
ಮೈಸೂರು: ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅವರೇ 5 ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳುವ ಮೂಲಕ ಗೃಹ ಸಚಿವ ಜಿ. ಪರಮೇಶ್ವರ್ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಜಿ ಪರಮೇಶ್ವರ್ ಅವರು, ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ. 2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ರು ತಾನೇ ಹಾಗೆಯೇ ಈ ಬಾರಿಯೂ 2023ರಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028 ಅದನ್ನ ಅವರು ಮುಗಿಸಬೇಕು ತಾನೇ ಎಂದು ಮಾಧ್ಯಮದವರನ್ನೇ ಮರು ಪ್ರಶ್ನಿಸಿದ್ದಾರೆ.
ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ. ಹೈಕಮಾಂಡ್ ಯಾವ ಗೊಂದಲಗಳನ್ನ ಸೃಷ್ಟಿ ಮಾಡಿಲ್ಲ.ಬಯಾರು ಏನೇ ಹೇಳಿದರು ಅದು ಮುಖ್ಯ ಅಲ್ಲ. ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಎಂದು ಹೇಳಿದ್ಯಾ? ಯಾವತ್ತಾದರೂ ಬದಲಾವಣೆ ಬಗ್ಗೆ ಮಾತನಾಡಿದ್ದರಾ? ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ ಎಂಬುದಾಗಿದೆ ಎಂದು ಪರಮೇಶ್ವರ್ ಹೇಳಿಕೆ ನೀಡುತ್ತಾ ಸಿದ್ದರಾಮಯ್ಯ ಗದ್ದುಗೆಯನ್ನು ಭದ್ರಪಡಿಸುವ ಹೇಳಿಕೆ ನೀಡಿದ್ದಾರೆ.
ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಹೈಕಮಾಂಡ್ ಯಾವತಾದ್ರು ಇದರ ಬಗ್ಗೆ ಮಾತನಾಡಿದರೆ ಆಗ ಅದಕ್ಕೆ ಒಂದು ಅರ್ಥ ಬರುತ್ತದೆ. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ ಎಂದು ಪರಮೇಶ್ವರ್ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಡಿಸಿಎಂ ಆಗಿದ್ದಾರೆ, ಅವರು ನಮ್ಮ ನಾಯಕರು. ಅವರಿಗೆ ಯಾವ ಸಮಸ್ಯೆಯೂ ಆಗಿಲ್ಲ. ಸಿಎಂ ವಿಧಾನಸಭೆಯಲ್ಲೇ ಹೇಳಿದ್ದಾರೆ. ನಮ್ಮ ಎಲ್ಲಾ ಶಾಸಕರು ಸಿಎಂ ಸ್ಥಾನಕ್ಕೆ ಅರ್ಹರು ಎಂದು ಹೇಳಿದ್ದಾರೆ. ಅದರಲ್ಲಿ ನಾನು ಅರ್ಹ ಇನ್ನೊಬ್ಬರು ಅರ್ಹರಲ್ಲ ಎಂಬ ಪ್ರಶ್ನೆಯೇ ಬರುವುದಿಲ್ಲ ಎಂದು ಪರಮೇಶ್ವರ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಬೈಕ್‌ಗೆ ಗುದ್ದಿದ ಬುಲೇರೋ ಗೂಡ್ಸ್ ವಾಹನ : ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು
ಉಪಚುನಾವಣೆಯ ಫಲಿತಾಂಶಕ್ಕೂ ಬೇರೆ ವಿಚಾರಕ್ಕೆ ಸಂಬಂಧವೇ ಇಲ್ಲ, ಉಪ ಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದ ದಿಕ್ಸೂಚಿ ಅಲ್ಲ. ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡುವ ಮಾರ್ಕ್ಸ್ ಕೂಡ ಅಲ್ಲ. ಅದರ ಫಲಿತಾಂಶದ ಮೇಲೆ ಯಾವ ಬದಲಾವಣೆಯೂ ಆಗುವುದಿಲ್ಲ. ಎರಡು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ. ಜನ ಪರವಾಗಿ ತೀರ್ಪು ಕೊಡುತ್ತಾರೆ. ಗ್ಯಾರಂಟಿ ಯೋಜನೆಗಳನ್ನು ಮೀರಿಯೂ ಈ ಸರ್ಕಾರದ ಆಡಳಿತ ದಕ್ಷತೆಗೆ ಜನ ಮತ ಹಾಕುತ್ತಾರೆ. ಬಿಜೆಪಿಯವರು ಇಲ್ಲ ಸಲ್ಲದ ಆರೋಪಗಳನ್ನ ಮಾಡುತ್ತಿದ್ದಾರೆ. ಆದರೆ ಜನ ನಮ್ಮ ಪರವಾಗಿ ಇದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಇದನ್ನೂ ಓದಿ: ಕಲಬುರಗಿ: ನಡುರಸ್ತೆಯಲ್ಲೇ ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ