ಧ್ರುವನಾರಾಯಣ ಹುಟ್ಟೂರಲ್ಲಿ ನೀರವಮೌನ: ಮೈಸೂರಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ

By Govindaraj S  |  First Published Mar 11, 2023, 11:44 AM IST

ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಅವರು ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. 


ಚಾಮರಾಜನಗರ (ಮಾ.11): ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಅವರು ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.  ಇದೀಗ ಧ್ರುವನಾರಾಯಣ ಹುಟ್ಟೂರು ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಧ್ರುವನಾರಾಯಣ ಹುಟ್ಟೂರಲ್ಲಿ ಆವರಿಸಿದೆ. 

ಹೆಗ್ಗವಾಡಿಯಲ್ಲಿ ರಂಗಸ್ವಾಮಿ ತಾಯಮ್ಮ ದಂಪತಿಯ ಪುತ್ರನಾಗಿ  1961ರಲ್ಲಿ ಜನಿಸಿದ್ದ ಧ್ರುವನಾರಾಯಣ ರಾಜಕೀಯವಾಗಿ ಎಷ್ಟೆ ಎತ್ತರಕ್ಕೆ ಬೆಳೆದರೂ ಹುಟ್ಟೂರನ್ನು ಮರೆತಿರಲಿಲ್ಲ. ತಮ್ಮೂರನ್ನು ಸಾಕಷ್ಟು ಅಭಿವೃದ್ದಿಪಡಿಸಿದ್ದರು. ಗ್ರಾಮದ ಬೀದಿ ಬೀದಿಗಳಿಗೆ ಸಿಮೆಂಟ್ ರಸ್ತೆಗಳು, ಕಬಿನಿನದಿಯಿಂದ ಶಾಶ್ವತ ಕುಡಿಯುವ ನೀರು ಸರಬರಾಜು, 65 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಅಂಬೇಡ್ಕರ ಭವನ, ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಉತ್ತಮ ಡಾಂಬರು ರಸ್ತೆ ವ್ಯವಸ್ಥೆ ಹೀಗೆ ಹತ್ತು ಹಲವು ಸೌಲಭ್ಯಗಳನ್ನು ಧ್ರುವನಾರಾಯಣ ಕಲ್ಪಿಸಿದ್ದರು. ಇನ್ನು ತಮ್ಮೂರ ಮಗನನ್ನು ಕಳೆದುಕೊಂಡು ಗ್ರಾಮಸ್ಥರು ದುಃಖತಪ್ತರಾಗಿದ್ದಾರೆ.

Tap to resize

Latest Videos

ಎಲ್ಲಾ ಸಮಾಜದವರು ಎಲ್ಲರನ್ನು ಪ್ರೀತಿಯಿಂದ ಕಾಣುತ್ತಿದ್ದ ವ್ಯಕ್ತಿ ಧ್ರುವನಾರಾಯಣ: ಡಿ.ಕೆ.ಶಿವಕುಮಾರ್

ಸಾರ್ವಜನಿಕ ದರ್ಶನಕ್ಕೆ ಅವಕಾಶ: ಇಂದು ಸಂಜೆ 4 ಗಂಟೆವರಗೆ ಧ್ರುವನಾರಾಯಣ ಪಾರ್ಥಿವ ಶರೀರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ಸದ್ಯ ಧ್ರುವ ನಾರಾಯಣ್ ಮೈಸೂರಿನ ವಿಜಯನಗರದ ನಿವಾಸದ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಳಿಕ ಮೈಸೂರು ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂಜನಗೂಡಿನ ಹುಲ್ಲಳ್ಳಿ ಸರ್ಕಲ್ ನಿಂದ ಆರ್ ಪಿ ರಸ್ತೆ ವರೆಗೆ ಮೆರವಣಿಗೆ ಮಾಡಿ  ಸಂಜೆ 4 ಗಂಟೆಯ ನಂತರ ಧ್ರುವನಾರಾಯಣ್ ಸ್ವಗ್ರಾಮಕ್ಕೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುವುದು.

ಪೊಲೀಸ್ ಗೌರವದೊಂದಿಗೆ ಆರ್‌.ಧ್ರುವನಾರಾಯಣ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

ಅಲ್ಲದೇ ಚಾಮರಾಜನಗರ ಕಾಂಗ್ರೆಸ್ ಕಚೇರಿ ಮುಂದೆ ಸಾರ್ವಜನಿಕ ದರ್ಶನಕ್ಕೆ ಅವಕಾಶ‌ ಮಾಡಲಾಗಿದ್ದು, ಬಳಿಕ ಚಾಮರಾಜದ ಹೆಗ್ಗವಾಡಿಗೆ ಸ್ಥಳಾಂತರ ಮಾಡಲಾಗುವುದು. ನಾಳೆ (ಭಾನುವಾರ) ಮಧ್ಯಾಹ್ನ 2 ಗಂಟೆಗೆ ಹುಟ್ಟೂರು ಹೆಗ್ಗವಾಡಿಯಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಮಾಜಿ ಶಾಸಕ, ಧ್ರುವನಾರಾಯಣ ಸಂಬಂಧಿ ಕಳಲೆ ಕೇಶವಮೂರ್ತಿ ತಿಳಿಸಿದ್ದಾರೆ ಇನ್ನು ನಂಜನಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಧ್ರುವನಾರಾಯಣನಿನ್ನೆ (ಶುಕ್ರವಾರ) ಸಭೆಯಲ್ಲಿ ಭಾಗಿಯಾಗಿದ್ದರು. ನಂಜನಗೂಡು ತಾಲ್ಲೂಕು ಹುಲ್ಲಹಳ್ಳಿ ಹೋಬಳಿಯ ಕಾರ್ಯಕ್ರಮದಲ್ಲಿ ನಿನ್ನೆ ಪೂರ್ತಿ ದಿನ ಬೆಳಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೂ ವಿವಿಧ ಗ್ರಾಮದಲ್ಲಿ ಪ್ರಚಾರ ಮಾಡಿ ಅನಂತರ ಮನೆಗೆ ತೆರಳಿದ್ದರು.

click me!