
ತುಮಕೂರು (ಜೂ.16): ಜಿಲ್ಲೆಗೆ ತನ್ನದೇ ಅಸ್ತಿತ್ವ ಹಾಗೂ ಪರಂಪರೆ ಇದ್ದು ತುಮಕೂರು ಹೆಸರನ್ನು ಹಾಗೆ ಉಳಿಸಿಕೊಳ್ಳುವುದು ಮುಖ್ಯ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ಧಿ ದೃಷ್ಟಿಯಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮನಗರವನ್ನು ಬೆಂಗಳೂರು ದಕ್ಷಿಣ ಮಾಡಿದ್ದಾರೆ. ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡುವ ವಿಷಯದ ಬಗ್ಗೆ ಯಾವ ದೃಷ್ಟಿಯಲ್ಲಿ ಗೃಹ ಸಚಿವ ಡಾ। ಜಿ.ಪರಮೇಶ್ವರ್ ಹೇಳಿದ್ದಾರೋ ಗೊತ್ತಿಲ್ಲ. ಆದರೆ ತುಮಕೂರು ಹೆಸರು ಉಳಿಸಿಕೊಳ್ಳುವುದು ಮುಖ್ಯ ಎಂದರು.
ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡುವ ಪ್ರಸ್ತಾಪ ಹೇಳಿಕೆ ರೂಪದಲ್ಲಿದೆ. ಮುಂದಿನ ದಿನಗಳಲ್ಲಿ ಏನಾಗುತ್ತದೆಯೋ ಕಾದು ನೋಡಬೇಕು. ಬದಲಾವಣೆ ಆದರೆ ಏನು ಉಪಯೋಗ ಆಗದಿದ್ದರೆ ಏನು ಅಂತ ಅದರ ಸಾಧಕ ಬಾಧಕಗಳ ಬಗ್ಗೆ ಚಿಂತನೆ ಮಾಡಿದರೆ, ಆನಂತರ ಹೇಳಬಹುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ