
ಬೆಟ್ಟದಪುರ (ಏ.16) ಇತಿಹಾಸ ಪ್ರಸಿದ್ಧ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ.
ಪದೇಪದೇ ಕಿರಿಕೇಡಿಗಳು ಈ ರೀತಿ ಮಾಡುತ್ತಿದ್ದರು ಸಹ ಅರಣ್ಯ ಇಲಾಖೆ ಮೌನವಹಿಸಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಪ್ರತಿ ವರ್ಷವೂ ಸಾವಿರಾರು ರು. ಬೆಳೆ ಬಾಳುವ ಔಷಧ ಗಿಡಗಳು ಅಲ್ಲದೆ ಅರಣ್ಯ ಇಲಾಖೆ ಇತ್ತೀಚಿಗೆ ನೆಟ್ಟಿರುವ ನೀಲಗಿರಿ ಮರಗಳು ಬೆಂಕಿಗೆ ಆಹುತಿಯಾಗಿದ್ದು, ಪ್ರಾಣಿ, ಪಕ್ಷಿಗಳು ಸಹ ಬೆಂಕಿಗೆ ಆಹುತಿಯಾಗಿವೆ.
ಕಿಡಿಗೇಡಿಗಳ ಈ ಕೃತ್ಯದಿಂದ ನಶಿಸಿ ಹೋಗುತ್ತಿರುವ ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿಯ ಬೆಟ್ಟವನ್ನು ಅರಣ್ಯ ಇಲಾಖೆ ರಕ್ಷಿಸಬೇಕೆಂದು ಪರಿಸರ ಪ್ರೇಮಿಗಳು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ದತ್ತಪೀಠ ಪರಿಸರದಲ್ಲಿ ಭಾರೀ ಬೆಂಕಿ; ಕುರುಚಲು , ಹಲ್ಲುಗಾವಲು ಸುಟ್ಟು ಕರಕಲು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ