ಮುಡಾ ಕೇಸಲ್ಲಿ ಪಾಸ್ಪೋರ್ಟ್‌ ಜಪ್ತಿ ಮಾಡಿ: ಆರ್‌. ಅಶೋಕ್‌

By Kannadaprabha News  |  First Published Oct 20, 2024, 6:43 AM IST

ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ 


ಬೆಂಗಳೂರು(ಅ.20):  ಮುಡಾ ಬಹುಕೋಟಿ ಹಗರಣದ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ದೃಷ್ಟಿಯಿಂದ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು, ಆರೋಪಿಗಳು ಮತ್ತು ಸಂಭವನೀಯ ಸಾಕ್ಷಿದಾರರ ಪಾಸ್‌ಪೋರ್ಟ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಜಾರಿ ನಿರ್ದೇಶನಾಲಯ(ಇ.ಡಿ.)ದ ನಿರ್ದೇಶಕರು ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇ.ಡಿ. ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿ, ತಾಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. 

Tap to resize

Latest Videos

ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಬಿಜೆಪಿ ವಿರುದ್ಧ ಹರಿಹಾಯ್ದ ಸಚಿವ ಮಂಕಾಳು ವೈದ್ಯ

ಇ.ಡಿ. ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೇ ಸೂಕ್ಷ್ಮವೂ ಆಗಿದೆ. ಹೀಗಾಗಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

click me!