
ತುಮಕೂರು (ಫೆ.29): ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ, ವೀರಶೈವ, ಲಿಂಗಾಯತ ಸಮುದಾಯದವರ ತೀವ್ರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ಸಿದ್ದಪಡಿಸಿದ ವರದಿಯನ್ನು ಅಧಿಕೃತವಾಗಿ ಗುರುವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವರದಿ ಸ್ವೀಕರಿಸಿದ ವಿಚಾರವಾಗಿ ಇಂದು ಸಿದ್ದಗಂಗಾ ಮಠದಲ್ಲಿ ಸಿದ್ದಗಂಗಾ ಶ್ರೀ ಸಿದ್ದಲಿಂಗೇಶ್ವರ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಜಾತಿ ಗಣತಿ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ಗೊತ್ತಿಲ್ಲ. ಇದಕ್ಕೆ ಯಾರೂ ವಿರೋಧ ಮಾಡಲು ಸಾಧ್ಯವಿಲ್ಲ. ಏಕೆಂದರೆ ಜಾತಿ ಆಧಾರದ ಮೇಲೆ ಸವಲತ್ತುಗಳನ್ನ ಕೊಡಬೇಕಾಗುತ್ತೆ. ಆದರೆ ಜಾತಿ ಗಣತಿ ವರದಿ ವೈಜ್ಞಾನಿಕವಾಗಿ ಆಗಿಲ್ಲ, ವ್ಯಾಪಕವಾಗಿ ಎಲ್ಲರನ್ನೂ ಸಂದರ್ಶನ ಮಾಡಿಲ್ಲ ಎಂಬ ಕೂಗು ಕೇಳಿ ಬಂದಿದೆ. ಗಣತಿ ವಿಚಾರದಲ್ಲಿ ಎಲ್ಲರಿಗೂ ಸಂದರ್ಶನ ಆಗಿದೆಯೋ ಗೊತ್ತಿಲ್ಲ. ಆದರೆ ನನ್ನನ್ನಂತೂ ಇದುವರೆಗೂ ಯಾರೂ ಬಂದು ಸಂದರ್ಶನ ಮಾಡಿಲ್ಲ ಎಂದು ಸ್ವಾಮೀಜಿ ತಿಳಿಸಿದರು.
ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ; 2 ಮೂಟೆಗಳಲ್ಲಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗಡೆ
ಎಲ್ಲರನ್ನೂ ಕೇಳಿ, ಪ್ರತಿಯೊಬ್ಬರನ್ನೂ ವಿಚಾರಿಸಿ ವರದಿ ಸಿದ್ಧಪಡಿಸಿದರೆ ಸೂಕ್ತ. ಎಲ್ಲರಿಗೂ ಸೌಲಭ್ಯ ಲಭ್ಯವಾಗುವ ರೀತಿಯಲ್ಲಿ ಮಾಡಿದರೆ ಉಪಕಾರವಾಗುತ್ತದೆ.ನಾನ್ಯಾವ ಜಾತಿ, ಏನು ಅಂತಾ ಯಾರೂ, ಯಾವ ಮಾಹಿತಿಯನ್ನೂ ಕೇಳಿಲ್ಲ. ಎಲ್ಲರ ಬಳಿಯೂ ಹೋಗಿದ್ವಿ ಅಂತಾ ಹೇಳ್ತಾರಲ್ವಾ? ನನ್ನ ಬಳಿಯೇ ಬಂದಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ ವರದಿ ವೈಜ್ಞಾನಿಕವಾಗಿ ಆಗಿಲ್ಲ ಎಂದ ಶ್ರೀಗಳು.
ಜಾತಿ ಗಣತಿ ವರದಿ ಮಾಡುವಾಗ ಪ್ರತಿಯೊಬ್ಬರನ್ನು ಕೇಳ್ತಾರಾ? ಅಥವಾ ಸಮಾಜದ ಮುಖಂಡರನ್ನ ಮಾತ್ರ ಕೇಳ್ತಾರಾ ಏನು ಅಂತಾ ನನಗೂ ಗೊತ್ತಿಲ್ಲ. ಹಾಗಾಗಿ ಅದರ ಬಗ್ಗೆ ಮಾತನಾಡೋಕೆ ಹೋಗಲ್ಲ. ಎಲ್ಲರನ್ನೂ ಒಳಗೊಂಡಂತ ವರದಿ ಸ್ವೀಕಾರವಾಗಲಿ ಮತ್ತು ಆಯಾ ಜಾತಿಯ ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯಗಳು ವಿತರಣೆ ಆಗಲಿ ಎಂದರು.
ಅವ್ನಲ್ಲಾ.. ಅವ್ನಲ್ಲಾ.. ಇಲ್ಲಿದ್ದಾನೆ ನೋಡಿ, ಪಾಕ್ ಪರ ಘೋಷಣೆ ಕೂಗಿದ ಆರೋಪಿ; ಬಿಜೆಪಿ ಆರೋಪ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ