ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂಬುದಾಗಿ ಪಕ್ಷದ ಹಿರಿಯ ಶಾಸಕ, ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ದಾವಣಗೆರೆ (ಮಾ.21): ರಾಜ್ಯದಲ್ಲಿ ಕಾಂಗ್ರೆಸ್ (Congress) ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂಬುದಾಗಿ ಪಕ್ಷದ ಹಿರಿಯ ಶಾಸಕ, ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಇಬ್ಬರ ಜೊತೆಗೆ ನಾನೂ ಸ್ಪರ್ಧೆಯಲ್ಲಿದ್ದೇನೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಎಂದರು. ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ನಾನು ಮತ್ತೆ ಸ್ಪರ್ಧೆ ಮಾಡುತ್ತಿದ್ದೇನೆ. ಯಾಕೆ ನನ್ನಿಂದ ಆಗುವುದಿಲ್ಲ ಅಂದುಕೊಂಡಿದ್ದೀರಾ?
ಸ್ಪರ್ಧೆ ಮಾಡೋಕೆ ನನ್ನ ಬಳಿ ದುಡ್ಡಿಲ್ಲ ಅಂದುಕೊಂಡಿದ್ದೀರಾ? ಶಕ್ತಿ ಇಲ್ಲ ಅನ್ಕೊಂಡಿದಿರಾ? ದಕ್ಷಿಣದಿಂದಲೇ ಮತ್ತೆ ಸ್ಪರ್ಧೆ ಮಾಡಿ, ಗೆಲ್ಲುತ್ತೇನೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯೂ ಆಗುತ್ತೇನೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ನನಗೆ ಗೊತ್ತಿಲ್ಲ. ಜೂನ್ 16ಕ್ಕೆ ನನ್ನ ಮೊಮ್ಮಗಳ ಮದುವೆಗೆ ಬರುತ್ತಾರೆ. ಉತ್ತರದಿಂದ ಸ್ಪರ್ಧಿಸುವ ಬಗ್ಗೆ ಬೊಮ್ಮಾಯಿ ನಮ್ಮ ಬಳಿ ಮಾತನಾಡಿಲ್ಲ. ನಾನು ವಿಪಕ್ಷ ಶಾಸಕ. ಬಿಜೆಪಿಯವರು ಹೆಂಗೆ ನನ್ನ ಬಳಿ ಸ್ಪರ್ಧೆ ಬಗ್ಗೆ ಚರ್ಚಿಸುತ್ತಾರೆ ಎಂದು ಪ್ರಶ್ನಿಸಿದರು.
Karnataka Politics: ಬಿಜೆಪಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರ ಭ್ರಮೆ: ಸಿದ್ದು
ಗಂಗಾಕಲ್ಯಾಣ ಯೋಜನೆಯಲ್ಲಿ 130 ಕೋಟಿ ಅಕ್ರಮ: ಕಾಶ್ಮೀರ ಫೈಲ್ಸ್ ಸಿನಿಮಾ ತೋರಿಸಿ ರಾಜ್ಯದಲ್ಲಿ ಆಗುತ್ತಿರುವ ಅಕ್ರಮಗಳನ್ನು ಮುಚ್ಚಿ ಹಾಕಲು ಬಿಜೆಪಿ(BJP) ಯತ್ನಿಸುತ್ತಿದೆ. ಗಂಗಾಕಲ್ಯಾಣ ಯೋಜನೆಯಡಿ ನೀಡಿರುವ ಗುತ್ತಿಗೆಯಲ್ಲಿ 130 ಕೋಟಿ ರು.ಗಳ ವ್ಯಾಪಕ ಅವ್ಯವಹಾರ ನಡೆದಿದೆ. ದಲಿತರ ಯೋಜನೆಯಲ್ಲಿ ಲೂಟಿ ಮಾಡಿ ಅದನ್ನು ಮರೆಮಾಚಲು ಕಾಶ್ಮೀರ ಫೈಲ್ಸ್, ಹಿಜಾಬ್, ಕೇಸರಿ ಶಾಲು ತಂದು ಧರ್ಮ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಆರೋಪಿಸಿದ್ದಾರೆ.
ಗಂಗಾಕಲ್ಯಾಣ ಯೋಜನೆಯಡಿ ಅಕ್ರಮವಾಗಿ ಗುತ್ತಿಗೆದಾರರಿಗೆ ವಹಿವಾಟಿಗಿಂತ ದುಪ್ಪಟ್ಟು ಮೊತ್ತದ ಗುತ್ತಿಗೆ ನೀಡಲಾಗಿದೆ. ಜತೆಗೆ ಕಳೆದ ವರ್ಷಕ್ಕಿಂತ ಬೋರ್‌ವೆಲ್ ಕೊರೆಯುವ ದರ, ಪೈಪು ಅಳವಡಿಕೆಯನ್ನು ಏಕಾಏಕಿ ದುಪ್ಪಟ್ಟು ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನೀಡುತ್ತಿರುವ ದರಕ್ಕಿಂತ ದುಪ್ಪಟ್ಟು ದರವನ್ನು ನೀಡಲು ಸಮಾಜ ಕಲ್ಯಾಣ ಇಲಾಖೆ ಅನುಮೋದನೆ ನೀಡಿದೆ. ಹೀಗಾಗಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಇದಕ್ಕೆ ಅನುಮೋದನೆ ಕೊಟ್ಟಿರುವ ಸಚಿವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಸಚಿವರ ರಾಜೀನಾಮೆ ಪಡೆಯಲಾಗದಿದ್ದರೆ ಮುಖ್ಯಮಂತ್ರಿಗಳೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಶ್ರೀರಾಮುಲು ತವರಿನಲ್ಲಿ ವರ್ಕೌಟ್ ಆಯ್ತು ಡಿಕೆಶಿ ಒಗ್ಗಟ್ಟಿನ ಮಂತ್ರ, ಬಿಜೆಪಿಗೆ ಮಖಭಂಗ
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗಂಗಾ ಕಲ್ಯಾಣ ಯೋಜನೆಯಡಿ 2019-20, 2020-21ನೇ ಸಾಲಿನಲ್ಲಿ ಈ ಯೋಜನೆಯಲ್ಲಿ 14,577 ಕೊಳವೆ ಬಾವಿಗೆ 431 ಕೋಟಿ ರು. ಮೊತ್ತದ ಟೆಂಡರ್ ಕರೆಯಲಾಗಿದೆ. ಗುತ್ತಿಗೆ ಪಡೆಯಲು ಸರ್ಕಾರಿ ಕಾಮಗಾರಿ ಮಾಡಿರುವ ಅನುಭವ ಇರಬೇಕು ಎಂದು ಮಾರ್ಗಸೂಚಿಯಲ್ಲಿದೆ. ಇದರ ಪ್ರಕಾರ 14,577 ಕೊಳವೆ ಬಾವಿ ಕೊರೆಯಲು ಎಲ್ಲ ಗುತ್ತಿಗೆದಾರರು ಸೇರಿ ಹಿಂದೆ 11,656 ಕೊಳವೆ ಬಾವಿ ಕೊರೆದಿರುವ ಅನುಭವ ಹೊಂದಿರಬೇಕು. ಆದರೆ, ಕೃಷ್ಣ ಭಾಗ್ಯ ಜಲ ನಿಗಮ ಮತ್ತು ಸಣ್ಣ ನೀರಾವರಿಯಲ್ಲಿ ಈ ಗುತ್ತಿಗೆದಾರರು ಕಳೆದ ಐದು ವರ್ಷಗಳಲ್ಲಿ 500 ಕೊಳವೆಬಾವಿ ಕೊರೆದಿಲ್ಲ. ಅಂತಹವರಿಗೆ ಟೆಂಡರ್(Tender) ನೀಡಲಾಗಿದೆ ಎಂದು ಗುತ್ತಿಗೆದಾರರ ವಿವರಗಳ ಸಹಿತ ಬಹಿರಂಗಪಡಿಸಿ, ಇವರಿಗೆ ಕೆಲಸ ಮಾಡದೆಯೇ ನಕಲಿ ಪ್ರಮಾಣಪತ್ರ ನೀಡಲಾಗಿದೆ ಎಂದು ದೂರಿದರು.