ನಗರಕ್ಕೆ ದುಡಿಯಲು ಹೋದವರು ಹಳ್ಳಿಗಳಿಗೆ ವಾಪಸ್: ಅಂತಹ ಕಾರ್ಮಿಕರಿಗೆ ಗುಡ್ ನ್ಯೂಸ್..!

By Suvarna News  |  First Published May 20, 2020, 3:16 PM IST

ದುಡಿಯಲು ಮನೆ ಮನೆ ಬಿಟ್ಟು ಬೇರೆ-ಬೇರೆ ನಗರಗಳಿಗೆ ವಲಸೆ ಹೋಗಿದ್ದವರು ಈಗ ಕೊರೋನಾ ಲಾಕ್‌ಡೌನ್‌ನಿಂದ ಸ್ವಗ್ರಾಮಗಳಿಗೆ ವಾಪಸ್ ಆಗಿದ್ದಾರೆ. ಅಂತಹ ಕಾರ್ಮಿಕರಿಗೆ ಸಿಎಂ ಗುಡ್‌ ನ್ಯೂಸ್ ಕೊಟ್ಟಿದ್ದಾರೆ.


ಬೆಂಗಳೂರು, (ಮೇ.20): ಕೋವಿಡ್ 19ರ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣಕ್ಕೆ ವಲಸಿಗ ಕಾರ್ಮಿಕರು ಬಹಳ ಸಂಖ್ಯೆಯಲ್ಲಿ ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದು, ಅವರಿಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಅವರು ಇಂದು (ಬುಧವಾರ) ಗೃಹ ಕಚೇರಿ ಕೃಷ್ಣಾದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರವೂ ಉದ್ಯೋಗ ಖಾತರಿ ಯೋಜನೆಗೆ 40 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ನಿಗದಿ ಪಡಿಸಿರುವ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರಿಗೆ ಉದ್ಯೋಗ ದೊರೆಯುವಂತೆ ಹಾಗೂ ನಿಗದಿತ ಅವಧಿಯಲ್ಲಿ ವೇತನ ಪಾವತಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Tap to resize

Latest Videos

ಲಾಕ್ ಡೌನ್ 4.0: ಬೇರೆ ಜಿಲ್ಲೆಗೆ ಹೋಗಲು ಪಾಸ್ ಬೇಕಾ? ಬೇಡ್ವಾ? ಎಲ್ಲಾ ಗೊಂದಲಗಳಿಗೆ ತೆರೆ

ಕೋವಿಡ್ 19 ನಿರ್ವಹಣೆಗೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ಜನ ಜಾಗೃತಿ ಮೂಡಿಸುವುದು, ಲಾಕ್ ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳ ಮನೆ ಬಾಗಿಲಿಗೆ ವಿತರಣೆ, ಸೌಲಭ್ಯಗಳ ವಿತರಣೆ, ಮನೆ-ಮನೆಗೆ ಭೇಟಿ ನೀಡಿ ಹೋಮ್ ಕ್ವಾರಂಟೈನ್ ಪರಿಶೀಲನೆ, ದೈನಂದಿನ ಮಾಹಿತಿ ಸಂಗ್ರಹ, ಸಾಂಸ್ಥಿಕ ಕ್ವಾರಂಟೈನ್ ನಿರ್ವಹಣೆ ಮೇಲ್ವಿಚಾರಣೆ ವಹಿಸುತ್ತಿದೆ. ಇದಲ್ಲದೆ, ಸ್ವಸಹಾಯ ಸಂಘಗಳು 8 ಲಕ್ಷ ಮಾಸ್ಕ್ ತಯಾರಿಸಿ ವಿತರಿಸುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರಲ್ಲಿ ಆತ್ಮವಿಶ್ವಾಸ ಮೂಡಿಸಲು ಸಾಧ್ಯವಾಗಿರುವ ಕುರಿತು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ಕುಡಿಯುವ ನೀರಿನ ಬಗ್ಗೆ ಚರ್ಚೆ
ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸುವಂತೆ ನಿರ್ದೇಶನ ನೀಡಿದರು. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಇರುವ 14 ಜಿಲ್ಲೆಗಳಲ್ಲಿ 659 ಗ್ರಾಮಗಳಲ್ಲಿ 389 ಟ್ಯಾಂಕರ್ ಮತ್ತು 706 ಖಾಸಗಿ ಬೋರ್ ವೆಲ್ ಗಳಿಂದ ನೀರು ಪೂರೈಕೆ ಆಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ, ರಾಜ್ಯ ಸರ್ಕಾರದ ಜಲಧಾರೆ ಯೋಜನೆ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

click me!