ಶಿವಮೊಗ್ಗ: ಮಗಳನ್ನು ಮಚ್ಚಿನಿಂದ ಕೊಲೆಗೈದು ಆಕೆಯ ಹೆಣದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ!

Published : Oct 03, 2025, 04:10 PM IST
Shivamogga Mother Crime

ಸಾರಾಂಶ

ಶಿವಮೊಗ್ಗದಲ್ಲಿ, ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ 6ನೇ ತರಗತಿಯ ಮಗಳನ್ನು ಮಚ್ಚಿನಿಂದ ಕೊಲೆ ಮಾಡಿ, ನಂತರ ತಾನೂ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಪತ್ನಿ ಮತ್ತು ಮಗಳು ಮೃತಪಟ್ಟಿದ್ದಾರೆ.

ಶಿವಮೊಗ್ಗ (ಅ.03): ಮಲೆನಾಡು ನಗರ ಶಿವಮೊಗ್ಗದಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಚಿಕ್ಕ ವಯಸ್ಸಿನ ಮಗಳನ್ನೇ ಮಚ್ಚಿನಿಂದ ಕೊಲೆಗೈದು ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ದುರ್ಘಟನೆ ಬೆಳಕಿಗೆ ಬಂದಿದೆ. ಜಿಲ್ಲಾ ಆಸ್ಪತ್ರೆಯ ನರ್ಸ್ ಕ್ವಾರ್ಟರ್ಸ್‌ನಲ್ಲಿ ನಡೆದ ಈ ಘಟನೆ ಇಡೀ ಬಡಾವಣೆಯನ್ನೇ ಶೋಕದಲ್ಲಿ ಮುಳುಗಿಸಿದೆ.

ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ಮನೆಯಲ್ಲಿ ಘೋರ ಕೃತ್ಯ:

ಶಿವಮೊಗ್ಗದ ಸರ್ಕಾರಿ ವೈದ್ಯಕೀಯ ಕಾಲೇಜಿನ ಬೋಧನಾ ಆಸ್ಪತ್ರೆಯಾದ ಮೆಗ್ಗಾನ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ರಾಮಣ್ಣ ನಾಯಕ ಅವರ ಮನೆಯಲ್ಲಿ ಈ ದುರಂತ ಸಂಭವಿಸಿದೆ. ರಾಮಣ್ಣ ನಾಯಕ ಅವರ ಪತ್ನಿ ಶ್ರುತಿ (ಆತ್ಮಹ*ತ್ಯೆ ಮಾಡಿಕೊಂಡವರು) ಮತ್ತು ಮಗಳು ಪೂರ್ವಿಕಾ (6ನೇ ತರಗತಿ ವಿದ್ಯಾರ್ಥಿನಿ) ಮೃತಪಟ್ಟವರು.

ರಾಮಣ್ಣ ನಾಯಕ ಅವರು ರಾತ್ರಿ ಪಾಳಿಯ ಕೆಲಸಕ್ಕೆ ಹೋಗಿದ್ದ ಕಾರಣ ಘಟನೆ ನಡೆದಾಗ ಮನೆಯಲ್ಲಿರಲಿಲ್ಲ. ಎಂದಿನಂತೆ ಕೆಲಸ ಮುಗಿಸಿ ಬೆಳಗ್ಗೆ ಮನೆಗೆ ಬಂದಾಗ, ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಎಷ್ಟು ಕರೆದರೂ ಬಾಗಿಲು ತೆರೆಯದ ಕಾರಣ, ಅಕ್ಕಪಕ್ಕದ ನಿವಾಸಿಗಳ ಸಹಾಯದಿಂದ ಬಾಗಿಲನ್ನು ಮುರಿದು ಒಳ ಹೋದಾಗ ಕಂಡ ದೃಶ್ಯ ಅತ್ಯಂತ ಭಯಾನಕವಾಗಿತ್ತು. ಮಗಳು ಪೂರ್ವಿಕಾಳ ಮೃತದೇಹ ನೆಲದ ಮೇಲೆ ಬಿದ್ದಿದ್ದು, ಆಕೆಯ ಶವದ ಮೇಲೆಯೇ ನಿಂತು ತಾಯಿ ಶ್ರುತಿ ಅವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದರು. ಇದನ್ನು ಕಂಡು ರಾಮಣ್ಣ ನಾಯಕ ಅವರು ತೀವ್ರ ದಿಗ್ಭ್ರಾಂತಿಗೆ ಒಳಗಾಗಿದ್ದಾರೆ.

ವಿಡಿಯೋ ಕಾಲ್‌ನಲ್ಲಿ ಕೊನೆಯ ಮಾತು:

ಮೃತ ಶ್ರುತಿ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಮತ್ತು ಇದಕ್ಕಾಗಿ ವೈದ್ಯರಿಂದ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎನ್ನಲಾಗಿದೆ. ಅವರ ಮಾನಸಿಕ ಸ್ಥಿತಿ ಆಗಾಗ ಹದಗೆಡುತ್ತಿದ್ದು, ಮನೆಯಲ್ಲಿ ಘರ್ಷಣೆ ವಾತಾವರಣ ಉಂಟಾಗುತ್ತಿತ್ತು. ರಾತ್ರಿ ಪಾಳಿಯ ಕೆಲಸಕ್ಕೆ ರಾಮಣ್ಣ ನಾಯಕ ಹೋದ ನಂತರ, ರಾತ್ರಿ ಸುಮಾರು 10:30 ರ ಸುಮಾರಿಗೆ ಮಗಳು ಪೂರ್ವಿಕಾ ತಂದೆಗೆ ವಿಡಿಯೋ ಕಾಲ್ ಮಾಡಿದ್ದಾಳೆ. 'ಅಪ್ಪ, ಅಮ್ಮ ಹೇಗೇಗೋ ಆಡುತ್ತಿದ್ದಾರೆ, ಬೇಗ ಮನೆಗೆ ಬಾ' ಎಂದು ಕರೆದಿದ್ದಾಳೆ. ಅದಕ್ಕೆ ರಾಮಣ್ಣ ನಾಯಕ, 'ಡ್ಯೂಟಿ ಮಾಡ್ತಾ ಇದ್ದೀನಿ ಮಗಳೇ, ಅಮ್ಮ ಸರಿಹೋಗ್ತಾರೆ, ಬೆಳಗ್ಗೆ ಬರ್ತೀನಿ' ಎಂದು ಸಮಾಧಾನ ಹೇಳಿದ್ದಾರೆ. ದುರದೃಷ್ಟವಶಾತ್, ಇದೇ ತಂದೆ ಮತ್ತು ಮಗಳ ನಡುವಿನ ಕೊನೆಯ ಸಂಭಾಷಣೆಯಾಗಿದೆ. ಮನೆಯಲ್ಲಿ ಇದು ಸಾಮಾನ್ಯ ಎನ್ನುವಂತೆ ಸುಮ್ಮನಾಗಿದ್ದ ರಾಮಣ್ಣ ನಾಯಕ ಅವರಿಗೆ ಬೆಳಗ್ಗೆ ಈ ಭೀಕರ ದುರಂತ ಕಾದಿತ್ತು.

ಮಚ್ಚಿನಿಂದ ಹೊಡೆದು ಕೊಲೆ, ಪೊಲೀಸರ ಮಾಹಿತಿ:

ಘಟನಾ ಸ್ಥಳಕ್ಕೆ ಜಿಲ್ಲಾ ಜಿಲ್ಲಾ ಪೊಲೀಸ್ ವರಿಪಿ ಮಿಥುನ್ ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 6ನೇ ತರಗತಿ ಓದುತ್ತಿದ್ದ ಮಗಳು ಪೂರ್ವಿಕಾಳ ತಲೆಗೆ ಮಚ್ಚಿನಿಂದ ಹೊಡೆದು ಸಾಯಿಸಿದ ಶ್ರುತಿ, ನಂತರ ಅದೇ ಕೋಣೆಯಲ್ಲಿ ಮಗಳ ಶವದ ಮೇಲೇ ನಿಂತು ಆತ್ಮಹ*ತ್ಯೆ ಮಾಡಿಕೊಂಡಿರುವುದನ್ನು ಖಚಿತಪಡಿಸಿದರು. ತಾಯಿ ಶ್ರುತಿಗೆ ಮಾನಸಿಕ ಖಿನ್ನತೆ ಇತ್ತು ಎಂದು ಪತಿ ರಾಮಣ್ಣ ನಾಯಕ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಮಹಾನವರಾತ್ರಿ ಮತ್ತು ದಸರಾ ಹಬ್ಬದ ಸಡಗರದಲ್ಲಿದ್ದ ನಗರಕ್ಕೆ ಈ ಘಟನೆ ನಿಜಕ್ಕೂ ಆಘಾತ ಮತ್ತು ದುಃಖವನ್ನುಂಟು ಮಾಡಿದೆ. ಮಾನಸಿಕ ಆರೋಗ್ಯದ ನಿರ್ಲಕ್ಷ್ಯದಿಂದ ಇಂತಹ ದೊಡ್ಡ ದುರಂತಗಳು ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್