Police Case ಹಲ್ಲೆ ಮಾಡಿದ್ದಲ್ಲದೇ ಕೊರಗರ ಮೇಲೆಯೇ ಪೊಲೀಸರಿಂದ ಕೇಸ್, ಸಿದ್ದರಾಮಯ್ಯ ಕೆಂಡಾಮಂಡಲ

By Suvarna News  |  First Published Dec 31, 2021, 3:51 PM IST

* ಕೊರಗ ಸಮುದಾಯದ ಮೇಳೆ ಪೊಲೀಸ ಹಲ್ಲೆ ಪ್ರಕರಣ 
* ಹಲ್ಲೇ ಮಾಡಿದ್ದಲ್ಲದೇ ಕೊರಗರ ಮೇಲೆಯೇ ಪೊಲೀಸರಿಂದ ಕೇಸ್
* ಪ್ರತಿದೂರಿನ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ


ಬೆಂಗಳೂರು (ಡಿ.31): ಕೋಟತಟ್ಟು ಗ್ರಾಮ ಪಂಚಾಯಿತಿ ಬಾರಿಕೆರೆಯಲ್ಲಿ ಕೊರಗ ಸಮುದಾಯದ ಮೆಹಂದಿ ಶಾಸ್ತ್ರ ನಡೆಯುತ್ತಿದ್ದ ಮನೆಗೆ ಪೊಲೀಸರು ದಾಳಿ ನಡೆಸಿದ ಪ್ರಕರಣ ಮತ್ತೆ ಬೇರೆ ರೀತಿ ಸ್ವರೂಪ ಪಡೆದುಕೊಳ್ಳುತ್ತಿದೆ.

ಹೌದು.... ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದಲ್ಲದೆ ಇದೀಗ ಅವರ ವಿರುದ್ಧವೇ ಪೊಲೀಸರು ದೂರು ದಾಖಲಿಸಿದ್ದಾರೆ. ಪೊಲೀಸರ ಈ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.

Latest Videos

undefined

Police Brutality: ಕೊರಗರ ಮದುವೆಗೆ ನುಗ್ಗಿ ಪೊಲೀಸ್‌ ದಾಂಧಲೆ: ಮಹಿಳೆಯರ ಮೇಲೂ ಮನಬಂದಂತೆ ಥಳಿತ

ಕೋಟತಟ್ಟು ಗ್ರಾಮದಲ್ಲಿ ನಡೆದ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರು ಮದುಮಗ ಸೇರಿದಂತೆ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸುದ್ದಿಯಾಗುತ್ತಿದ್ದಂತೆ ಕೋಟ ಠಾಣೆಯ ಎಸ್ ಐ ನ್ನು ಅಮಾನತು ಮಾಡಲಾಗಿದ್ದು, ಉಳಿದ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿತ್ತು.

ಆದರೆ ಮತ್ತೆ ಪೊಲೀಸರು 7 ಜನ ಕೊರಗ ಸಮುದಾಯದವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. ಇದು ಮತ್ತೆ ವಿವಾದಕ್ಕೆ ಕಾರಣವಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ?. ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ ಎಂದು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

ದೌರ್ಜನ್ಯಕ್ಕೀಡಾದ ಕೊರಗರ ಪರ
ಕಂಬನಿ ಮಿಡಿದ ಸಮಾಜ ಕಲ್ಯಾಣ
ಸಚಿವ
ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ ಪೊಲೀಸರು
ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ?

ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ,
ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ.
5/6 pic.twitter.com/1Dk9zAAX7e

— Siddaramaiah (@siddaramaiah)

ದೌರ್ಜನ್ಯಕ್ಕೀಡಾದ ಕೊರಗರ ಪರ ಕಂಬನಿ ಮಿಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ ಪೊಲೀಸರು ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ? ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ ಎಂದ ಅವರು ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ ಎಂದು ಕಿಡಿಕಾರಿದ್ದಾರೆ.

ಎಸ್ ಸಿಪಿ/ಟಿಎಸ್ ಪಿ ಕಾಯ್ದೆ ಸೇರಿದಂತೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಹಣ ಮಂಜೂರು ಮಾಡದೆ ಆರ್ಥಿಕವಾಗಿ ದಲಿತರನ್ನು ಸಾಯಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ ಎಂದು ಸರಣಿ ಟ್ವೀಟ್‌ ಮಾಡಿದ್ದಾರೆ.

ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು ಅರ್ಥೈಸೋಣವೇ?

ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ
ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು ಅರ್ಥೈಸೋಣವೇ?
4/6 pic.twitter.com/LZ8bTMJGyy

— Siddaramaiah (@siddaramaiah)

ಡಾ.ಮಹಾದೇವಪ್ಪ ಆಕ್ರೋಶ
ಕೋಟದಲ್ಲಿ ಕೊರಗ ಸಮುದಾಯದವರ ಮೇಲೆ ಪೊಲೀಸರು ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿರುವುದು ಮೇಲ್ನೋಟಕ್ಕೆ ಅತ್ಯಂತ ಸುಳ್ಳು ಪ್ರಕರಣ ಎಂದು ಕಾಂಗ್ರೆಸ್ ಹಿರಿಯ ನಾಯಕ ಡಾ.ಹೆಚ್.ಸಿ. ಮಹಾದೇವಪ್ಪ ಅವರು ಟ್ವೀಟ್ ಮಾಡಿದ್ದಾರೆ.

ಕೊರಗರ ಮೇಲೆ ಹಲ್ಲೆ ನಡೆಸಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಹೇಳಿದ್ದರು. ಆದರೆ ಅಚ್ಚರಿ ಎಂಬಂತೆ ಯಾವ ಕೊರಗರ ಮೇಲೆ ಹಲ್ಲೆ ನಡೆಸಲಾಗಿತ್ತೋ ಇದೀಗ ಅವರ ಮೇಲೆಯೇ ಪೊಲೀಸರು ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿದ್ದು ಇದು ಮೇಲ್ನೋಟಕ್ಕೆ ಅತ್ಯಂತ ಸುಳ್ಳು ಪ್ರಕರಣವೇ ಆಗಿದೆ. ಕಾರಣ ಪೊಲೀಸರು ಹಲ್ಲೆ ನಡೆದ ದಿನವೇ ತಮ್ಮ ಮೇಲಾದ ದಾಳಿಯ ಸುದ್ದಿಯ ಬಗ್ಗೆ ತಿಳಿಸಿದೇ ವಿಷಯವು ಸ್ವಲ್ಪ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಮೂಲ ವಿಷಯವನ್ನು ತಿರುಚುವಂತೆ ಬಹು ತಡವಾಗಿ ಪ್ರತಿಕ್ರಿಯೆ ನೀಡಿ ಕೇಸು ದಾಖಲಿಸಿರುವುದು ಕೊರಗರ ಮೇಲಿನ ಸರ್ಕಾರಿ ಪ್ರಾಯೋಜಿತ ದಾಳಿಯಾಗಿದೆ ಎಂಬುದು ಅತ್ಯಂತ ಸ್ಪಷ್ಟವಾಗಿದೆ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಕೊರಗರು, ಗಿರಿ ಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ
ಕೊರಗರು, ಗಿರಿ ಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ. ನಾನು, ಗೃಹ ಸಚಿವರು, ಸರ್ಕಾರ ನಿಮ್ಮ ಜೊತೆಯಿದೆ. ಏನಾದರೂ ಇದ್ದರೆ ಸಿಎಂಗೂ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಅಲ್ಲಿರುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಎಸ್‌ಪಿ ಅವರಿಗೆ ಕರೆ ಮಾಡಿ ಪ್ರಕರಣದ ವಿಚಾರ ಕಾನೂನು ಪ್ರಕಾರ ದೂರು ದಾಖಲಿಸಲು ಸೂಚಿಸಿದ್ದಾರೆ. ದಲಿತರಿಗೆ ಯಾವುದೇ ತೊಂದರೆಯಾಗದಂತೆ ಗೃಹಸಚಿವರು ಸೂಚಿಸಿದ್ದಾರೆ ಎಂದರು.

ಉಡುಪಿ ಜಿಲ್ಲೆಯ ಕೋಟಾದಲ್ಲಿ ಗಿರಿಜನರ ಮೇಲೆ ಪೋಲಿಸರಿಂದ ವಿನಾಕಾರಣ ಹಲ್ಲೆ ಮಾಡಲಾಗಿತ್ತು. ಒಬ್ಬ ಪಿಎಸ್‌ಐ, ಸಸ್ಪೆಂಡ್ ಆರು ಜನರ ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್‌ಪಿ ಮತ್ತು ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್‌ಟೇಬಲ್ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು.

click me!