ಚಿತ್ರದುರ್ಗ[ಅ.14]: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ ರುವ ಆರೋಗ್ಯ ಸಚಿವ ಶ್ರೀರಾಮುಲು ಅವರು, ಸಿದ್ದರಾಮಯ್ಯ ಮತ್ತೆ ಮುಖ್ಯ ಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೈಗೊಂಡಿದೆ. ಸರ್ಕಾರದ ಕಾರ್ಯ ವೈಖರಿ ನೋಡಿ ಹತಾಶ ರಾಗಿರುವ ಸಿದ್ದರಾಮಯ್ಯ ಮತ್ತೆ ಅಧಿಕಾರ ಪಡೆಯುವ ಸಲುವಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅವರ ಮಾತಿಗೆ ಗೌರವ ಕೊಡುವ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಮಾಧ್ಯಮಗಳ ನಿರ್ಬಂಧ ವಿಚಾರದಲ್ಲಿ ಸ್ಪೀಕರ್ ನಿರ್ಧಾರ ಪ್ರಶ್ನಿಸುವ ಹಕ್ಕು ನಮಗಿಲ್ಲ ಎಂದರು.
ಪರಂ ಪಿಎ ಆತ್ಮ ಹತ್ಯೆಗೂ ಐಟಿಗೂ ಸಂಬಂಧವಿಲ್ಲ
ಚಿತ್ರದುರ್ಗ/ಬಳ್ಳಾರಿ: ಮಾಜಿ ಉಪಮುಖ್ಯ ಮಂತ್ರಿ ಜಿ.ಪರಮೇಶ್ವರ್ ಅವರ ಪಿಎ ರಮೇಶ್ ಆತ್ಮಹತ್ಯೆ ಪ್ರಕ ರಣಕ್ಕೂ ತೆರಿಗೆ ದಾಳಿಗೂ ಬಿಜೆ ಪಿಗೂ ಯಾವುದೇ ಸಂಬಂಧ ವಿಲ್ಲ. ತನಿಖಾ ಸಂಸ್ಥೆಗಳು ತಮ್ಮ ಕೆಲಸ ಮಾಡುತ್ತಿವೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು. ಸುದ್ದಿಗಾರರ ಜತೆ ಮಾತ ನಾಡಿದ ಅವರು, ತೆರಿಗೆ ದಾಳಿ ವಿಚಾರಗಳನ್ನು ರಾಜಕೀಯವಾಗಿ ಥಳಕು ಹಾಕುವುದು ಸರಿಯಲ್ಲ. ಬಿಜೆಪಿಯ ಕೇಂದ್ರ ಸಚಿವ ಸಿದ್ದೇಶ್ವರ ಅವರ ಮನೆ ಮೇಲೆ ಸಹ ದಾಳಿಯಾಗಿತ್ತು ಎಂಬುದನ್ನು ವಿನಾಕಾರಣ ಬಿಜೆಪಿ ಮೇಲೆ ಆರೋಪ ಮಾಡುವವರು ನೆನಪು ಮಾಡಿಕೊಳ್ಳಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ