ಪಶ್ಟಿಮ ಕರಾವಳಿಯನ್ನು ಉತ್ತರ ಭಾರತದೊಂದಿಗೆ ಜೋಡಿಸುವ ಜೀವನಾಡಿ ಕೊಂಕಣ ರೈಲ್ವೆಯನ್ನು ಸಂಪೂರ್ಣ ವಿದ್ಯುತ್ತೀಕರಿಸಿರುವುದರಿಂದ ಕೇಂದ್ರ ಸರ್ಕಾರಕ್ಕೆ ಪ್ರತಿವರ್ಷ 300 ಕೋಟಿ ರು. ಉಳಿತಾಯವಾಗಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಉಡುಪಿ (ಜೂ.21): ಪಶ್ಟಿಮ ಕರಾವಳಿಯನ್ನು ಉತ್ತರ ಭಾರತದೊಂದಿಗೆ ಜೋಡಿಸುವ ಜೀವನಾಡಿ ಕೊಂಕಣ ರೈಲ್ವೆಯನ್ನು ಸಂಪೂರ್ಣ ವಿದ್ಯುತ್ತೀಕರಿಸಿರುವುದರಿಂದ ಕೇಂದ್ರ ಸರ್ಕಾರಕ್ಕೆ ಪ್ರತಿವರ್ಷ 300 ಕೋಟಿ ರು. ಉಳಿತಾಯವಾಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಸೋಮವಾರ ಕೊಂಕಣ ರೈಲ್ವೆಯ ವಿದ್ಯುತ್ತೀಕರಣ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ವರ್ಚುವಲ್ ಪ್ರಸಾರ ಕಾರ್ಯಕ್ರಮವನ್ನು, ಉಡುಪಿ ರೈಲ್ವೆ ನಿಲ್ದಾಣದಲ್ಲಿ ವೀಕ್ಷಿಸಿ ಮಾತನಾಡಿದರು.
ಮಹಾರಾಷ್ಟ್ರದ ರೋಹಾದಿಂದ ಮಂಗಳೂರಿನ ತೋಕೂರುವರೆಗಿನ 740 ಕಿ.ಮೀ ಉದ್ದದ ಕೊಂಕಣ ರೈಲು ಮಾರ್ಗವನ್ನು 1287 ಕೋಟಿ ರು. ವೆಚ್ಚದಲ್ಲಿ ವಿದ್ಯುತ್ತೀಕರಣಗೊಳಿಸಿದ್ದು, ಇದರಿಂದ ಇಂಧನದ ವೆಚ್ಚ 180 ಕೋಟಿ ರು. ಹಾಗೂ ನಿರ್ವಹಣಾ ವೆಚ್ಚ 120 ಕೋಟಿ ರು.ಗಳ ನಿವ್ವಳ ಉಳಿತಾಯವಾಗಲಿದೆ. ಅಲ್ಲದೇ ವಿದ್ಯುತ್ ಬಳಕೆಯಿಂದ ಕಲ್ಲಿದ್ದಲ್ಲಿನ ಬಳಕೆ ಪ್ರಮಾಣ ಕಡಿಮೆಯಾಗಿ, ಪರಿಸರಕ್ಕೆ ಹಾನಿ ಕಡಿಮೆಯಾಗುತ್ತದೆ. ರೈಲಿನ ವೇಗ ಹೆಚ್ಚಲಿದ್ದು, ಜನರಿಗೂ ಪ್ರಯಾಣದ ಅವಧಿ ಕಡಿಮೆಯಾಗಲಿದೆ. ಈ ಮಾರ್ಗದಲ್ಲಿ 16 ಮೈಲ್ ಎಕ್ಸ್‌ಪ್ರೆಸ್ ಹಾಗೂ 10 ಗೂಡ್ಸ್ ರೈಲುಗಳು ಸಂಚರಿಸಲಿವೆ ಎಂದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ: ತನಿಖೆ ಆರಂಭ
ದೇಶದಲ್ಲಿ 2024 ರೊಳಗೆ 67,956 ಕಿ.ಮೀ. ರೈಲು ಮಾರ್ಗವನ್ನು ವಿದ್ಯುತ್ತೀಕರಣಗೊಳಿಸುವ ಯೋಜನೆಯಿದ್ದು, ಈಗಾಗಲೇ 45,881 ಕಿ.ಮೀ. ಯೋಜನೆ ಪೂರ್ಣವಾಗಿದೆ. ಇದಕ್ಕಾಗಿ 13,500 ಕೋಟಿ ರು. ವೆಚ್ಚವಾಗಿದೆ. ಇನ್ನು 2 ವರ್ಷದಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದವರು ಹೇಳಿದರು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಕೊಂಕಣ ರೈಲ್ವೆಯ ಕಾರವಾರ ಪ್ರಾದೇಶಿಕ ಕಚೇರಿಯ ಕ್ಷೇತ್ರಿಯ ಪ್ರಬಂಧಕ ಬಿ.ಬಿ.ನಿಕ್ಕಂ, ಕೊಂಕಣ ರೈಲ್ವೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಕೊಂಕಣ ರೈಲ್ವೆಯ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ನಾಯಕ್ ಸ್ವಾಗತಿಸಿದರು.
Shobha Karandlaje ಲವ್ ಜಿಹಾದ್ ನಿಷೇಧ ಕಾನೂನು ಬೇಕು, ಶೋಭಾ ಆಗ್ರಹ!
ಆಹಾರ ರಫ್ತಿನಲ್ಲಿ ದೇಶಕ್ಕೆ 9ನೇ ಸ್ಥಾನ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8 ವರ್ಷಗಳ ಆಡಳಿತದ ಅವಧಿಯಲ್ಲಿ ಶೌಚಾಲಯ, ವಸತಿ, ವಿದ್ಯುತ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹಿಂದೆದೂ ಆಗದಂತಹ ಅಭಿವೃದ್ಧಿ ಕಾರ್ಯಗಳಾಗಿವೆ. ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ, ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸಲು ಮತ್ತು ಆಹಾರ ಪದಾರ್ಥಗಳನ್ನು ರಫ್ತು ಮಾಡಲು ಹೆಚ್ಚು ಆದ್ಯತೆ ನೀಡಲಾಗುತ್ತಿದ್ದು, ವಿಶ್ವದಲ್ಲಿ ಆಹಾರ ಪದಾರ್ಥಗಳ ರಫ್ತಿನಲ್ಲಿ ದೇಶ ಪ್ರಸ್ತುತ 9ನೇ ಸ್ಥಾನದಲ್ಲಿದೆ ಎಂದು ಸಚಿವ ಶೋಭಾ ಹೇಳಿದರು.