
ಬೆಂಗಳೂರು(ಫೆ.24): ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸಭೆ ಹಾಗೂ ವಿಧಾನಪರಿಷತ್ ಕಲಾಪಗಳಿಗೆ ಗೈರು ಹಾಜರಾಗಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ 12 ಗಂಟೆವರೆಗೂ ವಿಧಾನಸೌಧದಲ್ಲೇ ಉಳಿದುಕೊಂಡು ಬಜೆಟ್‌ಗೆ ಉತ್ತರ ನೀಡಲು ಸಿದ್ಧತೆಯಲ್ಲಿ ತೊಡಗಿದ್ದರು. ಈ ವೇಳೆ ಊಟದ ಬದಲು ಸ್ನ್ಯಾಕ್ಸ್ ಮಾತ್ರ ತಿಂದಿದ್ದರು.
ಸಿದ್ದರಾಮಯ್ಯಗೆ ಸರ್ಕಾರ 5 ವರ್ಷ ನಡೆಯುತ್ತೆ ಅನ್ನೋದೆ ಖಾತ್ರಿಯಿಲ್ಲ: ಭಗವಂತ ಖೂಬಾ
ಬಳಿಕ ತಡರಾತ್ರಿ ಮನೆಗೆ ಹೋಗಿದ್ದು ಬೆಳಗ್ಗೆ ಫುಡ್ ಪಾಯಿಸನ್ ಸಮಸ್ಯೆ ಉಂಟಾಗಿದೆ. ಹೀಗಾಗಿ ಮನೆಯಲ್ಲೇ ವೈದ್ಯರಿಂದ ಚಿಕಿತ್ಸೆ ಪಡೆದು ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಮೊರೆ ಹೋಗಿದ್ದರಿಂದ ಅಧಿವೇಶನಕ್ಕೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನವನ್ನು ಒಂದು ದಿನ ವಿಸ್ತರಿಸಿ ಮುಖ್ಯಮಂತ್ರಿಗಳಿಂದ ಸೋಮವಾರ ಉತ್ತರ ಕೊಡಿಸಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ