
ಬೆಳಗಾವಿ (ನ.09): ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಶ್ರೀನಿವಾಸ ಥಾಣೇದಾರ ಅಮೆರಿಕದ ಸಂಸತ್ತಿಗೆ ಎರಡನೇ ಬಾರಿಗೆ ಚುನಾಯಿತಗೊಂಡಿದ್ದಾರೆ. ಕಮಲಾ ಹ್ಯಾರೀಸ್ ನೇತೃತ್ವದ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಮಿಚಿಗನ್ ಕ್ಷೇತ್ರದಿಂದ ಚುನಾಯಿತಗೊಂಡು ಬೆಳಗಾವಿ ಕೀರ್ತಿ ಪತಾಕೆ ಹಾರಿಸಿದ್ದಾರೆ. ಹಲವಾರು ವರ್ಷಗಳಿಂದ ಅಮೆರಿಕದಲ್ಲಿ ವಾಸವಾಗಿರುವ ಅವರು, 2020 ಹಾಗೂ 2024ರಲ್ಲಿ ಅಮೆರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ತಮ್ಮ ಗೆಲುವಿಗೆ ಕಾರಣರಾದ ಮತದಾರರಿಗೆ ತಮ್ಮ ಫೇಸ್ಬುಕ್ ಖಾತೆ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. ಬೆಳಗಾವಿಯ ಸರ್ಕಾರಿ ಚಿಂತಾಮಣರಾವ್ ಶಾಲೆ ಮತ್ತು ಪಿಯುಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಥಾಣೇದಾರ ಅವರು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬಿಎಸ್‌ಸಿ ಪದವಿ ಮುಗಿಸಿದ್ದಾರೆ. ಮುಂಬೈ ವಿವಿಯಲ್ಲಿ ರಸಾಯನ ಶಾಸ್ತ್ರ ವಿಷಯದಲ್ಲಿ ಎಂಎಸ್‌ಸಿ ವ್ಯಾಸಂಗ ಮಾಡಿದ್ದಾರೆ. ಬೆಳಗಾವಿಯ ಮೀರಾಪುರ ಗಲ್ಲಿಯಲ್ಲೇ ತಮ್ಮ ಬಾಲ್ಯ ಕಳೆದಿದ್ದಾರೆ.
ಕ್ರೈಂ ವೇಳೆ ಪತಿ ಜತೆ ಇದ್ದಾಕ್ಷಣ ಪತ್ನಿ ಆರೋಪಿ ಅಲ್ಲ: ಹೈಕೋರ್ಟ್ ಸ್ಪಷ್ಟನೆ
ಉನ್ನತ ವ್ಯಸಾಂಗಕ್ಕೆ 1979ರಲ್ಲಿ ಅಮೆರಿಕಕ್ಕೆ ತೆರಳಿ ಪಾಲಿಮರ್ ಕೆಮಿಸ್ಟ್ರಿ ವಿಷಯದಲ್ಲಿ ಪಿಎಚ್‌ಡಿ ಪಡೆದಿರುವ ಅವರು ಅಮೇರಿಕದ ಮಿಚಿಗನ್ ವಿವಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಾಧ್ಯಾಪಕ ಹುದ್ದೆಗೆ ರಾಜೀನಾಮೆ ನೀಡಿ ಉದ್ಯಮಿಯಾದ ಥಾಣೇಧಾರ್ ಈಗ ಅಮೇರಿಕ ಸಂಸತ್ ಪ್ರತಿನಿಧಿಯಾಗಿದ್ದಾರೆ. ಜೊತೆಗೆ ವಿಜ್ಞಾನಿ, ಉದ್ಯಮಿ ಮತ್ತು ಇಂಗ್ಲಿಷ್ ಸಾಹಿತಿಯೂ ಆಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ