ಇಸ್ರೋದ ಸ್ಪೇಡೆಕ್ಸ್ ಯೋಜನೆಯ ಯಶಸ್ಸಿಗೆ ನಿರ್ಮಲಾನಂದನಾಥ ಶ್ರೀ ಅಭಿನಂದನೆ

Published : Jan 17, 2025, 11:53 AM ISTUpdated : Jan 17, 2025, 11:58 AM IST
ಇಸ್ರೋದ ಸ್ಪೇಡೆಕ್ಸ್ ಯೋಜನೆಯ ಯಶಸ್ಸಿಗೆ ನಿರ್ಮಲಾನಂದನಾಥ ಶ್ರೀ ಅಭಿನಂದನೆ

ಸಾರಾಂಶ

ಸ್ಪೇಡೆಕ್ಸ್ ಯೋಜನೆ ಬಾಹ್ಯಾಕಾಶ ಡಾಕಿಂಗ್ ಸಾಮರ್ಥ್ಯವನ್ನು ಯಶಸ್ವಿಯಾಗಿ ಪ್ರದರ್ಶಿಸಿದೆ. ಇದಕ್ಕಾಗಿ ಅವಿರತವಾಗಿ ಶ್ರಮಿಸಿದ ಇಸ್ರೋದ ನಿಕಟಪೂರ್ವ ಅಧ್ಯಕ್ಷ ಎಸ್. ಸೋಮನಾಥ್, ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್. ನಾರಾಯಣನ್, ಇಸ್ರೋದ ಅಸಾಧಾರಣ ವಿಜ್ಞಾನಿಗಳು ಮತ್ತು ಔದ್ಯಮಿಕ ಸಹಯೋಗಿಗಳಿಗೆ ಅಭಿನಂದನೆ ಸಲ್ಲಿಸಿದ ನಿರ್ಮಲಾನಂದನಾಥ ಶ್ರೀ

ಮಂಡ್ಯ(ಜ.17):  ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧಿಪತಿ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷಿ ಸ್ಪೇಡೆಕ್ಸ್ ಯೋಜನೆಯ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು, ಸ್ಪೇಡೆಕ್ಸ್ ಯೋಜನೆ ಬಾಹ್ಯಾಕಾಶ ಡಾಕಿಂಗ್ ಸಾಮರ್ಥ್ಯವನ್ನು ಯಶಸ್ವಿಯಾಗಿ ಪ್ರದರ್ಶಿಸಿದೆ. ಇದಕ್ಕಾಗಿ ಅವಿರತವಾಗಿ ಶ್ರಮಿಸಿದ ಇಸ್ರೋದ ನಿಕಟಪೂರ್ವ ಅಧ್ಯಕ್ಷ ಎಸ್. ಸೋಮನಾಥ್, ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್. ನಾರಾಯಣನ್, ಇಸ್ರೋದ ಅಸಾಧಾರಣ ವಿಜ್ಞಾನಿಗಳು ಮತ್ತು ಔದ್ಯಮಿಕ ಸಹಯೋಗಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಅಂತರಿಕ್ಷದಲ್ಲಿ ಇಸ್ರೋ ಡಾಕಿಂಗ್‌: ಈ ಸಾಧನೆ ಮಾಡಿದ ಜಗತ್ತಿನ 4ನೇ ದೇಶ!

ಈ ಐತಿಹಾಸಿಕ ಸಾಧನೆ, ಬಾಹ್ಯಾಕಾಶದಲ್ಲಿ ಉಪಗ್ರಹಗಳ ಡಾಕಿಂಗ್ ಸಾಮರ್ಥ್ಯ ಗಳಿಸಿರುವ ಕೇವಲ ನಾಲ್ಕನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮುವಂತೆ ಮಾಡಿದೆ. ಇದು ಇಸ್ರೋ ಹೊಂದಿರುವ ಪ್ರಾವೀಣ್ಯತೆಯನ್ನು ಪ್ರದರ್ಶಿಸಿದ್ದು, ಮುಂದಿನ ತಲೆಮಾರುಗಳಲ್ಲಿ ಬಾಹ್ಯಾಕಾಶ ಅನ್ವೇಷಣೆಯ ಕುರಿತು ಆಸಕ್ತಿ ಮತ್ತು ಸ್ಫೂರ್ತಿ ನೀಡಿದೆ ಎಂದು ಶ್ರೀಗಳು ಶ್ಲಾಘಿಸಿದ್ದಾರೆ.

"ಸ್ಪೇಡೆಕ್ಸ್ ಯೋಜನೆ ತನ್ನ ಉಡಾವಣಾ ವಾಹನದ ನಾಲ್ಕನೇ ಹಂತವಾದ ಪೋಯಮ್-4ನಲ್ಲಿ (POEM-4) ಇಸ್ರೋ, ಶಿಕ್ಷಣ ಸಂಸ್ಥೆಗಳು ಮತ್ತು ಸ್ಟಾರ್ಟಪ್‌ಗಳು ನಿರ್ಮಿಸಿದ ಪೇಲೋಡ್‌ಗಳನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ದಿತ್ತು. ಈ ಪೇಲೋಡ್‌ಗಳಲ್ಲಿ, ಆದಿಚುಂಚನಗಿರಿ ಮಠದ ಬಿಜಿಎಸ್ ಅರ್ಪಿತ್ ಪೇಲೋಡ್ ಸಹ ಸೇರಿತ್ತು. ಈಗಾಗಲೇ ಬಾಹ್ಯಾಕಾಶ ಸೇರಿರುವ ಈ ಪೇಲೋಡ್, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ನವೀನ ತಂತ್ರಜ್ಞಾನ ಜಾಗತಿಕ ಅಮೆಚೂರ್ ಕ್ಲಬ್‌ಗಳಿಗೆ ಬೆಂಬಲ ಒದಗಿಸಲಿದೆ. ಈ ಯೋಜನೆ ಯಶಸ್ವಿಯಾಗುವಂತೆ ಸಹಕಾರ ನೀಡಿದ ಇಸ್ರೋ ಸಂಸ್ಥೆಗೆ ಆದಿಚುಂಚನಗಿರಿ ಮಠ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತದೆ" ಎಂದು ನಿರ್ಮಲಾನಂದನಾಥ  ಸ್ವಾಮೀಜಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್