
ಬೆಂಗಳೂರು(ಮಾ.28): ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆ ಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ...
Posted by Siddaramaiah on Saturday, March 27, 2021
ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು? ಎಂದು ಪ್ರಶ್ನಿಸಿದ್ದಾರೆ.
ನನ್ನ ಹೆಸರು ಪ್ರಸ್ತಾಪ ಮಾಡ್ಲಿ ಬಿಡ್ರಿ, ಎಸ್ಐಟಿ ಇದೆ, ತನಿಖೆಯಾಗಲಿ: ಡಿಕೆಶಿ
ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಮಾಧ್ಯಮಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವರು ಈ ಬಗ್ಗೆ ತಕ್ಷಣ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ