ಮೈಸೂರು ಬೆಂಗಳೂರು ದಶಪಥ ರಸ್ತೆ ಕ್ರೆಡಿಟ್ ಕಾಂಗ್ರೆಸ್‌ಗೆ ಸಲ್ಲಬೇಕು: ಸಿದ್ದರಾಮಯ್ಯ

By Gowthami K  |  First Published Mar 6, 2023, 5:36 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು - ಬೆಂಗಳೂರು ನಡುವಿನ ದಶಪಥ ಹೆದ್ದಾರಿಯನ್ನು ಮಾರ್ಚ್.9ರಂದು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಮಾತ್ರವಲ್ಲ ಈ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು.


ಮೈಸೂರು (ಮಾ.6): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು - ಬೆಂಗಳೂರು ನಡುವಿನ ದಶಪಥ ಹೆದ್ದಾರಿಯನ್ನು ಮಾರ್ಚ್.9ರಂದು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಮಾತ್ರವಲ್ಲ ಈ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು. ರಸ್ತೆ ನಿರ್ಮಾಣದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಸರ್ಕಾರದ ಯಾವ ಪಾತ್ರ ಕೂಡ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಸಂಸದ ಪ್ರತಾಪ ಸಿಂಹ ಅವರ ಲೋಕಸಭಾ ವ್ಯಾಪ್ತಿಗೆ ಕೆಲ ಕಿ.ಮೀ ಮಾತ್ರ ಸೇರುತ್ತದೆ. ಹೀಗಿದ್ದರೂ ಈ ರಸ್ತೆ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಈ ಬಗ್ಗೆ ಎಲ್ಲಾ ಮಾಹಿತಿ ಇದೆ. ಅವರೇ ಮುಂದೆ ನಿಂತು ಹೆದ್ದಾರಿ ನಿರ್ಮಿಸಿದ್ದಾರೆ ಎಂದಿದ್ದಾರೆ.

ಮೋದಿಯಿಂದ  ಬೆಂಗಳೂರು- ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಉದ್ಘಾಟನೆ
ಮಾರ್ಚ್ 12ರಂದು ಬೆಂಗಳೂರು- ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ನಗರದ ಪ್ರವಾಸಿ ಮಂದಿರ ವೃತ್ತದಿಂದ ಹಳೇ ಎಂವಿಜಿ ರಸ್ತೆವರೆಗೆ ಸುಮಾರು 1.5 ಕಿ.ಮೀವರೆಗೆ ರೋಡ್‌ ಶೋ ನಡೆಸಲಿದ್ದಾರೆ.

Tap to resize

Latest Videos

ರೋಡ್‌ ಶೋ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಎಚ್‌.ಎನ್‌.ಗೋಪಾಲಕೃಷ್ಣ ನೇತೃತ್ವದಲ್ಲಿ ಪೊಲೀಸರು ಹಾಗೂ ಅಧಿಕಾರಿಗಳ ತಂಡ ಭಾನುವಾರ ಹೆದ್ದಾರಿಯಲ್ಲಿ ರಸ್ತೆಯ ಶುಚಿತ್ವ, ದುರಸ್ತಿ ಕುರಿತು ಪರಿಶೀಲನೆ ನಡೆಸಿತು.

ನಗರದ ಪ್ರವಾಸಿ ಮಂದಿರದ ಸರ್ಕಲ್‌ನಿಂದ ರೋಡ್‌ ಶೋ ಪ್ರಾರಂಭವಾಗಿ, ಜಯಚಾಮರಾಜ ಒಡೆಯರ್‌ ವೃತ್ತದ ಮಾರ್ಗವಾಗಿ ಹಳೇ ಎಂವಿಜಿ ಬೇಕರಿ ರಸ್ತೆಯಲ್ಲಿ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಈ ಮಾರ್ಗವಾಗಿ ಕೈಗೊಳ್ಳಬೇಕಾದ ಅಭಿವೃದ್ಧಿ ಕೆಲಸ, ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು ನಾಳೆಯಿಂದಲೇ ಎಲ್ಲ ಕೆಲಸ ಪ್ರಾರಂಭವಾಗಬೇಕು ಎಂದರು.

National highway-48: ರಾಷ್ಟ್ರೀಯ ಹೆದ್ದಾರಿಯಲ್ಲಿ ಲೇನ್‌ ಶಿಸ್ತು ಪಾಲಿಸದಿದ್ದರೆ ₹500 ದಂಡ

ಈ ವೇಳೆ ಎಸ್ಪಿ ಎನ್‌.ಯತೀಶ್‌, ಅಪರ ಜಿಲ್ಲಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜು, ತಹಸೀಲ್ದಾರ್‌ ವಿಜಯ್‌ಕುಮಾರ್‌, ನಗರಸಭಾ ಆಯುಕ್ತ ಮಂಜುನಾಥ್‌, ಪರಿಸರ ವಿಭಾಗದ ಅಭಿಯಂತರ ರುದ್ರೇಗೌಡ, ಅಭಿಯಂತರ ರವಿಕುಮಾರ್‌, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನರೇಶ್‌ ಉಪಸ್ಥಿತರಿದ್ದರು.

ವಾಹನ ಸವಾರರಿಗೆ ಮತ್ತೆ ಬರೆ: ಏಪ್ರಿಲ್‌ 1ರಿಂದ ಹೈವೇ ಟೋಲ್‌ ದರ ಶೇ. 5ರಿಂದ ಶೇ.10 ರಷ್ಟು ಏರಿಕೆ..?

ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 12ರಂದು ಮಂಡ್ಯ ನಗರದಲ್ಲಿ ರೋಡ್‌ ಶೋ ನಡೆಸಲಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಡಾ.ಎಚ್‌.ಎನ್‌.ಗೋಪಾಲಕೃಷ್ಣ, ಎಸ್ಪಿ ಎನ್‌.ಯತೀಶ್‌, ಅಪರ ಜಿಲ್ಲಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜು, ತಹಸೀಲ್ದಾರ್‌ ವಿಜಯ್‌ ಕುಮಾರ್‌, ನಗರಸಭಾ ಆಯುಕ್ತ ಮಂಜುನಾಥ್‌, ಪರಿಸರ ವಿಭಾಗದ ಅಭಿಯಂತರ ರುದ್ರೇಗೌಡ, ಅಭಿಯಂತರ ರವಿಕುಮಾರ್‌, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನರೇಶ್‌ ಉಪಸ್ಥಿತರಿದ್ದರು.

click me!