
ಬೆಂಗಳೂರು(ಫೆ.19): ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರನ್ನು ಹಿರಿಯ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಡಿ ಹೊಗಳಿದ್ದಾರೆ. ನಗರದ ಪುಟ್ಟಣ್ಣ ಚೆಟ್ಟಿಪುರಭವನದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯ ವಿಧಾನ ಪರಿಷತ್‌ನ ನೂತನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಹರಿಪ್ರಸಾದ್‌ಗೆ ಶುಭಕೋರಿದರು.
ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಇತರೆ ಕಾಂಗ್ರೆಸ್ ನಾಯಕರು ಬಿ.ಕೆ.ಹರಿಪ್ರಸಾದ್ ಅವರನ್ನು ಹಾಡಿ ಹೋಗಳಿದರು.
ಸಿದ್ದರಾಮಯ್ಯ ಅವರು ಮಾತನಾಡಿ, ಬಿ.ಕೆ.ಹರಿಪ್ರಸಾದ್ ಪಕ್ಷದ ಶಿಸ್ತಿನ ಸಿಪಾಯಿ, ಅಪಾರ ಅನುಭವವಿದೆ. ರಾಜ್ಯ, ದೇಶ ಮಾತ್ರವಲ್ಲ ವಿದೇಶದ ರಾಜಕಾರಣವೂ ಗೊತ್ತು. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ಕಾರ್ಯಕ್ರಮಗಳನ್ನು ಮೈಗೂಡಿಸಿಕೊಂಡು ಬೆಳೆದವರು. ಸಾಮಾಜಿಕ ಬದ್ಧತೆಯೂ ಇದೆ. ಇಂದಿರಾ ಗಾಂಧಿ ಅವರಿಂದ ಈಗ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಹೀಗೆ ಸುಮಾರು ದಶಕಗಳ ಕಾಲ ಪಕ್ಷದ ಎಲ್ಲಾ ಅಧಿನಾಯಕರೊಂದಿಗೆ ಕೆಲಸ ಮಾಡಿದ ಅವಕಾಶ ಸಿಕ್ಕಿದ್ದರೆ ಅದು ಬಿ.ಕೆ.ಹರಿಪ್ರಸಾದ್ ಅವರಿಗೆ ಮಾತ್ರ. ಇಷ್ಟೆಲ್ಲಾ ಅನುಭವದಿಂದ ಎಷ್ಟೇ ಬೆಳೆದರೂ ದುಡ್ಡಿನ ಹಿಂದೆ ಎಂದೂ ಹೋಗಿಲ್ಲ. ಕೈ ಬಾಯಿ ಶುದ್ಧವಾಗಿಟ್ಟುಕೊಂಡಿದ್ದಾರೆ. ಇಂತಹ ಒಬ್ಬ ಪಕ್ಷದ ಶಿಸ್ತಿನ ಸಿಪಾಯಿಯನ್ನು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಸ್ವಾಗತಾರ್ಹ. ಇದರಿಂದ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಒಳ್ಳೆದಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
KS Eshwarappa Statement : ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಚಿಂತನೆ
ಸೂಕ್ತ ಹುದ್ದೆಗೆ ಸೂಕ್ತ ವ್ಯಕ್ತಿ ಆಯ್ಕೆ:
ಡಿ.ಕೆ.ಶಿವಕುಮಾರ್ ಮಾತನಾಡಿ, ಬಿ.ಕೆ.ಹರಿಪ್ರಸಾದ್ ಅವರಿಗೆ ನಾನು ಅಧಿಕಾರ ಕೊಡಿಸಿದ್ದೇನೆಂದರೆ ಅದು ತಪ್ಪು. ಅವರ ಅವರ ಅರ್ಹತೆ, ಪಕ್ಷ ನಿಷ್ಠೆಗೆ ಪಕ್ಷದಿಂದ ಸಿಕ್ಕ ಫಲ. ನಾನು ಕೊಂಡಿಯಷ್ಟೆ. ಸೂಕ್ತ ಹುದ್ದೆಗೆ ಸೂಕ್ತ ವ್ಯಕ್ತಿಯ ಆಯ್ಕೆಯಾಗಿದೆ. ಅವರು ನನಗಿಂತ ಹಿರಿಯರು, ಯಾವತ್ತೂ ಅಧಿಕಾರ ಹುಡುಕಿಕೊಂಡು ಹೋದವರಲ್ಲ. ಹೋಗಿದ್ದರೆ ಎಂದೋ ಸಚಿವರಾಗಬಹುದಿತ್ತು. ಅದರ ಬದಲು ಅವರು ಪಕ್ಷದಲ್ಲಿ ನೂರಾರು ನಾಯಕರನ್ನು ತಯಾರು ಮಾಡಿದ್ದಾರೆ ಎಂದು ಕೊಂಡಾಡಿದರು.
Hijab Controversy: ಬಿಜೆಪಿ ನಡೆಸುತ್ತಿರುವ ಕುತಂತ್ರ: ಕಮಲ ನಾಯಕರ ವಿರುದ್ಧ ಹರಿಹಾಯ್ದ ಹರಿಪ್ರಸಾದ್
ಕಾರಣಾಂತರದಿಂದ ಪಕ್ಷದ ಪದಾಧಿಕಾರಿಗಳ ನೇಮಕ ಆಗಿಲ್ಲ. ಮೇಕೆದಾಟು ಪಾದಯಾತ್ರೆ ಮುಗಿಯುವ ವೇಳೆಗೆ ಪಟ್ಟಿಬಿಡುಗಡೆ ಮಾಡಲು ಪ್ರಯತ್ನಿಸುತ್ತೇನೆ. ಪದಾಧಿಕಾರಿಯಾದ ಕೂಡಲೇ ದೊಡ್ಡ ಸ್ಥಾನವಲ್ಲ. ಕಾರ್ಯಕರ್ತರೆಲ್ಲರೂ ಸರಿಸಮಾನರೇ. ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಒಂದಲ್ಲಾ ಒಂದು ಅವಕಾಶ ಸಿಗುತ್ತದೆ. ಪ್ರಾಮಾಣಿಕವಾಗಿ ದುಡಿಯಿರಿ.
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ಇಂದಿರಾ ಗಾಂಧಿ ಅವರಿಂದ ಹಿಡಿದು ಈಗ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರ ವರೆಗಿನ ಪಕ್ಷದ ಎಲ್ಲ ನಾಯಕರೊಂದಿಗೆ ಕೆಲಸ ಮಾಡಿದ್ದೇ ನಾನು ಮಾಡಿದ ಬೆಲೆ ಕಟ್ಟಲಾಗದ ಆಸ್ತಿ. ಹಣ ಇರುವವರಿಗೆ ಮಾತ್ರ ರಾಜಕಾರಣ ಅಲ್ಲ. ಕಾಂಗ್ರೆಸ್‌ನಲ್ಲಿ ಪಕ್ಷ ನಿಷ್ಠೆ ಇದ್ದರೆ ಸ್ಥಾನಮಾನ ಕಾರ್ಯಕರ್ತನನ್ನು ಹುಡುಕಿಕೊಂಡು ಬರುತ್ತದೆ. ನನ್ನ ಪಕ್ಷ ನಿಷ್ಠೆಯನ್ನು ಗುರುತಿಸಿ ಪಕ್ಷ ನನಗೆ ಸಾಕಷ್ಟುಅವಕಾಶಗಳನ್ನು ನೀಡಿದೆ. ಈಗ ನೀಡಿರುವ ವಿಧಾನ ಪರಿಷತ್ ಪ್ರತಿಪಕ್ಷ ಸ್ಥಾನವನ್ನೂ ಸಮರ್ಥವಾಗಿ ನಿಭಾಯಿಸುತ್ತೇನೆ. ನನಗೆ ಐಟಿ, ಇಡಿ, ಸಿಬಿಐ ಯಾರ ಭಯವೂ ಇಲ್ಲ. ದೇಶದ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡದ ಬಿಜೆಪಿಯ ರಣ ಹೇಡಿಗಳ ವಿರುದ್ಧ ನನ್ನ ಹೋರಾಟ ನಿರಂತರವಾಗಿರುತ್ತದೆ.
-ಬಿ.ಕೆ.ಹರಿಪ್ರಸಾದ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ
ನಗರದ ಪುಟ್ಟಣ್ಣ ಚೆಟ್ಟಿಪುರಭವನದಲ್ಲಿ ಗುರುವಾರ ಆಯೋಜಿಸಿದ್ದ ಸಮಾರಂಭದಲ್ಲಿ ವಿಧಾನ ಪರಿಷತ್‌ನ ನೂತನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸದ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿನಂದಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ