ಬಿಎಂಟಿಸಿ ಎಂಡಿ, ನಿರ್ದೇಶಕರ ಸಹಿ ನಕಲು ಮಾಡಿ ₹76.57 ಲಕ್ಷ ನಷ್ಟ; 6 ಅಧಿಕಾರಿಗಳ ವಿರುದ್ಧ ಎಫ್‌ಐಆರ್

Published : Jul 31, 2023, 04:54 AM IST
ಬಿಎಂಟಿಸಿ ಎಂಡಿ, ನಿರ್ದೇಶಕರ ಸಹಿ ನಕಲು ಮಾಡಿ ₹76.57 ಲಕ್ಷ ನಷ್ಟ; 6 ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಸಾರಾಂಶ

ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ)ದ ಕೇಂದ್ರ ಕಚೇರಿಯಲ್ಲಿ ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳ ಸಹಿ ನಕಲು ಮಾಡಿ ನಿಗಮಕ್ಕೆ .76.57 ಲಕ್ಷ ನಷ್ಟಉಂಟು ಮಾಡಿದ ಆರೋಪದಡಿ ನಿಗಮದ ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕ ಸೇರಿ ಆರು ಮಂದಿ ಅಧಿಕಾರಿಗಳ ವಿರುದ್ಧ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬೆಂಗಳೂರು (ಜು.31) :  ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ)ದ ಕೇಂದ್ರ ಕಚೇರಿಯಲ್ಲಿ ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳ ಸಹಿ ನಕಲು ಮಾಡಿ ನಿಗಮಕ್ಕೆ .76.57 ಲಕ್ಷ ನಷ್ಟಉಂಟು ಮಾಡಿದ ಆರೋಪದಡಿ ನಿಗಮದ ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕ ಸೇರಿ ಆರು ಮಂದಿ ಅಧಿಕಾರಿಗಳ ವಿರುದ್ಧ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬಿಎಂಟಿಸಿ ಕೇಂದ್ರ ಕಚೇರಿಯ ಸಹಾಯಕ ಭದ್ರತಾ ಮತ್ತು ಜಾಗೃತಾ ಅಧಿಕಾರಿ ಸಿ.ಕೆ.ರಮ್ಯಾ ಅವರು ನೀಡಿದ ದೂರಿನ ಮೇರೆಗೆ ನಿಗಮದ ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕ ಶ್ರೀರಾಮ ಮುಲ್ಕಾವನ್‌, ವಿಭಾಗೀಯ ಸಂಚಲನ ಅಧಿಕಾರಿ ಶ್ಯಾಮಲಾ ಎಸ್‌.ಮದ್ದೋಡಿ, ಸಹಾಯಕ ಸಂಚಾರ ವ್ಯವಸ್ಥಾಪಕಿ ಬಿ.ಕೆ.ಮಮತಾ, ಸಹಾಯಕ ಸಂಚಾರ ಅಧೀಕ್ಷಕಿ ಟಿ.ಅನಿತಾ, ಸಂಚಾರ ನಿರೀಕ್ಷಕ ಸತೀಶ್‌, ಕಿರಿಯ ಸಹಾಯಕ ಪ್ರಕಾಶ್‌ ಕೊಪ್ಪಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Bengaluru crime: ಕಿಟಕಿ ಮೂಲಕ ಮನೆ ಬಾಗಿಲು ತೆರೆದು 15.30 ಲಕ್ಷದ ಚಿನ್ನ ಲೂಟಿ!

ಆರೋಪಿಗಳು ಕಳೆದ ಮೂರು ವರ್ಷಗಳಲ್ಲಿ ನಿಗಮದ ಕೆಲ ಬಸ್‌ ನಿಲ್ದಾಣಗಳ ವಾಣಿಜ್ಯ ಸಂಕೀರ್ಣ, ಬಸ್‌ ನಿಲ್ದಾಣ ಸ್ವಚ್ಛತಾ ನಿರ್ವಹಣೆ ಗುತ್ತಿಗೆ ಸೇರಿದಂತೆ ನಾಲ್ಕು ಟೆಂಡರ್‌ಗಳಲ್ಲಿ ಗುತ್ತಿಗೆದಾರರೊಂದಿಗೆ ಸೇರಿಕೊಂಡು ಒಳಸಂಚು ರೂಪಿಸಿದ್ದಾರೆ. ದಾಖಲೆಗಳಲ್ಲಿ ಬಿಎಂಟಿಸಿ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಸೂರ್ಯಸೇನ್‌, ವ್ಯವಸ್ಥಾಪಕ ನಿರ್ದೇಶಕರಾದ ಅನ್ಬುಕುಮಾರ್‌, ರೇಜು, ಸಿ.ಶಿಖಾ, ಭದ್ರತಾ ಮತ್ತು ಜಾಗೃತಾ ವಿಭಾಗದ ನಿರ್ದೇಶಕ ಕೆ.ಅರುಣ್‌ ಅವರ ಸಹಿಗಳನ್ನು ನಕಲು ಮಾಡಿ ನಿಗಮಕ್ಕೆ .₹76.57 ಲಕ್ಷ ಆರ್ಥಿಕ ನಷ್ಟಉಂಟು ಮಾಡಿರುವುದು ಇಲಾಖಾ ತನಿಖೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಈ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: 10 ವರ್ಷ ಪಿಕ್‌ಪಾಕೆಟ್‌ ಮಾಡಿ ಮೊದಲ ಸಲ ಸಿಕ್ಕಿಬಿದ್ದ ಗ್ಯಾಂಗ್‌..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ