
ಬೆಂಗಳೂರು(ಮಾ.29): ಬಿಜೆಪಿ ಆಳ್ವಿಕೆಯಲ್ಲಿ ವಿರೋಧಪಕ್ಷದ ರಾಜ್ಯಾಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದಾದರೆ ಸಾಮಾನ್ಯ ಜನರ ಪಾಡೇನು? ಕೆಪಿಸಿಸಿ ಅಧ್ಯಕ್ಷರಿಗೆ ರಕ್ಷಣೆ ನೀಡದ ಬೆಳಗಾವಿ ಪೊಲೀಸರ ‘ಮೂಕ ನಾಟಕ’. ಪೊಲೀಸರ ಮೇಲೆ ನಂಬಿಕೆಯಿಲ್ಲ ಎಂಬ ಸಿ.ಡಿ. ಪ್ರಕರಣದ ಸಂತ್ರಸ್ತೆಯ ಹೇಳಿಕೆ ಸಮರ್ಥಿಸುವಂತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳೆಂದು ಹೇಳಿಕೊಂಡವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕಾರುಗಳ ಮೇಲೆ ಕಲ್ಲೆಸೆದು ಪುಂಡಾಟಿಕೆ ನಡೆಸಿರುವುದು ಖಂಡನೀಯ ಎಂದು ಕಿಡಿ ಕಾರಿದ್ದಾರೆ.
ಸಿ.ಡಿ.ಕೇಸ್: ಬೆಳಗಾವಿಯಲ್ಲಿ ಹೈಡ್ರಾಮಾ, ರಮೇಶ್ ಜಾರಕಿಹೊಳಿ ಬೆಂಬಲಿಗರ ಪುಂಡಾಟ
ಇದು ಬಿಜೆಪಿ ಪ್ರಾಯೋಜಿತ ಗೂಂಡಾಗಿರಿ. ರಾಜ್ಯದ ಜನ ಇದೆಲ್ಲವನ್ನೂ ಗಮನಿಸುತ್ತಿದ್ದಾರೆ ಎಚ್ಚರವಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ