ಕೊರೋನಾದಿಂದ ಸಿದ್ದರಾಮಯ್ಯ ಪೂರ್ಣ ಗುಣಮುಖ: ಇಂದು ಡಿಸ್ಚಾರ್ಜ್‌

Kannadaprabha News   | Asianet News
Published : Aug 13, 2020, 09:17 AM ISTUpdated : Aug 13, 2020, 08:06 PM IST
ಕೊರೋನಾದಿಂದ ಸಿದ್ದರಾಮಯ್ಯ ಪೂರ್ಣ ಗುಣಮುಖ: ಇಂದು ಡಿಸ್ಚಾರ್ಜ್‌

ಸಾರಾಂಶ

ಕೋವಿಡ್‌ ಸೋಂಕು ಹಿನ್ನೆಲೆಯಲ್ಲಿ ಆ.4ರಂದು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ| ಎರಡೂ ಪರೀಕ್ಷೆಗಳಲ್ಲೂ ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ತೀರ್ಮಾನ: ಮಣಿಪಾಲ್‌ ಆಸ್ಪತ್ರೆ ವೈದ್ಯರು|

ಬೆಂಗಳೂರು(ಆ.13):  ಕೋವಿಡ್‌ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂಪೂರ್ಣ ಚೇತರಿಸಿಕೊಂಡಿದ್ದು ಇಂದು(ಗುರುವಾರ) ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

"

ಸೋಂಕು ಹಿನ್ನೆಲೆಯಲ್ಲಿ ಆ.4ರಂದು ಸಿದ್ದರಾಮಯ್ಯ ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದಲ್ಲಿ ಅವರಿಗೆ ಜ್ವರದ ಲಕ್ಷಣ ಕಾಣಿಸಿಕೊಂಡಿತ್ತು. ಭಾನುವಾರ ಜ್ವರದಿಂದ ಸಂಪೂರ್ಣ ಗುಣಮುಖರಾಗಿದ್ದರು. ಸೋಮವಾರ ಮತ್ತು ಮಂಗಳವಾರ ನಡೆಸಿದ ಕೋವಿಡ್‌ ಪರೀಕ್ಷೆಯ ಫಲಿತಾಂಶ ನಿನ್ನೆ(ಬುಧವಾರ) ಬಂದಿದ್ದು, ಎರಡು ಪರೀಕ್ಷೆಗಳಲ್ಲೂ ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ಅವರನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮಣಿಪಾಲ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಒಂದೆರಡು ದಿನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಡುಗಡೆ ಸಾಧ್ಯತೆ

ಶಾಸಕ ಯತೀಂದ್ರ ಚೇತರಿಕೆ:

ಕೋವಿಡ್‌ ಸೋಂಕಿಗೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಮತ್ತಷ್ಟುಚೇತರಿಸಿಕೊಳ್ಳುತ್ತಿದ್ದಾರೆ. ತೀವ್ರ ಜ್ವರ ಹಾಗೂ ಸುಸ್ತಿನಿಂದ ಬಳಲುತ್ತಿದ್ದ ಅವರಿಗೆ ಈಗ ಯಾವುದೇ ಲಕ್ಷಣಗಳಿಲ್ಲ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಇನ್ನೂ ಕೆಲ ದಿನಗಳ ಕಾಲ ಚಿಕಿತ್ಸೆ ಮುಂದುವರೆಯಲಿದ್ದು, ಬಳಿಕ ಮತ್ತೆ ಕೋವಿಡ್‌ ಪರೀಕ್ಷೆ ನಡೆಸಿ ನೆಗೆಟಿವ್‌ ವರದಿ ಬಂದರೆ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!