ ಗೌಡ ಹತ್ಯೆಯಾಗಿತ್ತು. ಈ ಪ್ರಕರಣ ಕರ್ನಾಟಕದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ತನಿಖೆ ಆರಂಭಿಸಿದ ಸಿಬಿಐ, ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪಾತ್ರವಿರುವ ಅನುಮಾನದ ಹಿನ್ನಲೆಯಲ್ಲಿ ಸಿಬಿಐ ಅರೆಸ್ಟ್ ಮಾಡಿತ್ತು. ವಿನಯ್ ಕುಲಕರ್ಣಿ ಬಂಧನ ರಾಜ್ಯ ರಾಜಕರಾಣದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. 2020ರ ನವೆಂಬರ್ 5 ರಂದು ವಿನಯ್ ಕುಲಕರ್ಣಿ ಬಂಧನ ಕೋಲಾಹಲ ಸೃಷ್ಟಿಸಿತ್ತು.
ಜೈಲು ಸೇರಿದ ವಿನಯ್ ಕುಲಕರ್ಣಿ ಜಾಮೀನು ಪ್ರಯತ್ನಗಳು ನಡೆದಿತ್ತು. ಆದರೆ ಬಾರಿ ಹಿನ್ನಡೆಯಾಗಿತ್ತು. ಕೊನೆಗೆ ಸುಪ್ರೀಂ ಕೋರ್ಟ್‌ನಿಂದ ವಿನಯ್ ಕುಲಕರ್ಣಿ ಜಾಮೀನು ಪಡೆದು ಹೊರಬಂದಿದ್ದರು. ಆದರೆ ಈ ವೇಳೆ ಸಿಬಿಐ ಅಧಿಕಾರಿಗಳು ಆರೋಪಿ ಪ್ರಭಾವಿಯಾಗಿರುವ ಕಾರಣ ಸಾಕ್ಷ್ಯಿ ನಾಶದ ಆತಂಕ ವ್ಯಕ್ತಪಡಿಸಿತ್ತು. ಹೀಗಾಗಿ ಜಾಮೀನು ನಿರಾಕರಿಸುವಂತೆ ಸೂಚಿಸಿತ್ತು. ಆದರೆ ಜಾಮೀನು ಮಂಜೂರು ಮಾಡಲಾಗಿತ್ತು. ಇತ್ತ ಸಾಕ್ಷಿ ನಾಶದ ಕಾರಣ ಗಂಭೀರ ಆರೋಪವನ್ನು ಸಿಬಿಐ ವಿನಯ್ ಕುಲಕರ್ಣಿ ಮೇಲೆ ಹೊರಿಸಿತ್ತು. ಆಧರೆ ವಿನಯ್ ಕುಲಕರ್ಣಿ ಹೈಕೋರ್ಟ್ ಮೂಲಕ ಸಾಕ್ಷಿ ನಾಶ ಪ್ರಕರಣವನ್ನು ವಜಾಗೊಳಿಸುವಲ್ಲಿ ವಿನಯ್ ಕುಲಕರ್ಣಿ ಯಶಸ್ವಿಯಾಗಿದ್ದರು.
ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದ ಜಾಮೀನು ರದ್ದು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ಜೂನ್ ತಿಂಗಳಲ್ಲಿ ವಿನಯ್ ಕುಲಕರ್ಣಿ ಜಾಮೀನು ರದ್ದು ಮಾಡಿತ್ತು. ಜೂನ್ 6 ರಂದು ಜಾಮೀನು ರದ್ದುಗೊಳಿಸಿದ ಕೋರ್ಟ್, ಒಂದು ವಾರದಲ್ಲಿ ಜನಪ್ರತಿನಿದಿಗಳ ವಿಶೇಷ ನ್ಯಾಯಾಲದ ಎದರು ಶರಣವಾಗುವಂತೆ ಸೂಚಿಸಿತ್ತು. ಇದರಂತೆ ಜೂನ್ 14 ರಂದು ವಿನಯ್ ಕುಲಕರ್ಣಿ ಶರಣಾಗಿದ್ದರು. ಬಳಿಕ ಸಿಬಿಐ ವಿನಯ್ ಕುಲಕರ್ಣಿ ವಶಕ್ಕೆ ಪಡೆದು ನ್ಯಾಯಾಲಯದ ಎದರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ