
ಬೆಂಗಳೂರು (ಜೂ.01): ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸೋಮವಾರ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕೊರೋನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದರು. ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಮಂಗಳವಾರ ಆಸ್ಪತ್ರೆಗೆ ತೆರಳಿ ಪೂರ್ಣ ಪ್ರಮಾಣದ ತಪಾಸಣೆಗೆ ಒಳಗಾದರು.
ಸಿದ್ದರಾಮಯ್ಯಗೆ ಅನಾರೋಗ್ಯ, ವೈದ್ಯರಿಂದ ತಪಾಸಣೆ ..
ಈ ವೇಳೆ ಎರಡನೇ ಬಾರಿ ನಡೆಸಿದ ಕೊರೋನಾ ಪರೀಕ್ಷೆಯಲ್ಲೂ ನೆಗೆಟಿವ್ ಬಂದಿದೆ. ಸಾಮಾನ್ಯ ವೈರಲ್ ಜ್ವರ ಬಾಧಿಸುತ್ತಿರುವುದಿಂದ ಅವರು ಎರಡು ದಿನಗಳ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ.
ಪ್ರಸ್ತುತ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದರಿಂದಾಗಿ ಮುಂದಿನ ಎರಡು ದಿನಗಳ ಅವಧಿ ವರೆಗೆ ಅವರ ಪೂರ್ವ ನಿಗದಿ ಕಾರ್ಯಕ್ರಮಗಳು ರದ್ದಾಗಿದೆ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ