ಜಾರ್ಜ್ ತೋಟದ ಮನೆಯಲ್ಲಿ ಸಿದ್ದರಾಮಯ್ಯ

Kannadaprabha News   | Asianet News
Published : Feb 27, 2021, 07:21 AM IST
ಜಾರ್ಜ್ ತೋಟದ ಮನೆಯಲ್ಲಿ ಸಿದ್ದರಾಮಯ್ಯ

ಸಾರಾಂಶ

ಮೈಸೂರು ಪಾಲಿಕೆ ಚುನಾವಣೆ ಮುಕ್ತಾಯವಾಗಿದೆ. ಇದೆ ಬೆನ್ನಲ್ಲೇ ಮಾಜಿ ಸಿಎಂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ  ತೋಟದ ಮನೆಗೆ ತೆರಳಿದ್ದಾರೆ. ಕೆಜೆ ಜಾರ್ಜ್ ಅವರ ತೋಟದ ಮನೆಗೆ ತೆರಳಿದ್ದಾರೆ.

 ಬೆಂಗಳೂರು (ಫೆ.27):  ಮೈಸೂರು ಮಹಾನಗರ ಪಾಲಿಕೆ ಮೇಯರ್‌-ಉಪಮೇಯರ್‌ ಚುನಾವಣೆ ಮೈತ್ರಿಯ ಬೆನ್ನಲ್ಲೇ ಸಿದ್ದರಾಮಯ್ಯ ಎರಡು ದಿನಗಳ ವಿಶ್ರಾಂತಿಗೆ ತೆರಳಿದ್ದಾರೆ. ಮಾಜಿ ಸಚಿವ ಕೆ.ಜೆ. ಜಾಜ್‌ರ್‍ ಅವರ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಶನಿವಾರ ಸಂಜೆ ಸುರ್ಜೇವಾಲಾ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಗೆ ಸಿದ್ದರಾಮಯ್ಯ

ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ನಡೆಯಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರ ಪುತ್ರ ಅರ್ಜುನ್‌ ಸುರ್ಜೇವಾಲಾ ಅವರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಶನಿವಾರ ದೆಹಲಿಗೆ ತೆರಳಲಿದ್ದಾರೆ.

ಸಿದ್ದರಾಮಯ್ಯಗೆ ಆಹ್ವಾನಿಸಿದ BJP ಶಾಸಕ : 10 ಎಕರೆ ಜಮೀನು ನೀಡುವುದಾಗಿ ಹೇಳಿಕೆ .

ಭಾನುವಾರವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಪುತ್ರಿಯ ವಿವಾಹದ ಬೀಗರೂಟ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಅವರು ಮಾ.7 ರಂದು ಹರಿಯಾಣದಲ್ಲಿ ನಡೆಯಲಿರುವ ಸುರ್ಜೇವಾಲಾ ಪುತ್ರನ ವಿವಾಹ ಆರತಕ್ಷತೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ರಾಜ್ಯದ ಇಬ್ಬರೂ ನಾಯಕರು ಪ್ರತ್ಯೇಕವಾಗಿಯೇ ಮದುವೆ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್