ಲೈಂಗಿಕ ಕಿರುಕುಳ ಕೇಸ್: ಜು.15ಕ್ಕೆ ಹಾಜರಾಗಲು ಬಿ.ಎಸ್.ಯಡಿಯೂರಪ್ಪಗೆ ಸಮನ್ಸ್‌

By Kannadaprabha News  |  First Published Jul 5, 2024, 2:59 PM IST

ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಜು.15ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪ್ರಕರಣದ ಇತರೆ ಮೂವರು ಆರೋಪಿಗಳಿಗೆ ನಗರದ ಪೋಕ್ಸೋ ವಿಶೇಷ ನ್ಯಾಯಾಲಯ ಗುರುವಾರ ಸಮನ್ಸ್ ಜಾರಿಗೊಳಿಸಿದೆ. 
 


ಬೆಂಗಳೂರು (ಜು.05): ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಜು.15ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪ್ರಕರಣದ ಇತರೆ ಮೂವರು ಆರೋಪಿಗಳಿಗೆ ನಗರದ ಪೋಕ್ಸೋ ವಿಶೇಷ ನ್ಯಾಯಾಲಯ ಗುರುವಾರ ಸಮನ್ಸ್ ಜಾರಿಗೊಳಿಸಿದೆ. 

ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಸಿಐಡಿ ಪೊಲೀಸರು 2024ರ ಜೂ.27ರಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿರುವ ಬೆಂಗಳೂ ರಿನ 1ನೇ ತ್ವರಿತಗತಿ ನ್ಯಾಯಾಲಯದ (ಪೋಕ್ಲೋ ಕೋರ್ಟ್‌) ನ್ಯಾಯಾಧೀಶರಾದ ಎನ್.ಎಂ.ರಮೇಶ್ ಅವರು ಯಡಿಯೂರಪ್ಪ, ವೈ.ಎಂ.ಅರುಣ್, ಎಂ.ರುದ್ರೇಶ್ ಮತ್ತು ವೈ.ಮರಿ ಸ್ವಾಮಿ ಅವರಿಗೆ ಸಮನ್ಸ್‌ ಜಾರಿಗೊಳಿಸಿ ಜು.15ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

Latest Videos

undefined

ಸಿಎಂ ಸಿದ್ದು ತಾಕತ್ತಿದ್ದರೆ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಬನ್ನಿ: ಬಿ.ಎಸ್.ಯಡಿಯೂರಪ್ಪ

750 ಪುಟಗಳ ಆರೋಪಪಟ್ಟಿ: ಯಡಿಯೂರಪ್ಪ ಅವರು ತಮ್ಮ ಧವಳಗಿರಿ ನಿವಾಸದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ' ಎಂದು ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಕಳೆದ ವಾರವಷ್ಟೇ 750 ಪುಟಗಳಷ್ಟು ಸುದೀರ್ಘವಾದ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಪೋಕ್ಸೊ ಪ್ರಕರಣದ ಹಿನ್ನೆಲೆಯೇನು?: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ-2012ರ ಕಲಂ 8ರ ಅಡಿಯಲ್ಲಿ ಲೈಂಗಿಕ ದೌರ್ಜನ್ಯ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 354 (ಎ)ರ ಅಡಿಯಲ್ಲಿ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದೆ. ಅವರ ಸಹಚರರಾದ ಇತರ ಮೂವರ ವಿರುದ್ಧ ಐಪಿಸಿ ಕಲಂ 204 ಮತ್ತು 214ರ ಅಡಿಯಲ್ಲಿ ಕ್ರಮವಾಗಿ ಸಾಕ್ಷ್ಯ ನಾಶಪಡಿಸಲು ಮತ್ತು ಉಡುಗೊರೆಗಳನ್ನು ನೀಡಲು ಮುಂದಾದ ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವ‌ರ್‌ ಬಿಜೆಪಿ ಅಭ್ಯರ್ಥಿಯಾದ್ರೂ ಜೆಡಿಎಸ್ ಬೆಂಬಲ!

ಪೋಕ್ಸೊ ಪ್ರಕರಣದ ಎಫ್‌ಐಆರ್‌ ರದ್ದುಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕು' ಎಂಬ ಪ್ರಾಸಿಕ್ಯೂಷನ್‌ ಮನವಿಯನ್ನು ಕಳೆದ ವಾರವಷ್ಟೇ ಪರಿಗಣಿಸಿದ್ದ ಹೈಕೋರ್ಟ್‌ನ, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರು ಮುಂದಿನ ವಿಚಾರಣೆವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನಿರ್ದೇಶಿಸಿದ್ದರು. ಹಾಗಾಗಿ ಅವರು ಸದ್ಯ ಬಂಧನ ಭೀತಿಯಿಂದ ಪಾರಾಗಿದ್ದಾರೆ.

click me!