ಸಿದ್ಧರಾಮಯ್ಯನೇ ನನಗೆ ಶ್ರೀರಾಮ , ಅಯೋಧ್ಯೆ ರಾಮನಿಗೇಕೆ ಪೂಜಿಸಬೇಕು?: ಹೆಚ್‌. ಆಂಜನೇಯ

By Sathish Kumar KH  |  First Published Jan 1, 2024, 6:11 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನನಗೆ ಶ್ರೀರಾಮ. ನಾನು ಅವರಿಗೆ ಆಂಜನೇಯ. ಅವರೇಕೆ ಅಯೋಧ್ಯೆಯ ಬಿಜೆಪಿ ರಾಮನಿಗೇಕೆ ಹೋಗಿ ಪೂಜೆ ಮಾಡಬೇಕು ಎಂದು ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದ್ದಾರೆ.


ಚಿತ್ರದುರ್ಗ (ಜ.01): ಆಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಕರೆಯದಿದ್ದದ್ದೇ ಒಳ್ಳೆಯದಾಯಿತು. ಸ್ವತ: ಸಿದ್ಧರಾಮಯ್ಯ ಅವರೇ ನನಗೆ ಶ್ರೀರಾಮ, ಆ ರಾಮನಿಗೇಕೆ ಹೋಗಿ ಪೂಜಿಸಬೇಕು. ಸಿದ್ಧರಾಮನಹುಂಡಿಯಲ್ಲಿ ರಾಮನ ದೇವಸ್ಥಾನವಿದ್ದು, ಅಲ್ಲಿಯೂ ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ ಅದು ಎಂದು ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯಗೆ ಆಹ್ವಾನವಿಲ್ಲದ ಕುರಿತು ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು. ಸ್ವತ: ಸಿದ್ಧರಾಮಯ್ಯ ಅವರೇ ರಾಮ, ಆ ರಾಮಗೇಕೆ ಹೋಗಿ ಪೂಜಿಸಬೇಕು. ಸಿದ್ಧರಾಮನಹುಂಡಿಯಲ್ಲಿ ರಾಮನ ದೇವಸ್ಥಾನದಲ್ಲಿ ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ ಅದು. ಬಿಜೆಪಿ ಅವರನ್ನು ಕರೆಸಿಕೊಂಡು ಭಜನೆ ಮಾಡುತ್ತಾರೆ. ನಮ್ಮ ರಾಮ ಎಲ್ಲಾ ಕಡೆಗೂ ಇದ್ದಾನೆ, ನಾನು ಆಂಜನೇಯ. ನಾವೆಲ್ಲಾ ಶ್ರೀರಾಮನ ಭಕ್ತರು ಎಂದು ಹೇಳಿದರು.

Tap to resize

Latest Videos

undefined

ರಾಮ ಜನ್ಮಭೂಮಿಗಾಗಿ 30 ವರ್ಷದ ಹಿಂದೆ ಹೋರಾಡಿದ ಹಿಂದೂ ಕಾರ್ಯಕರ್ತರನ್ನು ಬಂಧಿಸುತ್ತಿರುವ ಕಾಂಗ್ರೆಸ್‌ ಸರ್ಕಾರ!

ಶ್ರೀರಾಮ, ಆಂಜನೇಯ ನಮ್ಮ ವರ್ಗದವರು: ನಮ್ಮ ಸಮುದಾಯದವರು ರಾಮ, ಆಂಜನೇಯ, ಹನುಮಂತ ಹೆಸರಿಟ್ಟುಕೊಳ್ಳುತ್ತಾರೆ. ರಾಮ, ಆಂಜನೇಯ ನಮ್ಮ ವರ್ಗಕ್ಕೆ ಸೇರಿದವರು. ಬಿಜೆಪಿ ಅವರದ್ದು ಧರ್ಮಗಳನ್ನು ಒಡೆದಾಳುವ ನೀತಿಯಾಗಿದೆ. ಒಂದು ಧರ್ಮದ ವಿರುದ್ಧ ಟೀಕಿಸಿ ಮತ ಬ್ಯಾಂಕ್ ಸೃಷ್ಠಿಯ ಭ್ರಮೆ ಬಿಜೆಪಿಗಿದೆ. ಬಿಜೆಪಿ ಆಡಳಿತದಲ್ಲಿ ಯಾರಿಗೆ ಅನುಕೂಲ ಆಗಿದೆ? ಹಿಂದೂ ಯುವಕರಿಗೆ ಬಿಜೆಪಿ ಆಡಳಿತದಿಂದ ಅನುಕೂಲ ಆಗಿದೆಯೇ? ನಾವೆಲ್ಲಾ ಹಿಂದೂಗಳೇ.. ಹಿಂದೂ ಮತ್ತು ಹಿಂದೂ ಧರ್ಮವನ್ನ ಬಿಜೆಪಿ ಕೊಂಡುಕೊಂಡಿಲ್ಲ. ಅವರು ಧರ್ಮದಲ್ಲಿನ ಮೇಲು ಕೀಳು, ಶೋಷಣೆಗೆ ಪರಿಹಾರ ನೀಡಿದ್ದಾರೆಯೇ? ಎಂದು ಕಿಡಿಕಾರಿದರು.

ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮಂದಿರ ಮಸೀದಿ ಕಟ್ಟುವ ಬದಲು ಅದೇ ಹಣದಿಂದ ಬಡವರಿಗೆ ಮನೆ ಕೊಡಿ: ಮಾಜಿ ಸಚಿವ ಎಚ್‌ ಆಂಜನೇಯ 

ದೇಶದ ಜನರು ನಾಯಿ-ನರಿ ವಾಸಿಸಲು ಯೋಗ್ಯವಲ್ಲದ ಸ್ಥಳದಲ್ಲಿ ವಾಸ: ರಾಮ ಮಂದಿರ ನಿರ್ಮಾಣ ಸಾಕೇ? ಮನೆ-ಮನ ಕಟ್ಟುವ ಕೆಲಸ ಆಗಬೇಕು. ದೇಶದ ಜನ ನಾಯಿ-ನರಿ ವಾಸಿಸಲು ಯೋಗ್ಯವಲ್ಲದ ಸ್ಥಳದಲ್ಲಿ ವಾಸವಾಗಿದ್ದಾರೆ. ಅಂಥವರ ಕಣ್ಣೀರೊರೆಸಿ, ಸೂರುಕೊಟ್ಟು ರಕ್ಷಣೆ ಮಾಡುವ ಕೆಲಸ ಆಗಲಿ. ಸೂರಿಲ್ಲದವರಿಗೆ ಮನೆ ಕಟ್ಟಿಸಿ ರಾಮಮಂದಿರ ಅಂತ ಹೆಸರಿಡಿ. ಆಗ ನಿಜವಾದ ರಾಮ ಬಂದು ಆಶೀರ್ವದಿಸುತ್ತಾನೆ. ಓಟಿನ ರಾಮ ಅಲ್ಲ, ಓಟಿಗಾಗಿ ಬಿಜೆಪಿ ರಾಮನ ಮಾಡುವುದು ಬೇಡ ಎಂದು ಮಾಜಿ ಸಚಿವ ಆಂಜನೇಯ ಹೇಳಿದ್ದಾರೆ.

click me!