ಗುಜರಾತ್‌ನಲ್ಲಿ ವಿವಿ ಆಡಳಿ ತಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಲಾಗಿದೆ. ಅಲ್ಲಿ ಘಟಿಕೋತ್ಸವದ ಅಧ್ಯಕ್ಷತೆ ಸೀಮಿತಗೊಳಿಸುವ ಮೂಲಕ ವಿವಿಗಳ ಕುಲಪತಿಯಾಗಿರುವ ರಾಜ್ಯಪಾಲರ ಪ್ರಮುಖ ಅಧಿಕಾರವನ್ನು ಕಡಿತಗೊಳಿಸಲಾಗಿದೆ.
ಬೆಂಗಳೂರು(ಡಿ.05): ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ (ಕೆಎಸ್‌ಯು) 2000ಕ್ಕೆ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿ ರಾಜ್ಯಪಾಲರಿಗೆ ಇರುವ ಅಧಿಕಾರ ಮತ್ತಷ್ಟು ಮೊಟಕುಗೊಳಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸುಳಿವು ನೀಡಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಗುಜರಾತ್‌ನಲ್ಲಿ ವಿವಿ ಆಡಳಿ ತಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಲಾಗಿದೆ. ಅಲ್ಲಿ ಘಟಿಕೋತ್ಸವದ ಅಧ್ಯಕ್ಷತೆ ಸೀಮಿತಗೊಳಿಸುವ ಮೂಲಕ ವಿವಿಗಳ ಕುಲಪತಿಯಾಗಿರುವ ರಾಜ್ಯಪಾಲರ ಪ್ರಮುಖ ಅಧಿಕಾರವನ್ನು ಕಡಿತಗೊಳಿಸಲಾಗಿದೆ.
ಬಿಜೆಪಿ ವಿರುದ್ಧ ಕಾಂಗ್ರೆಸ್ ಅಸ್ತ್ರ: ಭ್ರಷ್ಟಾಚಾರ ಕೇಸಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಂಪುಟ ಅಸ್ತು
ತನ್ಮೂಲಕ ಗುಜರಾತ್ ಸರ್ಕಾರಕ್ಕೆ ವಿಶ್ವವಿದ್ಯಾನಿಲಯ ನಿರ್ವಹಣೆ ಮೇಲೆ ಹೆಚ್ಚಿನ ನಿಯಂತ್ರಣ ನೀಡಲಾಗಿದೆ. ಅಲ್ಲಿ ಕುಲಪತಿಗಳ ಆಯ್ಕೆ ಸಮಿತಿ ಅಧ್ಯಕ್ಷರನ್ನು ರಾಜ್ಯಪಾಲರ ಬದಲು ಸರ್ಕಾರ ನಾಮನಿರ್ದೇಶನ ಮಾಡಬಹುದಾಗಿದೆ. ಅದೇ ಮಾದರಿಯನ್ನು ರಾಜ್ಯದಲ್ಲೂ ಏಕೆ ಅನುಸರಿಸಬಾರದು ಎಂದು ಪ್ರಶ್ನಿಸಿದ ಅವರು, ಕೆಎಸ್‌ಯು ಕಾಯ್ದೆ ತಿದ್ದುಪಡಿ ಸಂಬಂಧ ರಚಿಸಿದ್ದ ಸಮಿತಿ ವರದಿ ನೀಡಿದೆ. ಅದನ್ನು ಕಾನೂನು ಇಲಾಖೆ ಅಭಿಪ್ರಾಯಕ್ಕೆ ಕಳುಹಿಸಲಾಗಿದೆ. ಅಭಿಪ್ರಾಯ ಬಂದ ಬಳಿಕ ಮಸೂದೆ ತಯಾರಿಸಿ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದರು.
undefined
ಕಾಯ್ದೆ ತಿದ್ದುಪಡಿ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ನಿರಾಕರಿಸಿದ ಸಚಿವ ಸುಧಾಕರ್, ಮಸೂದೆಯಲ್ಲಿ ಪ್ರಸ್ತಾಪಿತ ತಿದ್ದುಪಡಿಗಳು ಕುಲಪತಿಗಳ ಅವಧಿ ಸೇರಿ ಹಲವು ವಿಷಯಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು. ಈ ಹಿಂದೆ ಉನ್ನತ ಶಿಕ್ಷಣ ಸಚಿವರಾಗಿದ್ದಾಗ ಡಾ.ಜಿ.ಪರಮೇಶ್ವರ್ ಅವರು ಕೆಎಸ್‌ಯು ಕಾಯ್ದೆಗೆ ತಿದ್ದುಪಡಿ ತರಲು ಪ್ರಯತ್ನಿಸಿದ್ದರು. ಆದರೆ ದುರದೃಷ್ಟವಶಾತ್ ಭಾರತದ ರಾಷ್ಟ್ರಪತಿಗಳು ತಿದ್ದುಪಡಿ ಮಸೂದೆ ಅಂಗೀಕರಿಸಲಿಲ್ಲ. ಇದನ್ನು ಪರಿಗಣಿಸಿ ಕಾಯ್ದೆಗೆ ತಿದ್ದುಪಡಿ ತರುವುದು ಅಗತ್ಯ. ವಿವಿಗಳಲ್ಲಿ ಆಡಳಿತಾತ್ಮಕ ಸುಧಾರಣೆ ಆಗಬೇಕಿದೆ ಎಂದರು.
ಪ್ರಧಾನ ಮಂತ್ರಿಗಳು ಸೇರಿ ಬಿಜೆಪಿಯವರು ಎಲ್ಲದಕ್ಕೂ ಗುಜರಾತ್ ಮಾದರಿ ಅನ್ನುತ್ತಾರಲ್ವಾ? ವಿವಿಗಳ ಆಡಳಿತ ವಿಚಾರಕ್ಕೆ ನಾವೇಕೆ ಆ ಮಾದರಿ ಅನುಸರಿಸಬಾರದು ಎಂದು ಇದೇ ವೇಳೆ ಅವರು ಪ್ರಶ್ನಿಸಿದರು.
ರಾಜ್ಯಪಾಲರ ಅಧಿಕಾರಕ್ಕೆ ಕೊಕ್: ಸಂಪುಟ ನಿರ್ಣಯ
ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನವನ್ನು ರಾಜ್ಯಪಾಲರಿಂದ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು
ಸಭೆಯಲ್ಲಿ ಒಟ್ಟು 8 ವಿಧೇಯಕಗಳನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯಲು ನಿರ್ಧರಿಸಿದ್ದು, ಇದರಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ-2024ಕ್ಕೆ ಸಹ ಸರ್ಕಾರ ಅಂಗೀಕಾರ ಪಡೆದಿದೆ. ಇದರಡಿ ವಿಧೇಯಕದ ತಿದ್ದುಪಡಿ ಮೂಲಕ ಗದ ಗದ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಕುಲಾ ಧಿಪತಿಗಳನ್ನಾಗಿ ರಾಜ್ಯಪಾಲರ ಬದಲಿಗೆ ಸಿಎಂ ನೇಮಿಸಲು ತೀರ್ಮಾನಿಸಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಉಭಯ ಸದನಗಳಲ್ಲಿ ಅಂಗೀಕಾರ ಪಡೆಯಲಿದ್ದು, ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗುವುದು. .
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಮತ್ತಷ್ಟು ಸಕ್ರಿಯವಾಗಿ ವಿಶ್ವವಿದ್ಯಾಲಯವನ್ನು ಮುನ್ನಡೆಸಲು ಈ ತೀರ್ಮಾನ ಮಾಡಲಾಗಿದೆ. ಗುಜರಾತ್‌ನಲ್ಲೂ ಈ ಮಾದರಿ ಅನುಸರಿಸಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶವಿಲ್ಲ. ಇನ್ನು ಮುಂದೆ ಕುಲಾಧಿಪತಿಗಳ ಎಲ್ಲಾ ನಿರ್ಣಯಗಳನ್ನು ರಾಜ್ಯಪಾಲರ ಬದಲಾಗಿ ಸಿಎಂ ನಿರ್ವಹಿಸುತ್ತಾರೆ ಎಂದರು.
ಈ ವಿಧೇಯಕಕ್ಕೂ ರಾಜ್ಯಪಾಲರ ಅಂಗೀಕಾರ ಬೇಕೆ? ಎಂಬ ಪ್ರಶ್ನೆಗೆ, ಯಾವುದೇ ವಿಧೇಯಕ ಮಂಡಿಸಿದರೂ ರಾಜ ಪಾಲರ ಅಂಗೀಕಾರ ಬೇಕು. ಇದನ್ನೂ ಅಂಗೀಕಾರಕ್ಕೆ ಕಳು ಹಿಸುತ್ತೇವೆ. ಮುಂದೆ ನೋಡೋಣ ಎಂದು ಉತ್ತರಿಸಿದರು. ಚಾಣಕ್ಯ ವಿವಿ ನಿಯಮ ತಿದ್ದುಪಡಿ: ಚಾಣಕ್ಯ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ-2024 ಮಂಡನೆಗೂ ನಿರ್ಧಾರ ಮಾಡಲಾಗಿದೆ. ಈವರೆಗೆ ಎಲ್ಲಾ ಖಾಸಗಿ ವಿಶ್ವವಿದ್ಯಾಲಯಗಳಿಗೆ ಸರ್ಕಾರದ ಪ್ರತಿನಿಧಿ ಒಬ್ಬರನ್ನು ನೇಮಕ ಮಾಡಲಾಗುತ್ತಿತ್ತು. ಆದರೆ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಇದರಿಂದ ವಿನಾಯಿತಿ ನೀಡಲಾಗಿತ್ತು. ಇದನ್ನು ತಿದ್ದುಪಡಿ ಮಾಡಿ ಚಾಣಕ್ಯ ವಿವಿಗೂ ಸರ್ಕಾರದ ಪ್ರತಿನಿಧಿ ನೇಮಿಸಲು ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
• ಕಾಯ್ದೆ ತಿದ್ದುಪಡಿ ಮಾಡಿ ಗೌರರ್ ಅಧಿಕಾರ ಮೊಟಕಿಗೆ ಚಿಂತನೆ
• ಗುಜರಾತಲ್ಲಿ ಗೌರ್ಯ ಅಧಿಕಾರ ಘಟಿಕೋತ್ಸವ ಅಧ್ಯಕ್ಷತೆಗೆ ಸೀಮಿತ
. ಉಳಿದಂತೆ ವಿವಿಗಳ ನಿರ್ವಹಣೇಲಿ ಸರ್ಕಾರಕ್ಕೆ ಹೆಚ್ಚಿನ ಅಧಿಕಾರ
• ರಾಜ್ಯದಲ್ಲೂ ಅದೇ ಮಾದರಿ ಜಾರಿ: ಸಚಿವ ಸುಧಾಕರ್ ಸುಳಿವು