Hassan: ಶಿರಾಡಿ ಘಾಟ್ ಬಂದ್ ಮಾಡುವುದಿಲ್ಲ: ಸಚಿವ ಸಿ.ಸಿ.ಪಾಟೀಲ್

Published : Jul 11, 2022, 11:00 PM IST
Hassan: ಶಿರಾಡಿ ಘಾಟ್ ಬಂದ್ ಮಾಡುವುದಿಲ್ಲ: ಸಚಿವ ಸಿ.ಸಿ.ಪಾಟೀಲ್

ಸಾರಾಂಶ

ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗ ಶಿರಾಡಿ ಘಾಟ್ ರಸ್ತೆ ದುರಸ್ತಿಯ ನಿಮಿತ್ತವಾಗಿ ಬಂದ್ ಮಾಡುವುದಿಲ್ಲ. ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ ಮಾಡುವುದಿಲ್ಲ. ರಸ್ತೆ ದುರಸ್ತಿ ಕಾಮಗಾರಿ ಮುಂದುವರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ವರದಿ: ಕೆ.ಎಂ. ಹರೀಶ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾಸನ

ಹಾಸನ (ಜು.11): ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗ ಶಿರಾಡಿ ಘಾಟ್ ರಸ್ತೆ ದುರಸ್ತಿಯ ನಿಮಿತ್ತವಾಗಿ ಬಂದ್ ಮಾಡುವುದಿಲ್ಲ. ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ ಮಾಡುವುದಿಲ್ಲ. ರಸ್ತೆ ದುರಸ್ತಿ ಕಾಮಗಾರಿ ಮುಂದುವರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ರಸ್ತೆ ಕುಸಿತವಾಗಿರುವ  ಸ್ಥಳ ಪರಿಶೀಲನೆ ನಡೆಸಿದ ಮಾತನಾಡಿದ ಸಚಿವ ಸಿ.ಸಿ ಪಾಟೀಲ್, ಶಿರಾಡಿಘಾಟ್ ಮೂಲಕ ಪ್ರತಿನಿತ್ಯ ಸರಾಸರಿ 30 ಸಾವಿರ ವಾಹನಗಳು ಸಂಚರಿಸುತ್ತವೆ. ಒಂದು ವೇಳೆ ರಸ್ತೆ ಬಂದ್ ಮಾಡಿದರೆ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತದೆ. ಆದ್ದರಿಂದ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು, ಮತ್ತೊಂದು ಭಾಗದಲ್ಲಿ ದುರಸ್ತಿ ಕಾಮಗಾರಿಗಳಿಗೆ ಅವಕಾಶ ಮಾಡಿಕೊಡಲಾಗುವುದು, ತೀರಾ ಅನಿವಾರ್ಯವಾದರೆ ಮಾತ್ರ ಏಕಮುಖ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು. 

ಬಿಜೆಪಿಗೆ 150 ಸೀಟು ಸಿಗುತ್ತೆ ಅಂತ ಸಮೀಕ್ಷೆ ಬಂದಿವೆ: ಕಟೀಲ್‌

ಸದ್ಯಕ್ಕಂತೂ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಎಂದು ಹೇಳಿಕೆ ನೀಡಿದರು. ಮಳೆ ಮತ್ತಿತರ ನೈಸರ್ಗಿಕ ಪ್ರಕೋಪಗಳಿಂದ ರಸ್ತೆಗಳು ಅಥವಾ ಸೇತುವೆಗಳು ಹಾನಿಗೊಳಗಾದರೆ ದುರಸ್ತಿ ಕಾಮಗಾರಿ ನಡೆಸುವುದಕ್ಕೆ ಯಾವುದೇ ಹಣಕಾಸು ತೊಂದರೆ ಇಲ್ಲ. ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದು ಸಿ.ಸಿ. ಪಾಟೀಲ್ ವಿವರಿಸಿದರು. ಹಾಸನದಿಂದ ಮಾರನಹಳ್ಳಿ ವರೆಗಿನ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿಯಲ್ಲಿ ಕೆಲವೆಡೆ ಕಳಪೆ ಕಾಮಗಾರಿ ಮಾಡಿದ್ದಾರೆ. 

ಮೋದಿ ಮಾತು ಕೇಳಿದ್ದರೆ ಎಚ್‌ಡಿಕೆ 5 ವರ್ಷ ಸಿಎಂ ಆಗಿರ್ತಿದ್ರು: ರೇವಣ್ಣ

ಉತ್ತಮ ಗುಣಮಟ್ಟದ ಜೊತೆ ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರ ಕಂಪೆನಿಗೆ ನಿರ್ದೇಶನ ನೀಡಿದ್ದೇನೆ. ನಿರ್ದೇಶನ ಪಾಲಿಸದಿದ್ದರೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ. 2024 ರ ಮಾರ್ಚ್ ಒಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರ ರಾಜ್ ಕಮಲ್ ಕಂಪೆನಿ ತಿಳಿಸಿದೆ ಎಂದು ಸಚಿವರು ಹೇಳಿದರು. ಸಕಲೇಶಪುರ ಶಾಸಕ ಹೆಚ್ ಕೆ ಕುಮಾರಸ್ವಾಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಡಾ. ಕೃಷ್ಣ ರೆಡ್ಡಿ, ಮತ್ತಿತರ ಅಧಿಕಾರಿಗಳು ಸಚಿವರ ಹೆದ್ದಾರಿ ಪರಿಶೀಲನ ಸಂದರ್ಭದಲ್ಲಿ ಜೊತೆಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ