ಶಕ್ತಿ ಯೋಜನೆ: 100 ಕೋಟಿ ದಾಟಿದ ಉಚಿತ ಬಸ್‌ ಪ್ರಯಾಣಿಕರ ಸಂಖ್ಯೆ!

By Kannadaprabha NewsFirst Published Nov 24, 2023, 4:26 AM IST
Highlights

 ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಬುಧವಾರಕ್ಕೆ 100 ಕೋಟಿ ದಾಟಿದೆ.

ಬೆಂಗಳೂರು (ನ.24): ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಬುಧವಾರಕ್ಕೆ 100 ಕೋಟಿ ದಾಟಿದೆ.

ಕಳೆದ ಜೂ.11ರಂದು ಜಾರಿಗೆ ಬಂದ ಶಕ್ತಿ ಯೋಜನೆ ಅಡಿಯಲ್ಲಿ ನ.22ರವರೆಗೆ 100.47 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಪ್ರತಿದಿನ ಸರಾಸರಿ 60ರಿಂದ 65 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಯೋಜನೆ ಜಾರಿಯಾದಾಗಿನಿಂದಲೂ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ 100 ಕೋಟಿ ಮಹಿಳೆಯರು ಶಕ್ತಿ ಯೋಜನೆ ಲಾಭ ಪಡೆದಿದ್ದಾರೆ. ಅಲ್ಲದೆ, ಬಸ್‌ಗಳಲ್ಲಿ ಮಹಿಳೆಯರು ಪ್ರಯಾಣಿಸಿದ ಟಿಕೆಟ್‌ ಮೌಲ್ಯ ಈಗಾಗಲೇ 2,397 ಕೋಟಿ ರು. ತಲುಪಿದೆ.ಪ್ರಸಕ್ತ ಸಾಲಿನಲ್ಲಿ ಶಕ್ತಿ ಯೋಜನೆಗಾಗಿ ರಾಜ್ಯ ಸರ್ಕಾರ 2,800 ಕೋಟಿ ರು. ಅನುದಾನ ಮೀಸಲಿಟ್ಟಿದೆ.

Latest Videos

 

ಶಕ್ತಿ ಯೋಜನೆ ಪ್ರಭಾವ ಬಸ್ ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಶಕ್ತಿ ಯೋಜನೆಯ ಮಹಿಳಾ ಪ್ರಯಾಣಿಕರ ಸಂಖ್ಯೆ 100 ಕೋಟಿ ದಾಟಿದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಶುಕ್ರವಾರ ಸಂಭ್ರಮಾಚರಣೆ ಏರ್ಪಡಿಸಲಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಘಾತ ಮಾಡದೆ ಬಸ್‌ ಚಾಲನೆ ಮಾಡಿದ ನಾಲ್ಕೂ ನಿಗಮಗಳ ಚಾಲಕರಿಗೆ ಚಿನ್ನದ ಪದಕ ನೀಡಿ ಗೌರವಿಸಲಿದ್ದಾರೆ.

click me!