ಕೆಐಎಡಿಬಿಯಿಂದ ಭೂಮಿ ಹಂಚಿಕೆ ವ್ಯವಸ್ಥೆ ಸರಳೀಕರಣ

Published : Sep 06, 2022, 05:58 PM IST
ಕೆಐಎಡಿಬಿಯಿಂದ ಭೂಮಿ ಹಂಚಿಕೆ ವ್ಯವಸ್ಥೆ ಸರಳೀಕರಣ

ಸಾರಾಂಶ

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರಿಂದ ‌ಮತ್ತೊಂದು ಪ್ರಮುಖ ನಿರ್ಧಾರ. ಈಸ್ ಆಫ್ ಡುಯಿಂಗ್ ಬಿಸಿನೆಸ್’ ಮಾದರಿಯಲ್ಲಿ ‘ಈಸ್ ಆಫ್ಲ್ಯಾಂಡ್ ಅಲಾಟ್‌ಮೆಂಟ್’

ಬೆಂಗಳೂರು, (ಸೆ.06): ಕರ್ನಾಟಕ ಕೈಗಾರಿಕಾ ಇಲಾಖೆ ಭೂಮಿ ಹಂಚಿಕೆ ವ್ಯವಸ್ಥೆ ಸರಳೀಕರಣಗೊಳಿಸಿದೆ. ‘ಈಸ್ ಆಫ್ ಡುಯಿಂಗ್ ಬಿಸಿನೆಸ್’ ಮಾದರಿಯಲ್ಲಿ ‘ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್’ ಪದ್ದತಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹೊಸ ಆದೇಶದ ಮೂಲಕ ಜಾರಿಗೊಳಿಸಿದೆ.
 
ಭೂಪರಿಶೋಧನಾ ಸಮಿತಿಯಲ್ಲಿ(LAC) 10 ಎಕರೆವರೆಗಿನ ಭೂಮಿ ಹಂಚಿಕೆಗೆ  ಪರಿಶೀಲನೆ ಅವಶ್ಯವಿಲ್ಲ ಎಂದು ಹೊಸ ಆದೇಶಸ್ಪಷ್ಟಪಡಿಸಿದೆ. ಹೂಡಿಕೆ ಪ್ರಸ್ತಾವನೆಗಳು  ಈಗ ನೇರವಾಗಿ ರಾಜ್ಯಮಟ್ಟದ  ಸಮಿತಿಯ ಮುಂದ ಮಂಡನೆಯಾಗಲಿವೆ.
 
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವಉದ್ಯಮಗಳಿಗೆ ಅಗತ್ಯವಿರುವ ಭೂಮಿಯನ್ನು ಸುಲಭವಾಗಿನೀಡುವುದು ಇದರ ಮುಖ್ಯ ಉದ್ದೇಶ. ಸುಲಲಿತ ವ್ಯವಹಾರದಲ್ಲಿದೇಶದಲ್ಲೇ ಮುಂಚೂಣಿ ಸ್ಥಾನದಲ್ಲಿರುವ ರಾಜ್ಯಕ್ಕೆ ಹೆಚ್ಚು ಹೆಚ್ಚುಉದ್ಯಮಗಳನ್ನುಆಕರ್ಷಿಸಲು ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಶಿಕ್ಷಣ ಕುರಿತ ದೂರು ಪರಿಶೀಲನೆಗೆ ಪ್ರತ್ಯೇಕ ಆಯೋಗ: ಸಚಿವ ಬಿ.ಸಿ.ನಾಗೇಶ್‌
 
10 ಎಕರೆಗಿಂತ ಕಡಿಮೆ ವಿಸ್ತೀರ್ಣದ ಭೂಮಿಗಾಗಿ ಜಮೀನು ಪರಿಶೀಲನಾ ಸಮಿತಿಗೆ ಹೋಗುವ ಬದಲು ನೇರವಾಗಿ ಜಿಲ್ಲಾ ಅಥವಾ ರಾಜ್ಯ ಮಟ್ಟದ ಅನುಮೋದನಾ ಸಮಿತಿಯಲ್ಲಿ ಅನುಮೋದನೆ ನೀಡುವುದರಿಂದ ಪ್ರಸ್ತಾವನೆಗಳಿಗೆ ತ್ವರಿತವಾಗಿ ಅನುಮೋದನೆ ದೊರೆಯುತ್ತದೆ. ಇದರಿಂದ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮದಾರರಿಗೆ ಅನುಕೂಲವಾಗುವುದು ಎಂದು ಬೃಹತ್‌ ಮತ್ತುಮಧ್ಯಮ ಕೈಗಾರಿಕೆಗಳ ಸಚಿವ ಡಾ. ಮುರುಗೇಶ ಆರ್‌. ನಿರಾಣಿ ಹರ್ಷವ್ಯಕ್ತಪಡಿಸಿದರು. 
 
ಬರುವ ನವೆಂಬರ್ 2,3 ಮತ್ತು 4 ರಂದು ನಡೆಯಲಿರುವಮಹತ್ವಾಕಾಂಕ್ಷೆಯ ಜಾಗತಿಕ ಹೂಡಿಕೆದಾರರ ಸಭೆ (ಜಿಐಎಂ) ಪೂರ್ವಭಾವಿಯಾಗಿ ಈ ನಿರ್ಧಾರವನ್ನು ಇಲಾಖೆ ಕೈಗೊಂಡಿದೆ. ಆದಾಗ್ಯೂ, ಹತ್ತು ಎಕರೆಗಿಂತ ಹೆಚ್ಚಿನ ವಿಸ್ತೀರ್ಣ ಮತ್ತು ರೂ.15 ಕೋಟಿಯಿಂದ ರೂ.500 ಕೋಟಿವರೆಗಿನ ಹೂಡಿಕೆಯಪ್ರಸ್ತಾವನೆಗಳನ್ನು ಭೂ ಲೆಕ್ಕ ಪರಿಶೋಧನಾ ಸಮಿತಿಯ ಮುಂದೆಮಂಡಿಸಬಹುದು, ಇಲ್ಲಿ ತೆರವುಗೊಳಿಸಿದ ನಂತರ, ಅಂತಿಮಅನುಮೋದನೆಗಾಗಿ ರಾಜ್ಯ ಮಟ್ಟದ ಏಕ ಗವಾಕ್ಷಿ ತೆರವು ಸಮಿತಿಯಮುಂದೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು. 
 
ಹೊಸ ಆದೇಶ ಏಕೆ? 
ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿಗಳ ಬೆಳವಣಿಗೆಹಿತದೃಷ್ಟಿಯಿಂದ 10 ಎಕರೆವರೆಗೆ ಜಮೀನು ಮಂಜೂರಾತಿ ಕೋರಿಸಲ್ಲಿಸುವ ಬಂಡವಾಳ ಹೂಡಿಕೆ ಪ್ರಸ್ತಾವನೆಗಳನ್ನು ನೇರವಾಗಿರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯ ಮುಂದೆಅನುಮೋದನೆಗಾಗಿ ಮಂಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಭೂಮಿಪರಿಶೋಧನಾ ಸಮಿತಿಯ (LAC) ಅನುಮೋದನೆಗಾಗಿ ಇನ್ನು ಮುಂದೆತಿಂಗಳುಗಟ್ಟಲೆ ಕಾಯಬೇಕಾಗಿಲ್ಲ. ರಾಜ್ಯದಲ್ಲಿ 10 ಎಕರೆ ಜಮೀನು ಮಂಜೂರು ಕೋರುವ ಕೈಗಾರಿಕೆಗಳುಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳಾಗಿದ್ದು, ಇವುಗಳನ್ನುತ್ವರಿತಗತಿಯಲ್ಲಿ ಅನುಮೋದನೆ ನೀಡಬೇಕೆಂಬುದು ರಾಜ್ಯದ ಕೈಗಾರಿಕಾಉದ್ದಿಮೆದಾರರ ಸಂಘ ಸಂಸ್ಥೆಗಳ ಬಹುದಿನಗಳ ಬೇಡಿಕೆಯಾಗಿತ್ತು. 
 
ಈವೆರೆಗಿನ ಪ್ರಕ್ರಿಯೆ ಹೇಗಿತ್ತು?
ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ/ ರಾಜ್ಯಮಟ್ಟದ ಏಕಗವಾಕ್ಷಿಅನುಮೋದನಾ ಸಮಿತಿ/ ರಾಜ್ಯ ಉನ್ನತ ಮಟ್ಟದ ಅನುಮೋದನಾಸಮಿತಿ ಸಭೆಗಳ ಮುಂದೆ ಬಂಡವಾಳ ಹೂಡಿಕೆ ಪ್ರಸ್ತಾವನೆಗಳನ್ನುಮಂಡಿಸುವ ಮೊದಲು ಜಮೀನು ಪರಿಶೀಲನಾ ಸಮಿತಿ ಮುಂದೆಪ್ರಸ್ತಾವನೆ ಮಂಡಿಸಬೇಕಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ
ಬೆಳಗಾವಿ ಅಧಿವೇಶನ: 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು