ಕೃಷಿ ಭೂಮಿಯಲ್ಲಿ ಸಿದ್ದರಾಮಯ್ಯ ಮನೆ ನಿರ್ಮಾಣ

By Web DeskFirst Published Nov 21, 2018, 10:44 AM IST
Highlights

ಕೃಷಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ್ದರು ಎಂಬ ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲಕ್ಷ್ಮೇಪುರಂ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರು ವರದಿ ಕೇಳಿದ್ದಾರೆ. 

ಮೈಸೂರು:  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಎಂಡಿಎ) ನಿಯಮಗಳನ್ನು ಉಲ್ಲಂಘಿಸಿ ಕೃಷಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ್ದರು ಎಂಬ ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲಕ್ಷ್ಮೇಪುರಂ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರು ವರದಿ ಕೇಳಿದ್ದಾರೆ. 

ಮೈಸೂರಿನ ಹಿನಕಲ್‌ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಿದ್ದರಾಮಯ್ಯ ಅವರು ನಿವೇಶನ ಖರೀದಿಸಿ ಮನೆ ನಿರ್ಮಾಣ ಮಾಡಿದ್ದರು. ಬಳಿಕ ಆ ಮನೆಯನ್ನು ಬೇರೆಯೊಬ್ಬರಿಗೆ ಮಾರಾಟ ಮಾಡಿದ್ದರು. ಆದರೆ, ಇದು ಕೃಷಿ ಜಮೀನು ಆಗಿದ್ದರಿಂದ ಎಂಡಿಎ ನಿಯಮಗಳನ್ನು ಉಲ್ಲಂಘಿಘಿಸಿ ಮನೆ ನಿರ್ಮಿಸಲಾಗಿದೆ ಎಂದು ಗಂಗರಾಜು ಎಂಬವರು ನೀಡಿದ ದೂರು ಹಾಗೂ ನ್ಯಾಯಾಲಯ ಸೂಚನೆ ಮೇರೆಗೆ ಲಕ್ಷ್ಮೀಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಆದರೆ, ಈ ಪ್ರಕರಣದ ತನಿಖೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ದೂರುದಾರ ಗಂಗರಾಜು ಡಿಜಿಪಿ ಕಚೇರಿಗೆ ಪತ್ರ ಬರೆದಿದ್ದರು. ಅಲ್ಲದೆ, ಮಾಹಿತಿ ಹಕ್ಕು ಕಾಯ್ದೆಯಲ್ಲಿ ಮಾಹಿತಿ ಸಹ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಡಿಜಿಪಿ ಕಚೇರಿಯಿಂದ ಪ್ರಕರಣ ಸಂಬಂಧ ವರದಿ ಕೇಳಲಾಗಿದೆ.

click me!