ಇನ್ನೂ 2.5 ವರ್ಷ ಸಿದ್ದರಾಮಯ್ಯ ಸಿಎಂ, ಅಧಿಕಾರ ಹಸ್ತಾಂತರ ಇಲ್ಲ: ಬಸವರಾಜ ರಾಯರಡ್ಡಿ

Kannadaprabha News, Ravi Janekal |   | Kannada Prabha
Published : Dec 21, 2025, 06:19 AM IST
Siddaramaiah Will Be CM for Next 2 5 Years says Basavaraj Rayareddy

ಸಾರಾಂಶ

ಶಾಸಕ ಬಸವರಾಜ ರಾಯರಡ್ಡಿ ಅವರು, ಸಿದ್ದರಾಮಯ್ಯನವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಾಗಿದ್ದು, ಪ್ರಧಾನಿ ಮೋದಿ ಕೂಡ ಇದೇ ಮಾದರಿ ಅನುಸರಿಸುತ್ತಿದ್ದಾರೆ ಎಂದರು.

ಕೊಪ್ಪಳ (ಡಿ.21): ಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾರೂ ತಲೆಕಡೆಸಿಕೊಳ್ಳಬೇಡಿ. ಸಿದ್ದರಾಮಯ್ಯ ಅವರೇ ಪೂರ್ಣ ಅವಧಿಗೆ ಇರಲಿದ್ದು, ರಾಜ್ಯದಲ್ಲಿ ಇನ್ನು 2.5 ವರ್ಷ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಅವರು ಸಿದ್ದರಾಮಯ್ಯ ಪರ ಮತ್ತೊಮ್ಮೆ ಬ್ಯಾಟಿಂಗ್‌ ಮಾಡಿದ್ದಾರೆ.

ಸಿಎಂ ಅಧಿಕಾರ ಹಸ್ತಾಂತರ ಇಲ್ಲ ಎಂದ ರಾಯರಡ್ಡಿ

ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಶನಿವಾರ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಆ ಸಿಎಂ, ಈ ಸಿಎಂ ಅಂತ ಯಾರೂ ತಲೆ ಕೆಡೆಸಿಕೊಳ್ಳಬೇಡಿ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಹೇಳಿದಂತೆ ಸಿದ್ದರಾಮಯ್ಯ ಅವರು ಪೂರ್ಣ ಅವಧಿಯ ಸಿಎಂ ಆಗಿದ್ದು, ಅವರೇ ಆ ಸ್ಥಾನದಲ್ಲಿ ಇರುತ್ತಾರೆ ಎಂದು ಹೇಳುವ ಮೂಲಕ ಅಧಿಕಾರ ಹಸ್ತಾಂತರ ಕುರಿತು ಸ್ಪಷ್ಟನೆ ನೀಡಿದರು.

ಗ್ಯಾರಂಟಿ ಮಾದರಿಯನ್ನೇ ಪ್ರಧಾನಿ ಮೋದಿ ಅನುಸರಿಸುತ್ತಿದ್ದಾರೆ:

ರಾಜ್ಯದಲ್ಲಿ ಸಾರ್ವಜನಿಕರು ಅಭಿವೃದ್ಧಿ ಕಾಣುತ್ತಿದ್ದು, ಜನರ ತಲಾ ಆದಾಯ ಹೆಚ್ಚಳ ಆಗಿದೆ. ತಿಂಗಳಿಗೆ ಜನರಿಗೆ ₹6000 ರಿಂದ ₹7 ಸಾವಿರ ಹಣ ಗ್ಯಾರಂಟಿ ಯೋಜನೆಯಿಂದ ಜನರಿಗೆ ಸಿಗುತ್ತಿದೆ. ಇದರಿಂದ ಜನರು ಹೆಚ್ಚು ಖರೀದಿಗೆ ಮುಂದಾಗಿದ್ದಾರೆ. ಇದರಿಂದ ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಳವಾಗಿದೆ. ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ನೋಡಿ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಇತರ ರಾಜ್ಯಗಳ ಚುನಾವಣೆಗಳಲ್ಲಿ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನು ಸಮರ್ಥಿಸಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವೀರವೈಶ ಲಿಂಗಾಯತ ಸಮಾಜ ಒಡೆದಾಳಲು ಯತ್ನ: ವಿಜಯೇಂದ್ರ
ತಾಕತ್ತಿದ್ರೆ ನೋಟಲ್ಲಿರುವ ಗಾಂಧಿ ಚಿತ್ರ ತೆಗೆಯಿರಿ: ಕೇಂದ್ರಕ್ಕೆ ಡಿಕೆಶಿ ಸವಾಲು!