ನಾಡಹಬ್ಬ ದಸರಾ (ನವರಾತ್ರಿ) ಉತ್ಸವ ಶನಿವಾರದಿಂದ ಅ.26ರವರೆಗೆ 9 ದಿನಗಳ ಕಾಲ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಣೆ ಮಾಡುವ ಸಂಬಂಧ ಸರ್ಕಾರವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಬೆಂಗಳೂರು (ಅ. 15): ನಾಡಹಬ್ಬ ದಸರಾ (ನವರಾತ್ರಿ) ಉತ್ಸವ ಶನಿವಾರದಿಂದ ಅ.26ರವರೆಗೆ 9 ದಿನಗಳ ಕಾಲ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಣೆ ಮಾಡುವ ಸಂಬಂಧ ಸರ್ಕಾರವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಕೋವಿಡ್ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ನಾಡಹಬ್ಬ ದಸರಾವನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಬೇಕು. ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಆಚರಣೆಗೆ ಮುನ್ನವೇ ನಿಷೇಧಗಳ ಕುರಿತು ವ್ಯಾಪಕವಾಗಿ ಪ್ರಚಾರ ಮಾಡಬೇಕು.
undefined
ಚಾಮುಂಡಿ ಬೆಟ್ಟಕ್ಕೆ ಅ.14 ರಿಂದ 3 ದಿನಗಳ ಕಾಲ ನಿಷೇಧ
ದಸರಾ ಆಚರಣೆಯ ಕಾರ್ಯಕ್ರಮದಲ್ಲಿ 100ಕ್ಕಿಂತ ಹೆಚ್ಚು ಜನರು ಏಕಕಾಲದಲ್ಲಿ ಒಂದೆಡೆ ಸೇರುವಂತಿಲ್ಲ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಕೋವಿಡ್-19 ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೆ ಪಾಲನೆ ಮಾಡಬೇಕು. ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಹಬ್ಬ ಆಚರಣೆ ಮಾಡಬೇಕು. ನಾಡಹಬ್ಬ ದಸರಾ ತಯಾರಿ ಮತ್ತು ಚಟುವಟಿಕೆಗಳ ಕುರಿತು ಸಂಬಂಧಪಟ್ಟಪ್ರಾಧಿಕಾರಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸರ್ಕಾರವು ಸೂಚನೆ ನೀಡಿದೆ.