ಅಮಿತ್ ಶಾ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ: ಬಿಜೆಪಿಗರ ವಿರುದ್ಧ ಸಿದ್ದು ಗರಂ

Published : Apr 29, 2022, 10:32 AM ISTUpdated : Apr 29, 2022, 10:41 AM IST
ಅಮಿತ್ ಶಾ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ: ಬಿಜೆಪಿಗರ ವಿರುದ್ಧ ಸಿದ್ದು ಗರಂ

ಸಾರಾಂಶ

*   ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣ *   ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ *   ಕಳ್ಳರ ಜೊತೆ ಶಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ 

ಬೆಂಗಳೂರು(ಏ.29):  ಧರ್ಮ ರಾಜಕಾರಣದ(Religion Politics) ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ತಿಳಿಸಿದ್ದಾರೆ. 

ಇಂದು(ಶುಕ್ರವಾರ) ಅವರ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಸರಣಿ ಟ್ವೀಟ್‌ ಮಾಡಿ ಬಿಜೆಪಿ ಸರ್ಕಾರದ(BJP Government) ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು "ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ. ಎನ್ನುವ  ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ(Kannada) ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು ಅಂತ ಹೇಳಿದ್ದಾರೆ. 

ಹಿಂದಿ ಯಾವತ್ತೂ ರಾಷ್ಟ್ರ ಭಾಷೆ ಆಗಿಲ್ಲ: ದೇವಗನ್‌ ಹಿಂದಿ ಏಟಿಗೆ ಸಿದ್ದರಾಮಯ್ಯ ತಿರುಗೇಟು

 

ಇಂಗ್ಲೀಷ್(English), ಹಿಂದಿ(Hindi) ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ. ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ  ಹೌದು,‌ ಪರಿಸರದ ಭಾಷೆ ಕೂಡ ಅಂತ ಬರೆದುಕೊಂಡಿದ್ದಾರೆ. 

ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ.

ಪ್ರತಿಯೊಂದು ರಾಜ್ಯ ಭಾಷೆಯೂ ನಮ್ಮ ರಾಷ್ಟ್ರಭಾಷೆ(National Language), ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ. ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ ಅಂತ ತಿವಿದಿದ್ದಾರೆ. 

ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ ಅಂತ ಬಿಜೆಪಿ ನಾಯಕರ ವಿರುದ್ಧ ಸಿದ್ದು ಕಿಡಿ ಕಾರಿದ್ದಾರೆ. 

ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ ಅಂತ ಸಲಹೆ ನೀಡಿದ್ದಾರೆ. 

Siddaramaiah: ಮುದ್ರಣ ಕಾಗದದ ಜಿಎಸ್‌ಟಿ ಇಳಿಸಿ: ಪ್ರಧಾನಿ ಮೋದಿಗೆ ಸಿದ್ದು ಪತ್ರ

ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಶಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ. ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ ಅಂತ ಹೇಳಿದ್ದಾರೆ. 

ನಮ್ಮ ಚಂದನವನದ(Sandalwood) ಕನ್ನಡ ಚಿತ್ರಗಳು(Kannada Movies), ಬಾಲಿವುಡ್(Bollywood) ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ ಅಂತ ಸಿದ್ದರಾಮಯ್ಯ ತಿಳಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ