
ಮಂಗಳೂರು(ಫೆ.27): ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡಿದ ‘ಮಂಗಳೂರು ಮುಸ್ಲಿಂ’ ಫೇಸ್‌ಬುಕ್ ಖಾತೆಯನ್ನು ಬ್ಲಾಕ್ ಮಾಡುವ ಉದ್ದೇಶದಿಂದ ಆ ಖಾತೆಯ ಕುರಿತು ಫೇಸ್‌ಬುಕ್‌ನವರಿಂದ ಮಾಹಿತಿ ಕೇಳಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಈ ಖಾತೆ ಬಗ್ಗೆ ಈಗಾಗಲೇ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಖಾತೆಗೆ ‘ಲೈಕ್’ ಹಾಕಿದ ಮಣಿಪಾಲ ಮತ್ತು ಮೂಲ್ಕಿಯ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಲಾಗಿದೆ. ಆದರೆ ಅವರು ಆಕ್ಷೇಪಾರ್ಹ ಪೋಸ್ಟ್‌ಗೆ ಲೈಕ್ ಮಾಡಿಲ್ಲ. ಬದಲಾಗಿ ಆ ಖಾತೆಯ ಐಕಾನ್‌ಗೆ (ಲೋಗೋ) ಲೈಕ್ ಮಾಡಿರುವುದು ವಿಚಾರಣೆ ವೇಳೆ ಗೊತ್ತಾಗಿದೆ. ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ. 2016ರಲ್ಲಿ ಅಹಿತಕರ ಘಟನೆ ನಡೆದ ಸಂದರ್ಭದಲ್ಲೂ ಇದೇ ರೀತಿಯ ಹೆಸರು ಹೋಲುವ ಫೇಸ್‌ಬುಕ್ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿತ್ತು. ನಂತರ ನ್ಯಾಯಾಲಯದ ಅನುಮತಿ ಪಡೆದು ಆ ಖಾತೆ ಸ್ಥಗಿತಗೊಳಿಸಲಾಗಿತ್ತು. ಈಗ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಫೇಸ್‌ಬುಕ್ ಖಾತೆ ಹೆಸರಿಗೂ ಹಿಂದಿನ ಖಾತೆ ಹೆಸರಿಗೂ ಒಂದು ಅಕ್ಷರದಲ್ಲಿ ಮಾತ್ರ ವ್ಯತ್ಯಾಸವಿದೆ ಎಂದೂ ತಿಳಿಸಿದ್ದಾರೆ.
ಮುಸ್ಲಿಂ ಮಹಿಳೆಯರಿಗೆ ಬೆದರಿಕೆ: ಅಗತ್ಯ ಕ್ರಮ
‘ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳು ಬುರ್ಖಾ ಹಾಕಿಕೊಂಡು ಸಾರ್ವಜನಿಕರ ಸ್ಥಳಗಳು, ಮಾಲ್‌ಗಳಿಗೆ ಬರಬಾರದು, ಅದನ್ನು ಹೆತ್ತವರು ತಡೆಯಬೇಕು. ಅವರು ತಡೆಯದಿದ್ದರೆ ನಾವೇ ತಡೆಯುತ್ತೇವೆ’ ಎಂಬುದಾಗಿ ಎಂಡಿಎಫ್ (ಮುಸ್ಲಿಂ ಡಿಫೆನ್ಸ್ ಫೋರ್ಸ್) ಎಂಬ ವಾಟ್ಸಪ್ ಗ್ರೂಪ್‌ನಲ್ಲಿ ಬೆದರಿಕೆ ಹಾಕಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡಲು ಡಿಸಿಪಿಯವರಿಗೆ ಸೂಚನೆ ನೀಡಿದ್ದೇನೆ. ಬೆದರಿಕೆ ಮಾತ್ರವಲ್ಲದೆ ಇತರ ಆಕ್ಷೇಪಾರ್ಹ ವಿಚಾರಗಳು ಕೂಡ ಈ ಗ್ರೂಪ್‌ನಲ್ಲಿರುವುದು ಗೊತ್ತಾಗಿದೆ. ವರದಿ ಪಡೆದುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷನರ್ ತಿಳಿಸಿದರು.
ಸಾರ್ವಜನಿಕರು ಆತಂಕ ಬೇಡ:
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳ ವಿಶೇಷ ಘಟಕ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವಂತಹ ಆಕ್ಷೇಪಾರ್ಹ ಪೋಸ್ಟ್‌ಗಳು, ಅದನ್ನು ಲೈಕ್ ಮಾಡುವವರು, ಶೇರ್ ಮಾಡುವವರ ವಿರುದ್ಧ ಮಾತ್ರ ನಿಗಾ ವಹಿಸಲಾಗುತ್ತಿದೆ. ಹಿಂದೆಯೂ ಪೊಲೀಸ್ ಇಲಾಖೆಯಲ್ಲಿ ಇಂತಹ ಶಾಂತಿ ಕದಡುವವರ ಮೇಲೆ ನಿಗಾ ಇರಿಸಲಾಗುತ್ತಿತ್ತು. ಇದೀಗ ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಬಳಿಕ ಅತ್ಯಂತ ಸುವ್ಯವಸ್ಥಿತವಾಗಿ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನವನ್ನು ಮಾಡುತ್ತಿದ್ದು, ಈ ಬಗ್ಗೆ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಇಲಾಖೆಯ ತಾಂತ್ರಿಕ ಸಿಬ್ಬಂದಿ ಫೇಸ್‌ಬುಕ್, ಟ್ವಿಟರ್, ಟ್ರೋಲ್ ಪೇಜ್, ವಾಟ್ಸಾಪ್ ಗುಂಪುಗಳ ಮೇಲೆ ದಿನದ 24 ಗಂಟೆಯೂ ನಿಗಾ ಇರಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ