ಬೆಂಗಳೂರಿನ ಪಾದರಾಯನಪುರ ವಾರ್ಡ್‌ನಲ್ಲಿ ಗಲಭೆ| ತಪಾಸಣೆಗೆ ಬಂದ ವೈದ್ಯರು ಹಾಗೂ ಪೊಲಿಸರ ಮೇಲೆ ದಾಳಿ| ಕೊರೋನಾ ವಾರಿಯರ್ಸ್ ಮೇಲಿನ ದಾಳಿಗೆ ರಾಜ್ಯಾದ್ಯಂತ ವ್ಯಾಪಕ ಖಂಡನೆ
ಬೆಂಗಳೂರು(ಏ.20): ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ನಡೆದಿದ್ದ ಗಲಭೆ ಪ್ರಕರಣ ಸದ್ಯ ದೇಶದಾದ್ಯಂತ ಸದ್ದು ಮಾಡುತ್ತಿದೆ. ಕೊರೋನಾ ಸಮರದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಸಿಬ್ಬಂದಿ ಮೇಲೆ ನಡೆದ ಈ ದಾಳಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹೀಗಿರುವಾಗ ರಾಜಕೀಯ ನಾಯಕರು ಕೂಡಾ ಈ ಸಂಬಂಧ ಕಠಿಣ ಕ್ರಮ ಕೈಗೊಳಂಡು, ಗಲಭೆಯಲ್ಲಿ ಪಾಲ್ಗೊಂಡವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಟ್ವೀಟ್ ಮೂಲಕ ಇಂತಹುದೇ ಮನವಿ ಮಾಡಿಕೊಂಡಿದ್ದಾರೆ.
ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ.
ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಅವರನ್ನು ಒತ್ತಾಯಿಸುತ್ತೇನೆ.
1/2
ಹೌದು ಇಡೀ ವಿಶ್ವದ ನಿದ್ದೆಗೆಡಿಸಿರುವ ಕೊರೋನಾ ವೈರಸ್, ದೇಶವನ್ನೂ ಕಾಡಿದೆ. ಹೀಗಾಗಿ ದೇಶದಾದ್ಯಂತ ಲಾಕ್‌ಡೌನ್ ಹೇರಲಾಗಿದ್ದು, ಹಾಟ್‌ಸ್ಪಪಾಟ್‌ಗಳನ್ನು ಗುರುತಿಸಿ ಸೀಲ್ ಮಾಡಲಾಗಿದೆ. ಹೀಗೆ ಸೀಲ್ ಮಾಡಿದ ಪ್ರದೇಶಗಳಲ್ಲಿ ಬೆಂಗಳೂರಿನ ಪಾದರಾಯನಪುರ ವಾರ್ಡ್ ಕೂಡಾ ಒಂದು. ಆದರೆ ಕಳೆದ ರಾತ್ರಿ ಇಲ್ಲಿ ತಪಾಸಣೆಗೆ ತೆರಳಿದ್ದ ವೈದ್ಯ ಸಿಬ್ಬಂದಿ ಹಾಗೂ ಪೊಲಿಸರ ಮೇಲೆ ಇಲ್ಲಿನ ನಿವಾಸಿಗಳು ದಾಳಿ ನಡೆಸಿದ್ದು, ರಾಜ್ಯಾದ್ಯಂತ ಈ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಮಾಜಿ ಸಿಎಂ ಸಿದ್ದರಾಮಯ್ಯ ಈ ಸಂಬಂಧ ಟ್ವೀಟ್ ಮಾಡಿದ್ದು, ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಕರ್ನಾಟಕ ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇನೆ' ಎಂದಿದ್ದಾರೆ.
undefined
ಪಾದರಾಯನಪುರ ಹಿಂಸಾಚಾರ ಬೆನ್ನಲ್ಲೇ ಶಾಸಕ ಜಮೀರ್ ಅಹ್ಮದ್ ಟ್ವೀಟ್!
ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ.
ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ.
ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ.
2/2
ಪಾದರಾಯನಪುರ ಪುಂಡರ ವಿರುದ್ಧ ನೈಟ್ ಆಪರೇಷನ್: ಹಲವರ ವಶ!
ಅಲ್ಲದೇ ಜನರಿಗೂ ಸಂಯಮ ಕಾಪಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿರುವ ಸಿದ್ದರಾಮಯ್ಯ 'ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ' ಎಂದಿದದ.