ಶಕ್ತಿ ಯೋಜನೆ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಾಗರೋಪಾದಿಯಲ್ಲಿ ಹರಿದು ಬಂದ ಮಹಿಳಾ ಭಕ್ತರು!

By Ravi JanekalFirst Published Jun 17, 2023, 10:18 AM IST
Highlights

ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಮಹಿಳೆಯರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ

ಮಂಗಳೂರು (ಜೂ.17) :ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಮಹಿಳೆಯರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ

ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಅವಕಾಶ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಾಗರೋಪಾದಿಯಲ್ಲಿ ಹರಿದು ಬಂದ ಮಹಿಳಾ ಭಕ್ತರು. ಉಚಿತ ಪ್ರಯಾಣ ಘೋಷಣೆ ಬಳಿಕದ ಮೊದಲ ವೀಕೆಂಡ್ ಹಿನ್ನಲೆ ಸರ್ಕಾರಿ ಬಸ್‌ಗಳು ಫುಲ್ ರಶ್.  ಧರ್ಮಸ್ಥಳಕ್ಕೆ ಹೋಗುವ ಎಲ್ಲ ಬಸ್‌ಗಳು ತುಂಬಿತುಳುಕುತ್ತಿವೆ. ಮಹಿಳೆಯರು, ಯುವತಿಯರಿಂದಲೇ ತುಂಬಿದ ಧರ್ಮಸ್ಥಳ ಬಸ್.

Latest Videos

ಶಕ್ತಿ ಯೋಜನೆಯ ಪರಿಣಾಮ; ಮಹಿಳಾ ಪ್ರಯಾಣಿಕರ ಸಂಖ್ಯೆ ಶೇ.40 ರಿಂದ 60ಕ್ಕೆ ಹೆಚ್ಚಳ!

ಉತ್ತರ ಕರ್ನಾಟಕ ಭಾಗದಿಂದ ಹೆಚ್ಚು ಪ್ರಯಾಣ:

ಉಚಿತ ಪ್ರಯಾಣ ಬಳಿಕ ಪುಣ್ಯಕ್ಷೇತ್ರಗಳ ದರ್ಶನಕ್ಕೆ ಮಹಿಳೆಯರು ಹೊರಡುತ್ತಿದ್ದು ಅದರಲ್ಲೂ ಉತ್ತರ ಕರ್ನಾಟಕ ಭಾಗದಿಂದ ಹೆಚ್ಚು ಮಹಿಳೆಯರು ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನಕ್ಕೆ ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ.  ಹೀಗಾಗಿ ಈ ಮಾರ್ಗದ ಎಲ್ಲ ಬಸ್ ಗಳು ಪ್ರಯಾಣಿಕರಿಂದ ತುಂಬಿತುಳುಕುತ್ತಿವೆ.

'ಶಕ್ತಿ ಯೋಜನೆ ಸ್ಮಾರ್ಟ್‌ ಕಾರ್ಡ್‌' ಪಡೆದ ಮೊದಲ ಮಹಿಳೆ ಇವರೇ! ಉಚಿತ ಪ್ರಯಾಣವನ್ನೂ ಮಾಡಿದ್ರು

ಬೆಂಗಳೂರು, ಮೈಸೂರು, ಕೋಲಾರ, ತುಮಕೂರು ಭಾಗದಿಂದಲೂ ಬಂದ ಮಹಿಳಾ ಭಕ್ತರು. ಇದೀಗ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಎಲ್ಲಿ ನೋಡಿದರೂ ಮಹಿಳಾ ಭಕ್ತರೇ ಕಾಣಿಸುತ್ತಿದ್ದಾರೆ. ಮಂಜುನಾಥ ಸ್ವಾಮಿಯ ದರ್ಶನ ಪಡೆದು‌ ಕುಕ್ಕೆಯತ್ತ ತೆರಳುತ್ತಿರುವ ಮಹಿಳಾ ಭಕ್ತರು. ಹೀಗಾಗಿ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗೋ ಬಸ್ ಗಳಲ್ಲೂ ಮಹಿಳಾ ಭಕ್ತರ ರಶ್.  ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆಯಲ್ಲಿಯೂ ಹೆಚ್ಚಾಗಿ ಬಂದಿರುವ ಭಕ್ತ ಸಮೂಹ. ಒಟ್ಟಿನಲ್ಲಿ ರಾಜ್ಯ ಸರ್ಕಾರ ಶಕ್ತಿ ಯೋಜನೆಯಿಂದ ತೀರ್ಥಕ್ಷೇತ್ರಗಳು, ಪ್ರವಾಸಿತಾಣಗಳಿಗೂ ಹೊಸ ಚೈತನ್ಯ ಬಂದಂತಾಗಿದೆ. ಉಚಿತ ಪ್ರಯಾಣದ ಪರಿಣಾಮ ಪ್ರವಾಸೋದ್ಯಮಕ್ಕೂ ಅನುಕೂಲವಾಗಿದೆ.

click me!