ಮಡಿಕೇರಿಯ ಶಾಲಾ ಆವರಣದಲ್ಲಿ ಶಸ್ತ್ರ ತರಬೇತಿ ನೀಡಿದ ನಾಯಕರ ಬಂಧಿಸಿ: ಸಿದ್ದರಾಮಯ್ಯ ಒತ್ತಾಯ

Published : May 17, 2022, 03:00 AM IST
ಮಡಿಕೇರಿಯ ಶಾಲಾ ಆವರಣದಲ್ಲಿ ಶಸ್ತ್ರ ತರಬೇತಿ ನೀಡಿದ ನಾಯಕರ ಬಂಧಿಸಿ: ಸಿದ್ದರಾಮಯ್ಯ ಒತ್ತಾಯ

ಸಾರಾಂಶ

ಮಡಿಕೇರಿ ಶಾಲೆಯಲ್ಲಿ ಯುವಜನರಿಗೆ ಶಸ್ತ್ರ ತರಬೇತಿ ನೀಡಿ ಬಜರಂಗದಳ ಕಾನೂನಿಗೆ ಬಹಿರಂಗ ಸವಾಲು ಹಾಕಿದೆ. ರಾಜ್ಯದಲ್ಲಿ ಸರ್ಕಾರ ಬದುಕಿದ್ದರೆ ಕೂಡಲೇ ಬಜರಂಗದಳ ನಾಯಕರನ್ನು ಬಂಧಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರು (ಮೇ.17): ಮಡಿಕೇರಿ (Madikeri) ಶಾಲೆಯಲ್ಲಿ ಯುವಜನರಿಗೆ ಶಸ್ತ್ರ ತರಬೇತಿ (Arms Training) ನೀಡಿ ಬಜರಂಗದಳ (Bajrang Dal) ಕಾನೂನಿಗೆ ಬಹಿರಂಗ ಸವಾಲು ಹಾಕಿದೆ. ರಾಜ್ಯದಲ್ಲಿ ಸರ್ಕಾರ ಬದುಕಿದ್ದರೆ ಕೂಡಲೇ ಬಜರಂಗದಳ ನಾಯಕರನ್ನು ಬಂಧಿಸಬೇಕು (Arrest) ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಗೃಹ ಮತ್ತು ಶಿಕ್ಷಣ ಖಾತೆಗೆ ಸಚಿವರಿದ್ದಾರೆಯೇ? ಸರ್ಕಾರ ಜೀವಂತವಾಗಿದೆಯೇ ಎಂಬ ಪ್ರಶ್ನೆಯನ್ನು ಈ ಘಟನೆ ಹುಟ್ಟಿಸಿದೆ ಎಂದಿದ್ದಾರೆ. 

ಬಜರಂಗದಳ ನಡೆಸಿರುವ ಕಾನೂನುಬಾಹಿರ ಕಾರ್ಯಕ್ರಮದಲ್ಲಿ ಶಾಸಕರಾದ ಅಪ್ಪಚ್ಚು ರಂಜನ್‌, ಕೆ.ಜಿ.ಬೋಪಯ್ಯ ಹಾಗೂ ಸುಜ ಕುಶಾಲಪ್ಪ ಭಾಗವಹಿಸಿದ್ದಾರೆ. ಇವರ ಬದ್ಧತೆ ಇರುವುದು ಸಂವಿಧಾನಕ್ಕೋ ಅಥವಾ ಬಜರಂಗದಳಕ್ಕೋ ಎಂದು ಪ್ರಶ್ನೆ ಮಾಡಿದ್ದಾರೆ. ಶಸ್ತ್ರಾಸ್ತ್ರ ತರಬೇತಿ ಸಂಪೂರ್ಣವಾಗಿ ಕಾನೂನು ವಿರೋಧಿ ಚಟುವಟಿಕೆಯಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಕ್ಷಣ ಬಜರಂಗದಳದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು. 

ಸಿದ್ದರಾಮಯ್ಯ ಸರ್ಕಾರದ ದಿಂಬು, ಹಾಸಿಗೆ ಹಗರಣ ಮುಚ್ಚಿ ಹಾಕಲಿಲ್ವಾ?: ಸಿದ್ದು ವಿರುದ್ಧ ಎಸ್‌ಟಿಎಸ್‌ ಗರಂ

ಶಾಲೆಯ ಆವರಣದಲ್ಲಿ ಇಂತಹ ಕಾನೂನು ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡಿರುವ ಶಾಲೆಯ ಆಡಳಿತ ಮಂಡಳಿ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಶ್ರೀರಾಮಸೇನೆ, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಮೊದಲಾದ ಸಂಘಟನೆಗಳ ಜೊತೆ ತನ್ನ ಸಂಬಂಧ ಏನು ಎಂಬುದನ್ನು ಬಿಜೆಪಿ ಮೊದಲು ಸ್ಪಷ್ಟಪಡಿಸಿಬೇಕು. ರಾಜ್ಯದಲ್ಲಿ ಶಾಂತಿ ಕದಡಿಸಲು, ಭೀತಿ ಹುಟ್ಟಿಸಲು ಬಿಜೆಪಿ ಸರ್ಕಾರ ಬಜರಂಗದಳ, ಶ್ರೀರಾಮ ಸೇನೆಯಂತಹ ಕೋಮುವಾದಿ ಸಂಘಟನೆಗಳಿಗೆ ವಿಶೇಷ ಅನುಮತಿ ನೀಡಿದೆಯೇ ಎಂದು ಕಿಡಿ ಕಾರಿದ್ದಾರೆ.

ಜಾತಿ ಗಣತಿ ಆಧರಿಸಿ ಒಬಿಸಿ ಮೀಸಲು ಕೊಡಿ: ಹಿಂದುಳಿದ ವರ್ಗಗಳ ಮೀಸಲಾತಿ ಪ್ರಕ್ರಿಯೆಗೆ ಕಾಯದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದಿಂದ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದಕ್ಕೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯೊಂದೇ ಪರಿಹಾರವಾಗಿದ್ದು, ಈ ವರದಿ ಆಧಾರದ ಮೇಲೆ ಒಬಿಸಿ ಮೀಸಲಾತಿ ರೂಪಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕು. ಅದರ ಆಧಾರದ ಮೇಲೆಯೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೋರಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.

Mandya: ಕಾಂಗ್ರೆಸ್‌ ಪಕ್ಷದಲ್ಲಿ ಎರಡು ಗುಂಪುಗಳಿವೆ: ಸಂಸದ ಪ್ರತಾಪ್‌ ಸಿಂಹ ಟೀಕೆ!

ಸುಪ್ರೀಂ ಕೋರ್ಟ್‌ ಆದೇಶದಿಂದ ಹಿಂದುಳಿದ ವರ್ಗಗಳಿಗೆ ಆಗಲಿರುವ ಈ ಅನ್ಯಾಯವನ್ನು ತಪ್ಪಿಸಲು ರಾಜ್ಯ ಸರ್ಕಾರ ಕಾನೂನು ತಜ್ಞರ ಜೊತೆ ಸಮಾಲೋಚಿಸಿ, ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಕಾನೂನು ಹೋರಾಟಕ್ಕೆ ತಯಾರಾಗಬೇಕು. ಪರಿಸ್ಥಿತಿ ಕೈ ಮೀರಿ ಹೋಗುವ ಮೊದಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ಬೆಳವಣಿಗೆಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂ ಕೋರ್ಟ್‌ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ