
ಬೆಂಗಳೂರು(ಜ.29): ಗೇರುಸೊಪ್ಪ ಮತ್ತು ಲಿಂಗನಮಕ್ಕಿ ಜಲಾಶಯಗಳ ನಡುವೆ ಶರಾವತಿ ವನ್ಯಜೀವಿಧಾಮ ಅರಣ್ಯ ಪ್ರದೇಶದಲ್ಲಿ ನಡೆಯಲಿರುವ ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆ ಕಾಮಗಾರಿಗೆ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಅನುಮೋದಿಸಲಾಗಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಶರಾವತಿ ಪಂಪ್ ಸ್ಟೋರೇಜ್ ವಿದ್ಯುತ್ ಉತ್ಪಾದನಾಯೋಜನೆಗೆ ಷರತ್ತುಬದ ಅನುಮೋದನೆ ನೀಡಲಾಗಿದೆ.
ಶರಾವತಿ ಮುಳುಗಡೆ ಸಂತ್ರಸ್ಥರ ನೆರವಿಗೆ ಕೇಂದ್ರಕ್ಕೆ ಮನವಿ: ಸಂಸದ ಬಿ.ವೈ.ರಾಘವೇಂದ್ರ
ಶರಾವತಿ ಪಂಪ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆ ಶರಾವತಿ ವನ್ಯಜೀ ವಿಧಾಮವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳಲಿದ್ದು, ಅದಕ್ಕಾಗಿ 125 ಎಕರೆ ಅರಣ್ಯ ಭೂಮಿ ನೀಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈವೇಳೆ ಅಧಿಕಾರಿಗಳುಯೋಜನೆ ಅನುಷ್ಠಾನಕ್ಕೆ 125 ಎಕರೆ ಅರಣ್ಯ ಪ್ರದೇಶದ ಅವಶ್ಯಕ ತೆಯಿದ್ದು, ಅದಕ್ಕಾಗಿ 16 ಸಾವಿರ ಮರಗಳನ್ನು ಕಡಿಯಬೇಕಾಗಿದೆ ಎಂದು ತಿಳಿಸಿದರು.
ಆ ಕುರಿತು ಸಭೆಯಲ್ಲಿ ವಿಕೃತ ಚರ್ಚೆ ನಡೆಸಿ, ಈ ಯೋಜನೆಯಿಂದ 8 ರಿಂದ 9 ಸಾವಿರ ಮರ ಕಡಿಯಬೇಕು. ಜತೆಗೆ ಯೋಜನೆ ಅನುಷ್ಠಾನ ಗೊಳ್ಳಲಿರುವ ಶರಾವತಿ ವನ್ಯಜೀವಿಧಾಮವು ಅಪರೂಪದ ವನ್ಯಜೀವಿಯಾದ ಸಿಂಹಬಾಲ ಸಿಂಗಳಿಕದ ಆವಾಸಸ್ಥಾನವಾಗಿದೆ. ಯೋಜನೆ ಕಾಮಗಾರಿಯಿಂದ ಅವುಗಳ ಆವಾಸಸ್ಥಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ, ಕೇವಲ 125 ಎಕರೆ ಅರಣ್ಯ ಪ್ರದೇಶದಲ್ಲಷ್ಟೇ ಕಾಮಗಾರಿ ನಡೆಸಬೇಕು ಎಂಬ ಷರತ್ತುಗಳನ್ನು ವಿಧಿಸಿ ಅನುಮೋದನೆ ನೀಡಲಾಯಿತು.
ಸದ್ಯ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ನೀಡಲಾಗಿರುವ ಅನುಮೋದನೆಯನ್ನು ರಾಷ್ಟ್ರ ಯವನ್ಯ ಜೀವಿಮಂಡಳಿಯ ಅನುಮೋದನೆಗೆ ಮಂಡಿಸಲಾಗುವುದು. ಅಲ್ಲಿಂದ ಅನುಮೋದನೆ ದೊರೆತ ನಂತರ ಯೋಜನೆ ಅನುಷ್ಠಾನಕ್ಕೆ ಚಾಲನೆ ದೊರೆಯಲಿದೆ.
2000 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ
ಶರಾವತಿ ಪಂಪ್ಸ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆಯ ಮೊದಲ ಹಂತದ 10 ಘಟಕಗಳಿಂದ ಸದ್ಯ 1 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಈ ಯೋಜನೆ 66 ಸಾವಿರ ಎಕರೆ ವಿಸ್ತೀರ್ಣದ ಅರಣ್ಯ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾ ಗಿದೆ. ಇದೀಗ 2ನೇ ಹಂತದ ಯೋಜನೆ 125 ಎಕರೆ ವಿಸ್ತೀರ್ಣ ಅರಣ್ಯ ಪ್ರದೇಶದಲ್ಲಿ ಅನುಷ್ಠಾನಗೊಂಡು 2 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ. ಯೋಜನೆಯಂತೆ ಗೇರುಸೊಪ್ಪ ಮತ್ತು ಲಿಂಗನಮಕ್ಕಿ ಜಲಾಶಯಗಳಿಂದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸುರಂಗ ಮಾರ್ಗ ನಿರ್ಮಿಸಿ ಅಲ್ಲಿಂದ ನೀರು ಹಾಯಿಸಲಾಗುತ್ತದೆ. ಸಭೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ವಿಧಾನಸಭೆ ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಪೊನ್ನಣ್ಣ, ಗಣೇಶ್ ಪ್ರಸಾದ್, ಪುಟ್ಟಣ್ಣ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಅಹಮದ್, ವನ್ಯಜೀವಿ ಮಂಡಳಿ ಸದಸ್ಯರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ