ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಸಂಸ್ಥೆ ಉಳಿಯಬೇಕೆಂದರೆ ಶೇ.20 ಟಿಕೆಟ್ ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದು ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.
ಬೆಂಗಳೂರು/ ತುಮಕೂರು (ಜು.14): ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಿಲ್ಲ. ಈಗ ಟಿಕೆಟ್ ದರ ಹೆಚ್ಚಳ ಮಾಡದಿದ್ದರೆ ನಿಗಮಕ್ಕೆ ಉಳಿಗಾಲವಿಲ್ಲ. ಹೀಗಾಗಿ, ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದು ಕೆಎಸ್ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಭಾನುವಾರ ಮಾತನಾಡಿದ ಅವರು, ಕಳೆದೆರೆಡು ದಿನಗಳ ಹಿಂದೆ ಕೆಎಸ್‌ಆರ್‌ಟಿಸಿ ಬೋರ್ಡ್ ಮೀಟಿಂಗ್ ಮಾಡಲಾಗಿದ್ದು, ಅದರಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ವಿಚಾರದ ಬಗ್ಗೆ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈ ಹಿಂದೆ ಹಿಂದೆ 2019 ರಲ್ಲಿ ಬಸ್ ಟಿಕೇಟ್ ದರ ಹೆಚ್ಚಳ ಆಗಿತ್ತು. ಆದರೆ, ಇಲ್ಲಿ ತನಕ ಟಿಕೆಟ್ ದರ ಹೆಚ್ಚಳ ಮಾಡದೆ 5 ವರ್ಷ ಆಗಿದೆ. ತೈಲ ಬೆಲೆ ಏರಿಕೆ ಯಾಗಿರುವುದರಿಂದ ದರ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದರು.
undefined
ಉಡುಪಿ ಆಪತ್ಬಾಂಧವ ಆಸಿಫ್ ಕರಾಳಮುಖ ತೆರೆದಿಟ್ಟ ಪತ್ನಿ ಶಬನಮ್!
ಇನ್ನು ಕೆಎಸ್‌ಆರ್‌ಟಿಸಿ ನೌಕರರಿಗೆ ಸಂಬಳ ಹೆಚ್ಚಳ ಮತ್ತು ಇತರೆ ಸವಲತ್ತುಗಳನ್ನು ಕೊಡಬೇಕಾದರೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. 2020ರಲ್ಲಿಯೇ ಕೆಎಸ್‌ಆರ್‌ಟಿಸಿ ನೌಕರರ ವೇತನ ಪರಿಷ್ಕರಣೆ ಮಾಡಬೇಕಿತ್ತು. ಆದರೆ, ಬಸ್ ಟಿಕೆಟ್ ದರ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಆರ್ಥಿಕ ಸಮಸ್ಯೆ ಉಂಟಾಗಬಾರದೆಂಬ ದೃಷ್ಟಿಯಿಂದ ಇಲ್ಲಿಯವರೆಗೂ ನೌಕರರ ವೇತನ ಪರಿಷ್ಕರಣೆ ಮಾಡಿಲ್ಲ. ಈ ಬಾರಿ 2024ರಲ್ಲಿ ವೇತನ ಪರಿಷ್ಕರಣೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ನಿಗಮದಗಳ ಬಸ್ ದರ ಹೆಚ್ಚಳ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಕಾಲಕಾಲಕ್ಕೆ ಬಸ್ ಟಿಕೆಟ್ ದರಗಳನ್ನು ಹೆಚ್ಚಳ ಮಾಡಿದ್ದರೆ ಹೀಗೆಲ್ಲ ಆಗ್ತಿರಲಿಲ್ಲ. ಕಳೆದ ತ್ರೈ ಮಾಸಿಕದಲ್ಲಿ ಕೆಎಸ್‌ಆರ್‌ಟಿಸಿಗೆ 295 ಕೋಟಿ ರೂ. ನಷ್ಟ ಆಗಿದೆ. ಜೊತೆಗೆ 40 ಹೊಸ ವೋಲ್ವೋ ಬಸ್‌ಗಳಿಗೆ ಪ್ರಸ್ಥಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೆ 600 ಸಾಮಾನ್ಯ ಬಸ್‌ಗಳನ್ನು ಖರೀದಿ ಮಾಡಲಾಗಿದೆ. ಆದ್ದರಿಂದ ಶೇ.15ರಿಂದ ಶೇ.20ರಷ್ಟು ಟಿಕೆಟ್ ದರ ಹೆಚ್ಚಳ ಮಾಡಲು ಪ್ರಸ್ಥಾವನೆ ಸಲ್ಲಿಸಲಾಗಿದೆ. ನಾವು ಮಾಡಬೇಕಾದ ಕಾರ್ಯಘಲನ್ನು ಮಾಡಿದ್ದು, ಉಳಿದದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
ಆದಾಯ ತರುವ ಸಾರಿಗೆ ಇಲಾಖೆಯಲ್ಲೇ 50% ಹುದ್ದೆ ಖಾಲಿ..!
ಇನ್ನು ಬಸ್ ಟಿಕೆಟ್ ದರ ಜಾಸ್ತಿ ಮಾಡಿರುವುದರಿಂದ ಪುರುಷ ಪ್ರಯಾಣಿಕರಿಗೆ ಹೊರೆಯಾಗುತ್ತದೆ ಅನ್ನೋ ಪ್ರಶ್ನೇನೆ ಇಲ್ಲ. ಇಲ್ಲಿ ಶಕ್ತಿ ಯೋಜನೆಯಲ್ಲಿನ ಮಹಿಳಾ ಪ್ರಯಾಣಿಕರ ಟಿಕೆಟ್ ದರವೂ ಹೆಚ್ಚಳವಾಗುತ್ತದೆ. ಆದರೆ, ಈ ಹಣವನ್ನು ಸರ್ಕಾರ ಭರಿಸುತ್ತದೆ. ಕೆಎಸ್‌ಆರ್‌ಟಿಸಿ ಸಂಸ್ಥೆ ಉಳಿಯ ಬೇಕಾದರೆ ದರ ಹೆಚ್ಚಳ ಅನಿವಾರ್ಯ ಎಂದು ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.