ಶಿವಮೊಗ್ಗ ಜಿಲ್ಲೆಯ ಇಬ್ಬರು ಶಿಕ್ಷಕರು ರಾಜ್ಯಮಟ್ಟದ ಉತ್ತಮ ಪ್ರಶಸ್ತಿಗೆ ಆಯ್ಕೆ

By Sathish Kumar KHFirst Published Sep 3, 2023, 1:36 PM IST
Highlights

ರಾಜ್ಯ ಸರ್ಕಾರದಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಇಬ್ಬರು ಶಿಕ್ಷಕರು ಪಾತ್ರವಾಗಿದ್ದಾರೆ.

ಶಿವಮೊಗ್ಗ (ಸೆ.03): ರಾಜ್ಯ ಸರ್ಕಾರದಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಇಬ್ಬರು ಶಿಕ್ಷಕರು ಪಾತ್ರವಾಗಿದ್ದಾರೆ. ಸಾಗರ ತಾಲೂಕು ತ್ಯಾಗರ್ತಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ವಿಜಯಾನಂದ ರಾವ್ ಹಾಗೂ ಹೊಸನಗರ ತಾಲೂಕು ಮಾದಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಫೌಜಿಯಾ ಸರವತ್‌ ಆಯ್ಕೆಯಾಗಿದ್ದಾರೆ.

ರಾಜ್ಯ ಸರ್ಕಾರದಿಂದ ಸೆ.5ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿರುವ ರಾಜ್ಯಮಟ್ಟದ ಶಿಕ್ಷಕರ ದಿನಾಚರನೆ ವೇಳೆ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಎಲ್ಲ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇನ್ನು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉತ್ತಮ ಶಿಕ್ಷಕ ವಿಜಯಾನಂದ ರಾವ್ ಅವರು, ಈ ಮೊದಲು ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 5 ವರ್ಷ, ಹೊಸನಗರ ತಾಲೂಕಿನ ಕಾರಣಗಿರಿಯಲ್ಲಿ 8 ವರ್ಷ, ಹಾಗೂ ತ್ಯಾಗರ್ತಿಯಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ವಿಜ್ಞಾನ ವಿಭಾಗದಲ್ಲಿ ವಿಶೇಷ ಆಸಕ್ತಿ ವಹಿಸಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದ್ದಾರೆ.

ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆಯ ಸ್ವಪ್ನಾ ಅನಿಗೋಳ, ಶಿರಸಿ ನಾರಾಯಣ ಭಾಗವತ

ಜೂಸ್ ಕ್ಲಾಸಸ್ ಮೊಬೈಲ್‌ ಆ್ಯಪ್‌ ಮೂಲಕ ಮಕ್ಕಳಿಗೆ ಆನ್‌ಲೈನ್ ತರಗತಿ: ಇನ್ನು ತಮ್ಮದೇ ಆದ ವಿಜೂಸ್ ಕ್ಲಾಸಸ್ ಎಂಬ ಮೊಬೈಲ್‌ ಆ್ಯಪ್ ಮೂಲಕ ಮಕ್ಕಳಿಗೆ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸುತ್ತಿದ್ದಾರೆ. ಯೂಟ್ಯೂಬ್ ಚಾನಲ್ ಮೂಲಕ ಆಧುನಿಕ ವಿಜ್ಞಾನದ ಬಗ್ಗೆ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ವಿಜ್ಞಾನ ವಿಭಾಗದ ರಾಜ್ಯ ಹಾಗೂ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ 500ಕ್ಕೂ ಹೆಚ್ಚು ತರಬೇತಿಗಳನ್ನು ನೀಡಿದ್ದಾರೆ. 

ಫಿಜಾ ಯೂಟ್ಯೂಬ್‌ ಚಾನಲ್‌ ಆರಂಭ: ಮತ್ತೊಂದೆಡೆ, ರಾಜ್ಯಮಟ್ಟದ ಉತ್ತಮ ಶಿಕ್ಷಕಿಯಾಗಿ ಆಯ್ಕೆ ಆಗಿರುವ ಫೌಜಿಯಾ ಸರವತ್ ಅವರು ಮಕ್ಕಳಿಗೆ ಸ್ಮಾರ್ಟ್‌ ಕ್ಲಾಸ್ ಮೂಲಕ ಹಲವು ಕಾರ್ಯಕ್ರಮ ನೀಡಿದ್ದಾರೆ. ಸಮಾಜದಲ್ಲಿರುವ ಹಲವು ದಾನಿಗಳ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಗೆ ಅನೇಕ ಸಾಮಗ್ರಿಗಳನ್ನು ಕೊಡಿಸಿದ್ದಾರೆ. ಫಿಜಾ ಯೂಟ್ಯೂಬ್ ಚಾನಲ್‌ ಮೂಲಕ ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸಿದ್ದಾರೆ. ಅನೇಕ ಕ್ಲಿಷ್ಟಕರವಾದ ಪಾಠಗಳನ್ನು ಸರಳವಾಗಿ ಹೇಳಿಕೊಡುವ ಮೂಲಕ ಮಕ್ಕಳ ನೆಚ್ಚಿನ ಶಿಕ್ಷಕಿಯೂ ಆಗಿದ್ದಾರೆ. ಈಗ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸೆ.5ರಂದು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Chikkamagaluru: ಬೆಟ್ಟಗೆರೆ ಹೈಸ್ಕೂಲ್‌ನಲ್ಲಿ ಹೈಡ್ರಾಮಾ: ಮುಖ್ಯ ಶಿಕ್ಷಕಿ ಮೇಲೆ ಬಂದ ಗ್ರಾಮ ದೇವತೆ ದೇವರು?

ರಾಷ್ಟ್ರಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರ ಆಯ್ಕೆ: ಬಾಗಲಕೋಟೆ: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪ್ರತಿವರ್ಷ ಕೊಡಮಾಡುವ ರಾಷ್ಟ್ರೀ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಕೆಎಲ್ಇ ಜೂನಿಯರ್ ಕಾಲೇಜಿನ ಶಿಕ್ಷಕಿ ಸ್ವಪ್ನಾ ಅನಿಗೋಳ ಹಾಗೂ ಶಿರಸಿಯ ಮಾರಿಕಾಂಬ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನಾರಾಯಣ ಪರಮೇಶ್ವರ ಭಾಗವತ ಆಯ್ಕೆಯಾಗಿದ್ದಾರೆ. 2023-24 ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿಯು ಬಾಗಲಕೋಟೆ ಜಿಲ್ಲೆಯ ಶಿಕ್ಷಕಿಗೆ ದೊರೆತಿದ್ದು, ಜಿಲ್ಲೆಯ ಜನರು ಹೆಮ್ಮೆ ಪಡುವಂತಾಗಿದೆ. ಸ್ವಪ್ನಾ ಅನಿಗೋಳ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದವರಾಗಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಕೆಎಲ್ಇ ಜೂನಿಯರ್ ಕಾಲೇಜಿನ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಎಂಎಸ್ಸಿ, ಬಿಎಡ್ ಮಾಡಿದ್ದು, ವಿಜ್ಞಾನ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ವಿಭಿನ್ನ ಪಾಠ ಮಾಡುವ ಶೈಲಿ ಹಾಗೂ ಶಾಲಾ ಹಾಜರಾತಿ ಕರೆಯುವ ಶೈಲಿಯು ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಲು ಕಾರಣವಾಗಿದೆ.

click me!