ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಮೊಬೈಲ್ ಕುಮಾರಸ್ವಾಮಿ ಮನೆಯಲ್ಲೇ ಎಕ್ಸ್‌ಚೇಂಜ್: ಪೊಲೀಸ್ ಆಯುಕ್ತರಿಂದ ರಿವೀಲ್

Published : Nov 01, 2026, 03:39 PM IST
HD Kumaraswamy Seemant Kumar Singh

ಸಾರಾಂಶ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದ ಮೊಬೈಲ್ ಎಕ್ಸ್‌ಚೇಂಜ್ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದಲ್ಲಿ ನಡೆದಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪ್ರಜ್ವಲ್ ಪ್ರಸಾದ್ ಮತ್ತು ವಿನೋದ್ ಶರ್ಮಾ ನಾಪತ್ತೆಯಾಗಿದ್ದು, ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಬೆಂಗಳೂರು (ನ.01): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆಸಲಾಗಿದೆ ಎನ್ನಲಾದ ಚರ್ಚಾಸ್ಪದ 'ಸ್ಟಿಂಗ್ ಆಪರೇಷನ್' ಪ್ರಕರಣಕ್ಕೆ ಸಂಬಂಧಿಸಿದ ಮೊಬೈಲ್ ಫೋನ್ ಎಕ್ಸ್‌ಚೇಂಜ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದಲ್ಲೇ ನಡೆದಿದೆ ಎಂಬ ಸತ್ಯಾಂಶ ತಿಳಿದುಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಸ್ಟಿಂಗ್ ಆಪರೇಷನ್ ತನಿಖೆಯನ್ನು ಬೆಂಗಳೂರು ನಗರ ಪೊಲೀಸ್ ಇಲಾಖೆ ಮತ್ತಷ್ಟು ತೀವ್ರಗೊಳಿಸಿದ್ದು, ಅತ್ಯಂತ ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದಲ್ಲೇ ಮೊಬೈಲ್ ಫೋನ್ ಎಕ್ಸ್‌ಚೇಂಜ್ ಆಗಿದೆ ಎಂಬ ವಿಚಾರ ತನಿಖೆಯಲ್ಲಿ ಸತ್ಯವೆಂದು ತಿಳಿದುಬಂದಿದ್ದು, ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಮಾಧ್ಯಮಗಳಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಕುಮಾರಸ್ವಾಮಿ ನಿವಾಸದಲ್ಲಿ ಮೊಬೈಲ್ ಎಕ್ಸ್‌ಚೇಂಜ್:

ಪ್ರಕರಣದ ತನಿಖಾ ಪ್ರಗತಿ ಕುರಿತು ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ‘ಪ್ರಜ್ವಲ್ ಪ್ರಸಾದ್ ಖರೀದಿ ಮಾಡಿದ್ದ ಮೊಬೈಲ್ ಮೂಲಕವೇ ಈ ಸ್ಟಿಂಗ್ ವೀಡಿಯೋವನ್ನು ಅಪ್‌ಲೋಡ್ ಮಾಡಲಾಗಿದೆ. ಇದನ್ನು ರಿತೇಶ್ ಪಾಂಡೆ ಮುಖಾಂತರ ಅಪ್‌ಲೋಡ್ ಮಾಡಿಸಲಾಗಿದೆ. ಆದರೆ ಅಪ್‌ಲೋಡ್ ಮಾಡಲು ಸೂಚನೆ ನೀಡಿದ್ದ ಸೂತ್ರಧಾರ ಯಾರು ಎಂಬುದರ ಕುರಿತು ವಿಸ್ತೃತ ತನಿಖೆ ನಡೆಸಲಾಗುತ್ತಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದಲ್ಲಿ ಮೊಬೈಲ್ ಎಕ್ಸ್‌ಚೇಂಜ್ ಆಗಿರುವುದಕ್ಕೆ ಪೂರಕವಾದ ಮಹತ್ವದ ದಾಖಲೆಗಳು ಈಗಾಗಲೇ ಪತ್ತೆಯಾಗಿವೆ. ಅಲ್ಲದೆ, ಮೊಬೈಲ್ ಖರೀದಿ ಮಾಡಿದ ಅಂಗಡಿಯ ಸಿಸಿಟಿವಿ (CCTV) ದೃಶ್ಯಾವಳಿಗಳೂ ಸಹ ಪೊಲೀಸರಿಗೆ ಸಿಕ್ಕಿವೆ. ಮುಂದಿನ ದಿನಗಳಲ್ಲಿ ಸ್ಥಳ ಮಹಜರು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದು’ ಎಂದು ತಿಳಿಸಿದರು.

ಪ್ರಜ್ವಲ್ ಪ್ರಸಾದ್ ಹಾಗೂ ವಿನೋದ್ ಶರ್ಮಾ ನಾಪತ್ತೆ:

‘ಈ ಪ್ರಮುಖ ಪ್ರಕರಣದ ತನಿಖೆಯಲ್ಲಿ ರಿತೇಶ್ ಪಾಂಡೆ ನೀಡಿದ ಹೇಳಿಕೆಯ ಆಧಾರದ ಮೇಲೆ ಪ್ರತಿಯೊಂದು ಸಂಗತಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದಂತೆ ನಡೆದಿದೆಯಾ ಅಥವಾ ಪ್ರಕರಣದ ಹಿಂದೆ ಯಾರ ಹಣತೆ ಹಾಗೂ ಸಂಚು ಕೆಲಸ ಮಾಡಿದೆ ಎಂಬುದರ ಕುರಿತು ಆಳವಾದ ತನಿಖೆ ನಡೆಯುತ್ತಿದೆ. ಪ್ರಕರಣದ ಪ್ರಮುಖ ಕೊಂಡಿಗಳಾದ ಪ್ರಜ್ವಲ್ ಪ್ರಸಾದ್ ಹಾಗೂ ವಿನೋದ್ ಶರ್ಮಾ ಪ್ರಸ್ತುತ ನಾಪತ್ತೆಯಾಗಿದ್ದು, ಇಬ್ಬರಿಗಾಗಿ ಪೊಲೀಸರ ವಿಶೇಷ ತಂಡ ಹುಡುಕಾಟ ನಡೆಸುತ್ತಿದೆ’ ಎಂದು ಆಯುಕ್ತರು ಸ್ಪಷ್ಟಪಡಿಸಿದರು.

ತನಿಖೆ ಬಳಿಕ ಪೂರ್ಣ ಸತ್ಯಾಂಶ ಹೊರಕ್ಕೆ:

ಪ್ರಸ್ತುತ ತನಿಖೆಯು ಅತ್ಯಂತ ಸೂಕ್ಷ್ಮ ಹಂತದಲ್ಲಿದ್ದು, ಈಗಲೇ ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ನಾಪತ್ತೆಯಾಗಿರುವ ಪ್ರಜ್ವಲ್ ಪ್ರಸಾದ್ ಬಂಧನವಾದ ನಂತರ ಈ ಇಡೀ ಜಾಲದ ಹಿನ್ನೆಲೆ, ಯಾರ್ಯಾರ ಪಾತ್ರ ಎಷ್ಟಿದೆ ಎಂಬುದು ಪೂರ್ಣ ಪ್ರಮಾಣದಲ್ಲಿ ಸ್ಪಷ್ಟವಾಗಲಿದೆ' ಎಂದು ಸೀಮಂತ್ ಕುಮಾರ್ ಸಿಂಗ್ ಪತ್ರಕರ್ತರಿಗೆ ವಿವರಣೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ರಾಜ್ಯೋತ್ಸವದಲ್ಲಿ ಕನ್ನಡಿಗರ ಹೃದಯ ಗೆದ್ದ ದಿನೇಶ್ ಕಾರ್ತಿಕ್ ಶುಭಾಶಯ..! RCB ಮನೆಮಗನ ಕನ್ನಡ ಪ್ರೀತಿಗೆ ಫ್ಯಾನ್ಸ್‌ ಫಿದಾ!
ಕರ್ನಾಟಕಕ್ಕೆ ಗೊತ್ತೇ ಆಗದೆ ಮಹಾರಾಷ್ಟ್ರದಿಂದ ₹19,000 ಕೋಟಿಯ ಕೃಷ್ಣಾ ನದಿ ತಿರುವು ಯೋಜನೆ; ಎಂ.ಬಿ. ಪಾಟೀಲ ಆಕ್ಷೇಪ