ಬಿಜೆಪಿ ಕಾರ್ಯಕರ್ತ ಸೇರಿ ಹತ್ಯೆಗೀಡಾದ ಕರಾವಳಿಯ 4 ಮಂದಿ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

Published : Jun 16, 2023, 10:53 PM ISTUpdated : Jun 16, 2023, 11:05 PM IST
ಬಿಜೆಪಿ ಕಾರ್ಯಕರ್ತ ಸೇರಿ ಹತ್ಯೆಗೀಡಾದ ಕರಾವಳಿಯ 4 ಮಂದಿ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಸಾರಾಂಶ

ಕೋಮು ದ್ವೇಷದಲ್ಲಿ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ಬಿಜೆಪಿ ಕಾರ್ಯಕರ್ತನ ಜೊತೆ ಮೂವರು ಮುಸ್ಲಿಂ ಯುವಕರ ಕುಟುಂಬಕ್ಕೆ ತಲಾ 25 ಲಕ್ಷ  ಪರಿಹಾರ ಘೋಷಣೆ ಮಾಡಿದೆ.

ಬೆಂಗಳೂರು (ಜೂ.16): ಬೇರೆ ಬೇರೆ ಪ್ರಕರಣದಲ್ಲಿ ಕೋಮು ದ್ವೇಷದಲ್ಲಿ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ಬಿಜೆಪಿ ಕಾರ್ಯಕರ್ತನ ಜೊತೆ ಮೂವರು ಮುಸ್ಲಿಂ ಯುವಕರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದೆ. ಮಂಗಳೂರಿನ ನಾಲ್ಕು ಜನರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಿ ಆದೇಶ ಹೊರಡಿಸಿದ್ದು, ನಾಲ್ವರ   ಕುಟುಂಬಕ್ಕೆ ಒಟ್ಟು ಒಂದು ಕೋಟಿ ರೂ. ಪರಿಹಾರ ಘೋಷಣೆಯಾಗಿದೆ.

ಸೌಜನ್ಯ ರೇಪ್‌ & ಮರ್ಡರ್: ಸಂತೋಷ್‌ ರಾವ್‌ ನಿರ್ದೋಷಿ, ಸಿಬಿಐ ಕೋರ್ಟ್‌ ತೀರ್ಪು

ಸುಳ್ಯದ ಬೆಳ್ಳಾರೆಯ ಕಳಂಜ ಎಂಬಲ್ಲಿ ಮಸೂದ್, ಸುರತ್ಕಲ್ ನ ಫಾಜಿಲ್, ಜಲೀಲ್ ಹಾಗೂ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಣೆಯಾಗಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಪರಿಹಾರ ಘೋಷಿಸಲು ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಜೂ.19ರಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪರಿಹಾರ ಚೆಕ್ ಪಡೆಯಲು ಸಂಬಂಧಿಸಿದ ಕುಟುಂಬಗಳಿಗೆ ಸೂಚನೆ ನೀಡಲಾಗಿದೆ.

  • 2022, ಜುಲೈ 28 ರಂದು ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ (fazil murder case)
  • 2022, ಡಿ.24ರ ರಾತ್ರಿ ಕಾಟಿಪಳ್ಳದಲ್ಲಿ ನಡೆದಿದ್ದ ಜಲೀಲ್ ಹತ್ಯೆ (Jaleel murder case)
  • 2022, ಜುಲೈ 19ರಂದು ಹಲ್ಲೆಗೊಳಗಾಗಿ ಜುಲೈ .21ರಂದು ಸಾವನ್ನಪ್ಪಿದ್ದ ಮಸೂದ್ (Masood murder )
  • 2018, ಜನವರಿ 3ರಂದು ಸುರತ್ಕಲ್ ನಲ್ಲಿ ಹತ್ಯೆಯಾಗಿದ್ದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ (Deepak Rao murder case)

ಮತೀಯ ರಾಜಕಾರಣದ ಕಾರಣದಿಂದಲೇ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ನೆಮ್ಮದಿ ಕೆಡಿಸುವ ಇಂತಹ ಕೃತ್ಯಗಳು ಪದೇ ಪದೇ ನಡೆಯುತ್ತಾ ಬಂದಿವೆ. ಧರ್ಮದ ಕಾರಣಕ್ಕಾಗಿ ಹೆಣಗಳು ಉರುಳಿವೆ.

ಅಕ್ಕನ ಚುಡಾಯಿಸಿದವರ ಪ್ರಶ್ನಿಸಿದ 15 ವರ್ಷದ ಬಾಲಕನ ಜೀವಂತ ಸುಟ್ಟ ಕ್ರೂರಿ ಗ್ಯಾಂಗ್!

2018 ಜ.3ರಂದು ಮಧ್ಯಾಹ್ನ ಕಾಟಿಪಳ್ಳದಲ್ಲಿ ಮೊಬೈಲ್ ಅಂಗಡಿಯಿಂದ ಹೊರಗೆ ಬರುತ್ತಿದ್ದಾಗ ದೀಪಕ್ ರಾವ್ ಅವರನ್ನು ತಲವಾರಿನಿಂದ ಕೊಚ್ಚಿ ಕೊಲ್ಲಲಾಗಿತ್ತು, ಈ ಪ್ರಕರಣವೂ ಸುರತ್ಕಲ್‌ನಲ್ಲಿ ಸಾಕಷ್ಟು ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ಆ ಬಳಿಕ ಸ್ವಲ್ಪ ತಣ್ಣಗಿದ್ದ ಕರಾವಳಿಯಲ್ಲಿ ಸರಣಿ ಹತ್ಯೆಗಳು ನಡೆದಿತ್ತು. 2022 ಜುಲೈ 19ರಂದು ಬೆಳ್ಳಾರೆಯ ಕಳಂಜ ಎಂಬಲ್ಲಿ ಹಲ್ಲೆಗೊಳಗಾಗಿ ಜುಲೈ .21ರಂದು  ಮಸೂದ್ ಸಾವನ್ನಪ್ಪಿದ್ದ,  ಇದಕ್ಕೆ ಪ್ರತಿಕಾರ ಎಂಬಂತೆ ನಡೆದ ಭೀಕರ ಹತ್ಯೆ  ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು. ಜುಲೈ 26 ಇವರನ್ನು ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಕೊಲ್ಲಲಾಯ್ತು. ನಡೆಯಿತು. ಇದು ದೇಶ ಮಟ್ಟದಲ್ಲಿ ಸುದ್ದಿಯಾಗಿತ್ತು. 

ಇದಾದ ಎರಡೇ ದಿನಕ್ಕೆ ಅಂದರೆ ಜುಲೈ 28 ರಂದು  ಮಂಗಳೂರಿನ ಸುರತ್ಕಲ್‌ನಲ್ಲಿ ಫಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳ ತಂಡ ಭೀಕರವಾಗಿ ಹತ್ಯೆ ಮಾಡಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾದಾಗ ಆಗಿನ ಬಿಜೆಪಿ ಸರ್ಕಾರ ಪರಿಹಾರ ನೀಡಿದ್ದು, ಫಾಜಿಲ್ ಹತ್ಯೆಗೆ ಪರಿಹಾರ ನೀಡದೇ ತಾರತಮ್ಯ ಎಸಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಯುವಕರ ಕುಟುಂಬದ ಜೊತೆಗೆ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆಗೂ ಪರಿಹಾರ ‌ಘೋಷಣೆ ಮಾಡಿದೆ. ಒಟ್ಟಿನಲ್ಲಿ ಮತ, ರಾಜಕಾರಣ, ಮತೀಯತೆಗೆ ಅಮಾಯಕರ ಬಲಿಗಳು ನಡೆಯುತ್ತಿರುವುದು ಸುಳ್ಳಲ್ಲ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪದೇಪದೆ 'ನಮ್ಮಪ್ಪನೇ ಸಿಎಂ..' ಯತೀಂದ್ರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ? ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಕರ್ನಾಟಕ ವಿಧಾನಸಭೆಯಲ್ಲಿ ಎರಡು ಮಹತ್ವದ ವಿಧೇಯಕ ಮಂಡನೆ, ಉದ್ದೇಶಗಳು ಮತ್ತು ಕಾರಣಗಳು ಯಾವುವು?